ಬೆಂಗಳೂರು :ರಾಜ್ಯಪಾಲರ ಕಚೇರಿಯನ್ನ ದುರುಪಯೋಗ ಪಡಿಸಿಕೊಳ್ಳುವ ಮೂಲಕ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ರಾಜಕೀಯವಾಗಿ ಮಟ್ಟಹಾಕಲು ಬಿಜೆಪಿ ಕುತಂತ್ರ ನಡೆಸಿದ್ದು, ಅದರ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಹೋರಾಟ ನಡೆಸಲಿದ್ದೇವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಈ ನಡೆಯನ್ನ ತೀವ್ರವಾಗಿ ಖಂಡಿಸಿದ್ದಾರೆ.
ನಮ್ಮದು ಸುಭದ್ರ ಸರಕಾರ, ಬಹುಮತ ಪಡೆದು ನ್ಯಾಯಯುತವಾಗಿ 5 ಗ್ಯಾರಂಟಿಗಳನ್ನು ನೀಡುವ ಮೂಲಕ ಜನಪ್ರಿಯತೆಯನ್ನು ಗಳಿಸಿರುವ ಸರಕಾರ. ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಕಳಂಕರಹಿತವಾದ ರಾಜಕೀಯ ಜೀವನ. 5 ಗ್ಯಾರಂಟಿ ಯೋಜನೆಗಳ ಮೂಲಕ ಮನೆ ಮಾತಾಗಿರುವ ಸರಕಾರವನ್ನು ಅಸ್ಥಿರಗೊಳಿಸಬೇಕು ಹಾಗೂ ಹಿಂಬಾಗಿಲ ಮೂಲಕ ಅಧಿಕಾರ ಗ್ರಹಿಸಬೇಕು ಎನ್ನುವ ನಿಟ್ಟಿನಲ್ಲಿ ಬಿಜೆಪಿಗರು ರಾಜ್ಯಪಾಲರ ಕಚೇರಿಯನ್ನು ಬಳಸಿಕೊಂಡು ಕುತಂತ್ರ ನಡೆಸಿದ್ದಾರೆ. ಆ ಕುತಂತ್ರದ ವಿರುದ್ಧ ನಾವೆಲ್ಲರೂ ರಾಜಕೀಯವಾಗಿ ಹಾಗೂ ಕಾನೂನಾತ್ಮಕವಾಗಿ ಹೋರಾಟ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
