ಉಡುಪಿ: ವಿದ್ಯೋದಯ ಪಪೂ ಕಾಲೇಜಿನ ವಿದ್ಯಾರ್ಥಿನಿ ಅಭಿಜ್ಞಾ ರಾವ್ ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ.
ಪ್ರತಿದಿನದ ಪಾಠವನ್ನು ಆಯಾ ದಿನವೇ ಅಭ್ಯಾಸ ಮಾಡುತ್ತಿದ್ದೆ. ಪಿಸಿಎಂಸಿ ಹಾಗೂ ಸಂಸ್ಕೃತದಲ್ಲಿ 100 ಅಂಕ ಹಾಗೂ ಇಂಗ್ಲಿಷ್‌ನಲ್ಲಿ 96 ಅಂಕ ಲಭಿಸಿದೆ. ಕರೊನಾ ಹಿನ್ನಲೆಯಲ್ಲಿ ಇಂಗ್ಲಿಷ್ ಪರೀಕ್ಷೆ ಮುಂದೂಡಲಾಗಿತ್ತು. ಇದು ಅನುಕೂಲವಾಯಿತು. ಹೆಚ್ಚು ಓದಲು ಸಮಯ ಸಿಕ್ಕಂತಾಗಿತ್ತು. ಮುಂದೆ ಕಂಪ್ಯುೂಟರ್ ಇಂಜಿನಿಯರ್ ಆಗುವ ಬಯಕೆ ಇದೆ. ಜೆಇಇ ಪರೀಕ್ಷೆ ಪಾಸಾಗಿದ್ದೇನೆ. ಸಿಇಟಿ ಪರೀಕ್ಷಾ ಫಲಿತಾಂಶ ಅಂತಿಮ ನಿರ್ಧಾರ ಮಾಡುತ್ತೇನೆ. ಅಕ್ಕ ರಕ್ಷಾ ಎನ್‌ಐಟಿಕೆಯಲ್ಲಿ ಕೆಮಿಕಲ್ ಇಂಜಿನಿಯರ್ ಕಲಿತಿರುವುದರಿಂದ ಅಲ್ಲಿಗೆ ಸೇರುವುದಕ್ಕೆ ಮೊದಲ ಆದ್ಯತೆ. ಅಧ್ಯಾಪಕರ, ಹೆತ್ತವರ ಸಹಕಾರ ಮತ್ತು ಕಾಲೇಜಿನಲ್ಲಿರುವ ಉತ್ತಮ ಸೌಲಭ್ಯದಿಂದ ಈ ಫಲಿತಾಂಶ ಪಡೆಯಲು ಸಾಧ್ಯವಾಗಿದೆ ಎಂದು ವಿಜಯವಾಣಿಯೊಂದಿಗೆ ಸಂತಸ ಹಂಚಿಕೊಂಡರು.
ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದ ಅಭಿಜ್ಞಾ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಹೈಸ್ಕೂಲ್ ಅಭ್ಯಾಸ ಮಾಡಿ, ಉಡುಪಿ ವಿದ್ಯೋದಯ ಕಾಲೇಜಿನಲ್ಲಿ ಪಿಯುಸಿಗೆ ಸೇರಿದ್ದರು. ಈಕೆ ನಿವೃತ್ತ ಪ್ರಾಂಶುಪಾಲ ದಿ. ವಿಠಲ ರಾವ್ ಮತ್ತು ಆಶಾ ರಾವ್ ಪುತ್ರಿ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:eleven + nineteen =
Remember me
