ಬೆಂಗಳೂರು:ಸ್ಯಾಂಡಲ್​ವುಡ್​​ ನಟ ರೆಬೆಲ್ ಸ್ಟಾರ್ ಅಂಬರೀಶ್ ಸುಪುತ್ರ ಅಭಿಷೇಕ್ ಅಂಬರೀಶ್ ವಿವಾಹ ಸಿದ್ಧತೆ ಭರ್ಜರಿಯಾಗಿ ನಡೆಯುತ್ತಿದೆ. ಅರಿಶಿನ ಶಾಸ್ತ್ರದ ಸಂಭ್ರಮದಲ್ಲಿರುವ ನಟ ಅಭಿಷೇಕ್ ಫೋಟೋ ಸೋಶಿಯಲ್​​​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಮಂಡ್ಯದ ಮರಿ ಗೌಡ ಅಭಿಷೇಕ್ ಅಂಬರೀಶ್, ಫ್ಯಾಷನ್ ಡಿಸೈನರ್ ಅವಿವಾ ಬಿದ್ದಪ್ಪ ಜೋಡಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸಿ, ಇದೀಗ ಮದುವೆ ಎಂಬ ಮುದ್ರೆ ಒತ್ತಲು ರೆಡಿಯಾಗಿದ್ದಾರೆ.

ಜೂನ್ 5ರಂದು (ಸೋಮವಾರ) ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗಲಿದೆ. ಜೂನ್ 7ರಂದು ಭರ್ಜರಿಯಾಗಿ ಆರತಕ್ಷತೆ ಸಮಾರಂಭ ನಡೆಯಲಿದೆ.

ಈಗಾಗಲೇ ಮದುವೆ ಶಾಶ್ತ್ರಗಳು ನಡೆಯುತ್ತಿವೆ. ಬಿಳಿ ಬಣ್ಣದ ಉಡುಗೆಯಲ್ಲಿ ಅಭಿಷೇಕ್ ಅರಿಶಿನ ಶಾಸ್ತ್ರದಲ್ಲಿ ಮಿಂಚಿದ್ದಾರೆ. ಮನೆ ಕೂಡ ಅದ್ದೂರಿಯಾಗಿ ಅಲಂಕರಿಸಲಾಗಿದೆ.

ಅಭಿಷೇಕ್ ಅಂಬರೀಶ್ ಜೊತೆ ಅವಿವಾ ಡಿಸೆಂಬರ್ 11ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇವರಿಬ್ಬರು ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಗ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗುತ್ತಿದ್ದಾರೆ.

ಅಭಿಷೇಕ್ ಅಂಬರೀಶ್​ ಹಾಗೂ ಅವಿವಾ ಬಿದ್ದಪ್ಪ ಮದುವೆ ಆಮಂತ್ರಣ ಪತ್ರಿಕೆಯನ್ನು ವಿಶೇಷವಾಗಿ ಸಿದ್ಧಪಡಿಸಲಾಗಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ,  ರಜನಿಕಾಂತ್, ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಇದೇ ವಿವಾಹ ಪತ್ರಿಕೆಯನ್ನು ಸುಮಲತಾ ಹಾಗೂ ಅಭಿಷೇಕ್ ತಲುಪಿಸಿದ್ದಾರೆ.

ಅಭಿಷೇಕ್ ಅಂಬರೀಶ್ ಮದುವೆ ನಿಮಿತ್ತ ಯಾವ್ಯಾವ ದಿನ ಯಾವ್ಯಾವ ಕಾರ್ಯಕ್ರಮ? ಮದುವೆ ಸಮಾರಂಭಕ್ಕೆ ಬರುವ ಅತಿಥಿಗಳು ಯಾರು? ಎನ್ನುವ ಕುತೂಹಲ ಮೂಡಿದೆ
ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ: ಪ್ರತಾಪ್ ಸಿಂಹ


ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four × 1 =
Remember me
