ಬೆಂಗಳೂರು: ನಗರದ ಸಿಲ್ಕ್ ಬೋರ್ಡ್ ಮೇಲ್ಸೇತುವೆ ಸಂಚಾರಕ್ಕೆ ಮುಕ್ತಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಲವಾಗಿದ್ದು, ವಾಹನ ಸವಾರರು ನಿತ್ಯವೂ ಕಿಲೊಮೀಟರ್ ಗಟ್ಟಲೆ ಸಂಚಾರ ದಟ್ಟಣೆ ಯಲ್ಲಿ ಸಿಲುಕುವಂತಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ನಗರ ಸಂಘಟನಾ ಕಾರ್ಯದರ್ಶಿ ಅಶೋಕ್ ಮೃಂತ್ಯುಂಜಯ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸಿಲ್ಕ್ ಬೋರ್ಡ್ ಬಳಿ ನಿರ್ಮಿಸಿರುವ ಮೇಲ್ಸೇತುವೆ ಬಳಿ ಆಮ್ ಆದ್ಮಿ ಪಾರ್ಟಿಮುಖಂಡ ಅಶೋಕ್ ಮೃಂತ್ಯುಂಜಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
2019ರಲ್ಲಿ ಪೂರ್ಣಗೊಳ್ಳಬೇಕಿದ್ದ ಮೇಲ್ಸೇತುವೆ ಕಾಮಗಾರಿ, ಕಳೆದ ಹದಿನೈದು ದಿನಗಳ ಹಿಂದೆ ಕಾಮಗಾರಿ ಪೂರ್ಣಗೊಂಡಿದೆ. ಈಗಲೂ ಬೆಂಗಳೂರು ದಕ್ಷಿಣದಿಂದ ಪಶ್ಚಿಮ ಭಾಗಕ್ಕೆ, ಎಲೆಕ್ಟ್ರಾನಿಕ್ ಸಿಟಿ, ಮಡಿವಾಳ ಕಡೆ ಹೊರಡುವ ವಾಹನ ಸಂಚಾರರು ನಿತ್ಯವೂ ಸಂಚಾರ ದಟ್ಟಣೆಯಿಂದ ಪರದಾಡುವಂತಾಗಿದೆ ಎಂದು ಆರೋಪಿಸಿದರು.
ಸಿ.ಎಂ. ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ವಾರದೊಳಗೆ ಕ್ರಮವಹಿಸದಿದ್ದರೆ ಸಾರ್ವಜನಿಕರೊಂದಿಗೆ ಕೂಡಿ ನಾವೇ ಮೇಲ್ಸೇತುವೆಯನ್ನು ಸಂಚಾರ ಮುಕ್ತಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮೇಲ್ಸೇತುವೆ ಜನರ ಅನುಕೂಲಕ್ಕಾಗಿ ನಿರ್ಮಿಸಿದ್ದರೂ ಸಕಾಲಕ್ಕೆ ಸಂಚಾರ ಮುಕ್ತ ಮಾಡದೆ ಜನರ ಹಣ ವ್ಯರ್ಥ ಮಾಡಲಾಗುತ್ತಿದೆ. ಬ್ರ್ಯಾಂಡ್ ಬೆಂಗಳೂರು ಜನರಿಗೆ ಅನುಕೂಲ ಮಾಡಬೇಕೆ ವಿನಃ ನಷ್ಟವನ್ನಲ್ಲ. ಸಂಚಾರ ದಟ್ಟಣೆಯಿಂದ ಆಂಬುಲೆನ್ಸ್ ಸಹ ಕನಿಷ್ಠ ಇಪ್ಪತ್ತು ನಿಮಿಷ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಜನರ ಸಮಯ ಮತ್ತು ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ. ಮೇಲ್ಸೇತುವೆ ಸಂಚಾರ ಮುಕ್ತಗೊಳಿಸಿ, ಆದಷ್ಟು ಬೇಗ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಮತ್ತಿತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
