ಬಳ್ಳಾರಿ: ಕರೊನಾ ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಕುರುಗೋಡು ತಾಲೂಕಿನ ಬಾದನಹಟ್ಟಿಯಲ್ಲಿ ನಡೆದಿದೆ. ಭೀಮಕ್ಕ ಮೃತರು. ಇವರ ಸಾವು ಈಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದನ್ನೂ ಓದಿ:ಒಂದೇ ಕುಟುಂಬದ ಮೂವರ ದುರ್ಮರಣ; ಗಂಗಾಪುರ ಗೇಟ್ ಬಳಿ ಬೈಕ್‌ಗೆ ಕಾರು ಡಿಕ್ಕಿ
ಭೀಮಕ್ಕ ಕೊವಿಡ್​-19ಕ್ಕೆ ಸಂಬಂಧಪಟ್ಟ ಕರ್ತವ್ಯದಲ್ಲಿದ್ದರು. ತೀವ್ರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅನಾರೋಗ್ಯಕ್ಕೆ ಒಳಗಾಗಿ ಮೃತಪಟ್ಟಿದ್ದಾರೆಂದು ಕುಟುಂಬದವರು ಆರೋಪ ಮಾಡುತ್ತಿದ್ದಾರೆ. ಈ ಮಧ್ಯೆ ಕರೊನಾ ಸೋಂಕು ತಗುಲಿಯೇ ಮೃತಪಟ್ಟಿರಬಹುದಾ ಎಂಬ ಆತಂಕ ಕಾಡುತ್ತಿದೆ.
ಭೀಮಕ್ಕ ಅವರ ಮೃತದೇಹಕ್ಕೆ ಕರೊನಾ ಟೆಸ್ಟ್​ ಮಾಡಲಾಗಿದ್ದು, ವರದಿ ಇನ್ನೂ ಬಂದಿಲ್ಲ. ವರದಿಗಾಗಿ ಕಾಯುತ್ತಿರುವ ಜಿಲ್ಲಾಡಳಿತ ಇನ್ನೂ ಏನನ್ನೂ ನಿಖರವಾಗಿ ಹೇಳಿಲ್ಲ.
ಇದನ್ನೂ ಓದಿ:ಶ್ರೀನಿವಾಸಪುರದ ಆಲವಾಟ ಕೆರೆಗೆ ಕೆ.ಸಿ. ವ್ಯಾಲಿ ನೀರು
ಭೀಮಕ್ಕನವರು 2005ರಿಂದಲೂ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 50 ಲಕ್ಷ ರೂ. ಆರೋಗ್ಯ ವಿಮೆ ಕೊಡಬೇಕು ಎಂದು ಅಂಗನವಾಡಿ ಕಾರ್ಯರ್ತೆಯರ ಸಂಘ ಪಟ್ಟು ಹಿಡಿದಿದೆ.
ಇದನ್ನೂ ಓದಿ:ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಚೇತರಿಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 5 =
Remember me
