ಭ್ರಷ್ಟರಿಗೆ ದುಃಸ್ವಪ್ನವಾಗಿದ್ದ ಲೋಕಾಯುಕ್ತ ಸಂಸ್ಥೆಯ ಹಲ್ಲುಕಿತ್ತು ಪರ್ಯಾಯವಾಗಿ ಸ್ಥಾಪಿಸಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ಬರೋಬ್ಬರಿ ನಾಲ್ಕು ವರ್ಷ ತುಂಬಿದೆ. ಆದರೆ ಎಸಿಬಿ ದಾಖಲಿಸಿದ ಕೇಸ್​ಗಳಲ್ಲಿ ಈವರೆಗೆ ಒಬ್ಬರಿಗೂ ಶಿಕ್ಷೆ ಆಗದಿರುವುದು ಈ ತನಿಖಾದಳ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬುದಕ್ಕೆ ಸಾಕ್ಷಿ.
ಈವರೆಗೆ ಎಸಿಬಿಯಲ್ಲಿ ದಾಖಲಾದ 1,199 ಪ್ರಕರಣಗಳಲ್ಲಿ ಕೇವಲ 409ರಲ್ಲಷ್ಟೇ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಉನ್ನತ ಹುದ್ದೆಯಲ್ಲಿರುವ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದ 790 ಪ್ರಕರಣಗಳು ಇನ್ನೂ ತನಿಖಾ ಹಂತದಲ್ಲಿವೆ. ದೊಡ್ಡಮಟ್ಟದ ಪ್ರಕರಣಗಳಲ್ಲಿ ಶಿಕ್ಷೆ ಇರಲಿ ದೋಷಾರೋಪ ಪಟ್ಟಿ ಕೂಡ ಸಲ್ಲಿಕೆಯಾಗಿಲ್ಲ. 500, 1000 ರೂ. ಲಂಚ ಪಡೆದ ಸಣ್ಣಪುಟ್ಟ ಟ್ರಾ್ಯಪ್ ಆದ 409 ಪ್ರಕರಣಗಳಲ್ಲಷ್ಟೇ ಚಾರ್ಜ್​ಶೀಟ್ ಸಲ್ಲಿಕೆಯಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ನಿಗ್ರಹಿಸುವ ನಿಟ್ಟಿನಲ್ಲಿ ಲೋಕಾಯುಕ್ತಕ್ಕಿದ್ದ ಅಧಿಕಾರ ಮೊಟಕುಗೊಳಿಸಿ 2016 ಮಾ.14ರಂದು ಎಸಿಬಿ ಸ್ಥಾಪಿಸಲಾಯಿತು. ಆ ವರ್ಷ ಎಸಿಬಿ ಒಟ್ಟು 153 ಪ್ರಕರಣ ದಾಖಲಿಸಿದ್ದು, 89 ಪ್ರಕರಣದ ತನಿಖೆ ಮುಕ್ತಾಯಗೊಳಿಸಿ
ಕೋರ್ಟ್​ಗೆ ಚಾರ್ಜ್​ಶೀಟ್ ಸಲ್ಲಿಸಿದೆ. ವರ್ಷದಿಂದ ವರ್ಷಕ್ಕೆ ದಾಖಲಾಗುವ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದರೂ ತನಿಖೆ ನಡೆಸಿ ಚಾರ್ಜ್​ಶೀಟ್ ಸಲ್ಲಿಸುವ ಪ್ರಕರಣಗಳ ಸಂಖ್ಯೆ ವಿರಳವಾಗಿದೆ.
2019ರಲ್ಲಿ 379 ಪ್ರಕರಣ ದಾಖಲಾಗಿದ್ದರೂ ಕೇವಲ 11  ಟ್ರ್ಯಾಪ್​​ ಪ್ರಕರಣಗಳಿಗೆ ಸಂಬಂಧಿಸಿದ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. ಲೋಕಾಯುಕ್ತಕ್ಕೆ ಹೋಲಿಕೆ ಮಾಡಿದರೆ ಎಸಿಬಿಯಲ್ಲಿ ದಾಖಲಾಗುವ ಪ್ರಕರಣಗಳು ಹಾಗೂ ನ್ಯಾಯಾಲಯಕ್ಕೆ ಸಲ್ಲಿಕೆಯಾಗುವ ಚಾರ್ಜ್​ಶೀಟ್​ಗಳ ಪ್ರಮಾಣ ಕಡಿಮೆ.
ಸಿಎಂ ಭರವಸೆ ಏನಾಯ್ತು?:ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ 24 ಗಂಟೆಯೊಳಗೆ ಎಸಿಬಿಯನ್ನು ರದ್ದುಗೊಳಿಸಿ ಲೋಕಾಯುಕ್ತಕ್ಕೆ ಅಧಿಕಾರ ಮರಳಿಸುವುದಾಗಿ ಯಡಿಯೂರಪ್ಪ ಈ ಹಿಂದೆ ಭರವಸೆ ನೀಡಿದ್ದರು. ಆದರೆ, ಅವರು ಸಿಎಂ ಆಗಿ 6 ತಿಂಗಳು ಕಳೆದರೂ ಕೊಟ್ಟ ಮಾತು ಈಡೇರಿಲ್ಲ.
ಸ್ವತಂತ್ರ ತನಿಖೆಗೆ ಅಡ್ಡಿ:ಬಲೆಗೆ ಬೀಳುವ ಅಧಿಕಾರಿಗಳು ರಾಜಕಾರಣಿಗಳ ಮೊರೆ ಹೋಗುತ್ತಿದ್ದಾರೆ. ಸರ್ಕಾರದಿಂದ ತನಿಖಾಧಿಕಾರಿಗಳಿಗೆ ಒತ್ತಡ ಬರುತ್ತಿರುವುದರಿಂದ ಸ್ವತಂತ್ರವಾಗಿ ತನಿಖೆ ನಡೆಸುವುದಕ್ಕೂ ಸಾಧ್ಯವಾಗುತ್ತಿಲ್ಲ. ಮತ್ತೊಂದೆಡೆ ಕೆಲ ಪ್ರಮುಖ ಪ್ರಕರಣಗಳಲ್ಲಿ ಸರ್ಕಾರದಿಂದ ಅಭಿಯೋಜನೆ ಮಂಜೂರಾತಿ ಸಿಗದಿರುವುದು ತನಿಖೆಗೆ ಹಿನ್ನಡೆ ತಂದಿದೆ. ಕೆಲ ಅಧಿಕಾರಿಗಳು ಕೋರ್ಟ್ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ. ಸಾಕ್ಷ್ಯ ಕೊರತೆ ಹಿನ್ನೆಲೆಯಲ್ಲಿ ಆರೋಪ ಸಾಬೀತಾಗುತ್ತಿಲ್ಲ. ಕರ್ನಾಟಕ ಲೋಕಾಯುಕ್ತ ಅಧಿನಿಯಮ 1984 ಹಾಗೂ ಭ್ರಷ್ಟಾಚಾರ ತಡೆ ಅಧಿನಿಯಮ 1988 ಎರಡು ಪ್ರತ್ಯೇಕ ಶಾಸನಗಳು. ಈ ಹಿಂದೆ ಲೋಕಾಯುಕ್ತ ಪೊಲೀಸರು ಸ್ವತಂತ್ರವಾಗಿ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ, ಎಸಿಬಿ ಸರ್ಕಾರದಡಿ ಕಾರ್ಯ ನಿರ್ವಹಿಸಬೇಕಿದೆ.
ತನಿಖೆ ಪೂರ್ಣಗೊಳಿಸಲು ಸಮಯ ಬೇಕು ಎಸಿಬಿ ದಾಳಿಗೊಳಗಾದ ಅಧಿಕಾರಿಗಳ ಆಸ್ತಿಪಾಸ್ತಿಗೆ ಸಂಬಂಧಿಸಿದ ದಾಖಲೆ ಕಲೆ ಹಾಕಿ ತನಿಖೆ ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ದೊಡ್ಡ ಭ್ರಷ್ಟಾಚಾರ ಪ್ರಕರಣಗಳಲ್ಲಿ ಚಾರ್ಜ್​ಶೀಟ್ ಸಲ್ಲಿಸುವುದು ವಿಳಂಬವಾಗುತ್ತದೆ.
| ಟಿ.ಸುನೀಲ್ ಕುಮಾರ್, ಎಸಿಬಿ ಎಡಿಜಿಪಿ

|ಅವಿನಾಶ ಮೂಡಂಬಿಕಾನ ಬೆಂಗಳೂರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
