ಬೆಂಗಳೂರು:ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಮುಂದುವರಿದಿದ್ದು, ನದಿ ಪಾತ್ರದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ನದಿಗಳಿಗೆ ಜೀವಕಳೆ ಬಂದಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಲಿಂಗನಮಕ್ಕಿ, ಭದ್ರಾ, ತುಂಗಾ ಜಲಾಶಯಗಳ ನೀರಿನ ಒಳ ಹರಿವು ಹೆಚ್ಚಿದೆ. ಲಿಂಗನಮಕ್ಕಿಗೆ 20,857 ಕ್ಯೂಸೆಕ್​, ಭದ್ರಾ ಡ್ಯಾಂಗೆ 10,958 ಕ್ಯೂಸೆಕ್​, ಗಾಜನೂರು ತುಂಗಾ ಜಲಾಶಯಕ್ಕೆ 15 ಸಾವಿರ ಕ್ಯೂಸೆಕ್​ ನೀರು ಹರಿದುಬರುತ್ತಿದೆ. ಹೊಸನಗರ ತಾಲೂಕಿನಲ್ಲಿ ಅತ್ಯಧಿಕ (169.90 ಮಿಮೀ) ಮಳೆಯಾಗಿದೆ. ಶರಾವತಿ ಕಣಿವೆ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಜೋಗ ಜಲಪಾತ ಮೈದುಂಬಿಕೊಂಡು ಧುಮ್ಮಿಕ್ಕುತ್ತಿದೆ.
ತ್ರಿ-ವೇ-ಣಿ ಸಂಗ-ಮ-ದ-ಲ್ಲಿ ನೀರಿ-ನ ಪ್ರಮಾ-ಣ ಏರಿ-ಕೆ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ ಕಂಡಿದೆ. 2859 ಅಡಿ ಸಾಮರ್ಥ್ಯವಿರುವ ಹಾರಂಗಿ ಜಲಾಶಯದಲ್ಲಿ ಬುಧವಾರ 2829.35 ಅಡಿ ನೀರು ಸಂಗ್ರಹವಾಗಿದೆ. ಮಡಕೇರಿಯ ಹಳೇ ಖಾಸಗಿ ಬಸ್​ ನಿಲ್ದಾಣ ಸಮೀಪ ಮಣ್ಣು ಜರಿದು ಕೆಸರಿನ ನೀರು ಹರಿಯಿತು. ಕೊಡಗು ಜಿಲ್ಲೆಯಲ್ಲಿ ಜೂ.23 ರಿಂದ ಆಗಸ್ಟ್​ 16 ವರೆಗೆ ಭಾರಿ ವಾಹನ ಸಂಚಾರ ರ್ನಿಬಂಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್​ ಆದೇಶ ಹೊರಡಿಸಿದ್ದಾರೆ.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುತ್ತಿದ್ದು, ಸಮುದ್ರ ಪ್ರುಬ್ಧವಾಗಿದೆ. ದಡದತ್ತ ಬಲವಾದ ಗಾಳಿ ಬೀಸುತ್ತಿದೆ. ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದೆ.
5 ದಿನ ಯೆಲ್ಲೋ ಅರ್ಲಟ್​ಮುಂಗಾರು ಮಾರುತಗಳು ಚುರುಕಾದ ಪರಿಣಾಮ ರಾಜ್ಯದ ವಿವಿಧೆಡೆ ಅಬ್ಬರಿಸುತ್ತಿರುವ ಮಳೆ ಮುಂದಿನ ಐದು ದಿನ ಮುಂದುವರಿಯಲಿದೆ. ಉಡುಪಿ, ದಣ ಕನ್ನಡ, ಉತ್ತರ ಕನ್ನಡದಲ್ಲಿ ಜೂ,17,18ರಂದು ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್​ ಅರ್ಲಟ್​ ಘೋಷಿಸಲಾಗಿದೆ. ಈ ಭಾಗಗಳಲ್ಲಿ 19ರಿಂದ ಮುಂದಿನ ಮೂರು ದಿನ ಯೆಲ್ಲೋ ಅರ್ಲಟ್​ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನದಲ್ಲಿ ಮುಂದಿನ 24 ಗಂಟೆ ಆರೆಂಜ್​ ಅರ್ಲಟ್​ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡದಲ್ಲಿ 17ರಂದು ಯೆಲ್ಲೋ ಅರ್ಲಟ್​ ಇದೆ. ದಣ ಒಳನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಕೊಚ್ಚಿಕೊಂಡು ಹೋದ ಪಿಕಪ್​ ವಾಹನಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಮಳೆಯಿಂದ ಉಕ್ಕಿ ಹರಿಯುತ್ತಿರುವ ಜಪಾವತಿ ನದಿ ದಡದಲ್ಲಿ ಸಾಗುತ್ತಿದ್ದ ಪಿಕಪ್​ ವಾಹನ ಆಕಸ್ಮಿಕವಾಗಿ ನದಿಗೆ ಉರುಳಿ ಕೊಚ್ಚಿಕೊಂಡು ಹೋಗಿದೆ. ವಾಹನದಲ್ಲಿದ್ದ ಐವರು ಜಿಗಿದು ಪಾರಾಗಿದ್ದಾರೆ. ಸಂಜೆಯಾದರೂ ಪಿಕಪ್​ ಪತ್ತೆಯಾಗಿಲ್ಲ. ವಾಹನ ಕನ್ನೆಹಳ್ಳಿ ಸಮೀಪದ ಕೋಗರವಳ್ಳಿಯ ರೆಸಾರ್ಟ್​ನದ್ದು ಎನ್ನಲಾಗಿದೆ. ಹಾಸನ ಜಿಲ್ಲೆ ಅರಕಗೂಡು ತಾಲೂಕಿನ ಕೇರಳಾಪುರದಲ್ಲಿ ಬುಧವಾರ ಕಾವೇರಿ ಹೊಳೆ ಪ್ರವಾಹಕ್ಕೆ ಸಿಲುಕಿದ್ದ ಎರಡು ಎಮ್ಮೆಗಳನ್ನು ಅರಕಲಗೂಡು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿ-ಸಿ, ದೋಣಿ ಮೂಲಕ -ದ–ಡ-ಕ್ಕೆ ಸಾಗಿ-ಸಿ-ದ-ರು.
ಶಿರವಾಡದಲ್ಲಿ ಕೃತಕ ನೆರೆಕಾರವಾರ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳಲ್ಲಿ ನೀರು ತುಂಬಿ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಶಿರವಾಡ&ಕಡವಾಡ ನಡುವೆ ಇರುವ ಮಕೇರಿ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಕಾಮಗಾರಿ ನಡೆಯುತ್ತಿರುವ ಪ್ರದೇಶದ ಇಕ್ಕೇಲಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು.
ಮೂರು ಸೇತುವೆ ಮುಳುಗಡೆಮಹಾರಾಷ್ಟ್ರದಲ್ಲಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ಮೂಡಲಗಿ ತಾಲೂಕಿನ ಸುಣಧೋಳಿ, ಕಮಲದಿನ್ನಿ, ಅವರಾದಿ ಸೇತುವೆಗಳು ಬುಧವಾರ ಮುಳುಗಡೆಯಾಗಿವೆ. ಬೆಳಗಾವಿ ಜಿಲ್ಲಾದ್ಯಂತ ಬುಧವಾರ ಬೆಳಗ್ಗೆಯಿಂದ ಮಳೆ ಅಬ್ಬರ ಮುಂದುವರಿದಿದ್ದು, ಜಿಲ್ಲೆಯ ಕೃಷ್ಣಾ ಮತ್ತು ಟಪ್ರಭಾ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲಿದೆ. ಹೀಗಾಗಿ ಸಣ್ಣಪುಟ್ಟ ನದಿಗಳು, ಹಳ್ಳ&ಕೊಳ್ಳಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದ್ದು, ನದಿ ತಟದ ಪ್ರದೇಶಗಳಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 10 =
Remember me
