ಬೆಂಗಳೂರು:ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಜುಲೈ 12ರಂದು ಜಿಲ್ಲಾ ಉಸ್ತುವರಿ ಸಚಿವರ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದೆ.ಗ್ರಾಮೀಣ ಭಾಗದಿಂದ ನಗರ ಪ್ರದೇಶಗಳಿಗೆ ವ್ಯಾಸಂಗ ಮಾಡಲು ಬರುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಪಾಸ್ ಸಿಗುತ್ತಿಲ್ಲ, ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶಾತಿ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬ ಹಾಗೂ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಪ್ರಸ್ತುತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಬಿವಿಪಿ ಕರ್ನಾಟಕ ಉತ್ತರ ಪ್ರಾಂತ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ದಿನ ವಿದ್ಯಾರ್ಥಿಗಳು ನೂರಾರು ರೂಪಾಯಿಗಳನ್ನು ಖರ್ಚು ಮಾಡಿಕೊಂಡು ನಗರಕ್ಕೆ ಬರಬೇಕಾದ ಪರಿಸ್ಥಿತಿಯಿದೆ. ಅರ್ಜಿ ಸಲ್ಲಿಸಿದ ನಂತರವೂ ಪಾಸ್ ಪಡೆಯಲು ವಾರಗಳ ಕಾಲ ಕಾಯಬೇಕಾಗುತ್ತಿದೆ. ಇದರಿಂದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಒದಗಿಸಿಸಬೇಕು ಜತೆಗೆ ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬದಲಾವಣೆಯಂತೆ ಆಯೋಗ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ಸೀ ಶಕ್ತಿ ಯೋಜನೆ ಜಾರಿಯಿಂದ ಅತಿ ಹೆಚ್ಚು ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಆದರೆ, ಸರ್ಕಾರ ಬಸ್‌ಗಳ ಸಂಖ್ಯೆ ಹೆಚ್ಚು ಮಾಡದ ಪರಿಣಾಮ ವಿದ್ಯಾರ್ಥಿಗಳು ಬಸ್‌ಗಳಲ್ಲಿ ಓಡಾಡಲು ಸಮಸ್ಯೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಬಸ್ ಹೆಚ್ಚಳ ಮಾಡುವುದರ ಜತೆಗೆ ಯಾವ ಹಳ್ಳಿಗಳಿಗೆ ಬಸ್‌ಗಳ ಕೊರತೆಯಿದೆ ಎಂದು ತಿಳಿದು ಆ ಹಳ್ಳಿಗಳಿಗೆ ಶಾಲಾ ಕಾಲೇಜುಗಳ ಸಮಯಕ್ಕೆ ಅನುಗುಣವಾಗಿ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆಯಾ ಕಾಲಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಆದರೆ, ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾಗಿ 3 ತಿಂಗಳುಗಳು ಕಳೆದರು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಾತಿ ಸಿಗುತ್ತಿಲ್ಲ. ಈ ಸಮಯಲ್ಲಿ ವಿದ್ಯಾರ್ಥಿಗಳು ಎಲ್ಲಿ ಉಳಿದುಕೊಳ್ಳಬೇಕು ಎಂಬ ಸಾಮಾನ್ಯ ಜ್ಞಾನವೂ ಸರ್ಕಾರಗಳಿಗೆ ಇಲ್ಲದಂತಾಗಿದೆ ಎಂದು ಆರೋಪಿಸಿದ ಅವರು , ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಆಯ್ಕೆ ಪ್ರಕ್ರಿಯೆ ಮುಗಿಸಿ ತಕ್ಷಣ ಪ್ರವೇಶಾತಿ ಒದಗಿಸಿಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ವ್ಯಾಪ್ತಿಯಲ್ಲಿ 2500 ಹಾಸ್ಟೆಗಳಿದ್ದು, 2.50000 ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಿಕೊಡಬಹುದು. ಆದರೆ, ಸರ್ಕಾರದ ಬೇಜಾವಬ್ದಾರಿಯಿಂದ ಕಳೆದ ವರ್ಷ 90 ಸಾವಿರ ವಿದ್ಯಾರ್ಥಿಗಳು ವಸತಿ ನಿಲಯಗಳಿಂದ ವಂಚಿತರಾಗಿದ್ದಾರೆ.ಅಲ್ಲದೆ, ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ವಿದ್ಯಾರ್ಥಿ ವೇತನ ತಲುಪದಿರುವುದು ವಿಪರ್ಯಾಸ ಎಂದ ಅವರು,ಈ ನಿಟ್ಟಿನಲ್ಲಿ ಸರ್ಕಾರ ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಿಸಲು ಸೂಕ್ತ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.
ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ನಂಬಿಕೊಂಡು ಶಿಕ್ಷಣ ಪಡೆಯುತ್ತಿದ್ದಾರೆ. ಕಳೆದ ವರ್ಷ ವಿದ್ಯಾರ್ಥಿ ವೇತನ ಜಮೆಯಾಗದೆ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ. ಸರ್ಕಾರ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವುದು, ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದಿರುವುದು, ರೈತ ವಿದ್ಯಾನಿಧಿ ರದ್ದುಗೊಳಿಸಿರುವುದು ಹಾಗೂ ಇನ್ನಿತರ ವಿದ್ಯಾರ್ಥಿ ವೇತನವು ಸರಿಯಾಗಿ ವಿದ್ಯಾರ್ಥಿಗಳಿಗೆ ಜಮೆ ಮಾಡದೇ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಹಾಗಾಗಿ ಮುಖ್ಯ ಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರು ತಕ್ಷಣ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ಖಾತೆ ಜಮೆ ಮಾಡಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
