ಬೆಂಗಳೂರು:ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳ ಪರಿಸರದಲ್ಲಿ ದಶಕದ ಹಿಂದೆ ನಡೆದಿದ್ದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ನ್ಯಾಯ ಸಿಗಲಿಲ್ಲ ಎಂದು ಹನ್ನೊಂದು ವರ್ಷಗಳ ಬಳಿಕ ಇತ್ತೀಚೆಗೆ ಕೆಲವು ದಿನಗಳಿಂದ ಮತ್ತೆ ಈ ಪ್ರಕರಣ ಮುನ್ನೆಲೆಗೆ ಬಂದಿದೆ.
ನಾವು ಸೌಜನ್ಯಾ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವ ಸಲುವಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹಲವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳಿಂದ ಸದ್ದು ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನೆ ನಡೆಸುತ್ತಿರುವುದಾಗಿ ಉಡುಪಿ ಜಿಲ್ಲೆಯ ಪತ್ರಕರ್ತ ವಸಂತ್ ಗಿಳಿಯಾರ್ ಎನ್ನುವವರು, ದಕ್ಷಿಣಕನ್ನಡ ಜಿಲ್ಲೆಯ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಎನ್ನುವವರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:ಚಂದ್ರನಿಂದ ಬಂದ ಮೊದಲ ಚಿತ್ರ ಎಂದು ‘ಚಾಯ್​ವಾಲಾ’ನ ಫೋಟೋ ಹಂಚಿಕೊಂಡ ನಟ ಪ್ರಕಾಶ್ ರಾಜ್!
ಈ ಮಧ್ಯೆ ಉಡುಪಿ ಜಿಲ್ಲೆಯ ಸಾಮಾಜಿಕ ಹೋರಾಟಗಾರ ದಿನೇಶ್ ಗಾಣಿಗ ಎಂಬವರು ಪತ್ರಕರ್ತ ವಸಂತ್ ಗಿಳಿಯಾರ್ ವಿರುದ್ಧ ಆರೋಪ ಮಾಡಿದ್ದಾರೆ. ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪತ್ರಿಕೆಯಲ್ಲಿ 2016ರಲ್ಲಿ ವಸಂತ್ ಗಿಳಿಯಾರ್ ಐದು ಲಕ್ಷ ರೂ. ಪಡೆದಿದ್ದರು. ಅಲ್ಲದೆ ಆ ವರದಿ ಇದ್ದ ಪತ್ರಿಕೆ ಇನ್ನೊಬ್ಬರಿಗೆ ತಲುಪಿಸಿದ್ದೂ ಗೊತ್ತು ಎಂದು ದಿನೇಶ್ ಗಾಣಿಗ ಆರೋಪಿಸಿದ್ದಾರೆ.
ಇದನ್ನೂ ಓದಿ:ಅಮ್ಮನೂ ಕನ್ನಡ ಕಲಿತು ಬರೆಯುವಂತೆ ಮಾಡಿದ ‘ಮುಂಗಾರು ಮಳೆ’ ನಟಿ ಪೂಜಾ ಗಾಂಧಿ!
ಈ ಹಿನ್ನೆಲೆಯಲ್ಲಿ ಇಬ್ಬರ ಮಧ್ಯೆ ನಡೆದ ಸಂಘರ್ಷ ಇದೀಗ ಆಣೆ-ಪ್ರಮಾಣದ ಹಂತಕ್ಕೆ ತಲುಪಿದೆ. ಉಡುಪಿ ಜಿಲ್ಲೆಯ ಕೋಟತಟ್ಟು ಪಡುಕೆರೆ ನಾಗಬನ ಹಾಗೂ ಯಕ್ಷಿ ಸನ್ನಿಧಾನದಲ್ಲಿ ಇವರಿಬ್ಬರು ತೆಂಗಿನಕಾಯಿ ಮುಟ್ಟಿ ಪ್ರಮಾಣ ಮಾಡಿದ್ದು, ಇಬ್ಬರಲ್ಲಿ ಯಾರು ಸರಿ ಎಂದು ದೇವರೇ ತೋರಿಸಲಿ ಎಂದು ಕೇಳಿಕೊಂಡಿದ್ದಾರೆ.
ಪತಿ ಯಾವುದೇ ಕ್ಷಣದಲ್ಲೂ ನಮ್ಮನ್ನು ಕೊಲ್ಲಬಹುದು: ಮಕ್ಕಳಿಬ್ಬರ ಸಹಿತ ವಿಡಿಯೋ ಮಾಡಿ ಸಹಾಯ ಕೇಳಿದ ಪತ್ನಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 9 =
Remember me
