ಬೆಂಗಳೂರು:2016ರ ಆಗಸ್ಟ್ ತಿಂಗಳಿನಲ್ಲಿ ಕೆಪಿಎಸ್ಸಿ ಸಂಸ್ಥೆಯ ಅಧ್ಯಕ್ಷ ಹುದ್ದೆಗೆ ಶ್ಯಾಮ್ ಭಟ್ ನೇಮಕವಾಗಿದ್ದುದನ್ನು ವಿರೋಧಿಸಿ ಎಎಪಿ ನಾಯಕರು ರಾಜಭವನದ ಬಳಿ ಹೋರಾಟ ನಡೆಸಿದ್ದು, 41ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿತ್ತು. ಇಂದು ನ್ಯಾಯಾಲಯ ಈ ಬಂಧನ ವಾರಂಟ್ ಅನ್ನು ವಾಪಸ್ ತೆಗೆದುಕೊಂಡಿದೆ ಎಂದು ಪಕ್ಷದ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ತಿಳಿಸಿದ್ದಾರೆ.
ಈ ಹಿಂದೆ ಕಡು ಭ್ರಷ್ಟ ಶ್ಯಾಮ್ ಭಟ್ ಸಾರಿಗೆ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ , ಕೆ ಐ ಎ ಡಿ ಬಿ ಮುಂತಾದ ಸಂಸ್ಥೆಗಳಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ಮಾಡಿ ನಂತರ ಕೆಪಿಎಸ್ಸಿ ಆಯೋಗಕ್ಕೆ ಅಧ್ಯಕ್ಷರಾಗಿ ನೇಮಕವಾಗಿದ್ದರು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ಭ್ರಷ್ಟ ಅಧಿಕಾರಿಗಳನ್ನು ಪೋಷಣೆ ಮಾಡಿಕೊಂಡು ಸಂಪೂರ್ಣ ಲೋಕಾಯುಕ್ತವನ್ನೇ ಮುಚ್ಚಿ ಹಾಕಿದ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ. ಇಂತಹ ಭ್ರಷ್ಟರ ವಿರುದ್ಧ ಹೋರಾಟ ಮಾಡಿದ ನಮ್ಮಂತಹ ನಾಯಕರುಗಳಿಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸ ಮಾಡಿದ್ದು ಎಲ್ಲರಿಗೂ ತಿಳಿದಿರುವ ವಿಷಯವೇ.ಭ್ರಷ್ಟರ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಅಲ್ಲದೆ, ಆ.31ರಂದು ಶನಿವಾರ ನ್ಯಾಯಾಲಯ ನಮ್ಮ ನಾಯಕರುಗಳಿಗೆ ಜಾಮೀನು ಮಂಜೂರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.
ಕಳೆದ ಎಂಟು ವರ್ಷಗಳಿಂದ ಇಂದಿಗೂ ಸಹ ಹೋರಾಟಗಾರರು ನ್ಯಾಯಾಲಯಗಳಲ್ಲಿ ಅಲೆಯುವಂತಹ ಪರಿಸ್ಥಿತಿ ಬಂದಿದೆ. ಶ್ಯಾಮ್ ಭಟ್ ರಂತಹ ಅನೇಕ ಕಡು ಭ್ರಷ್ಟ ಅಧಿಕಾರಿಗಳು ಸಿದ್ದರಾಮಯ್ಯನವರ ಆಶ್ರಯದಲ್ಲಿ ಸುರಕ್ಷಿತವಾಗಿದ್ದಾರೆ. ಈಗ ಇದೆ ಸಿದ್ದರಾಮಯ್ಯನವರು ಮೂಡ ದಂತಹ ಹಗರಣಗಳಲ್ಲಿ ಸಿಲುಕಿಕೊಂಡು ತಮ್ಮ ಪದವಿಯನ್ನೇ ಕಳೆದುಕೊಳ್ಳುವಂತಹ ಹೀನಾಯ ಸ್ಥಿತಿಗೆ ತಲುಪಿದ್ದಾರೆ. ಮುಂಬರುವ ದಿವಸಗಳಲ್ಲಿ ಕರ್ನಾಟಕದ ಜನತೆ ಭ್ರಷ್ಟಾಚಾರಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ ಎಂಬ ನಂಬಿಕೆ ನಮಗಿದೆ ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight − 3 =
Remember me
