ಬೆಂಗಳೂರು:ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಸಿಬಿ ದಾಳಿ ನಡೆಸಿ ಜಿಲ್ಲಾಧಿಕಾರಿಗೆ ಆಪ್ತವಾಗಿರುವ ಉಪ ತಹಸೀಲ್ದಾರ್ ಹಾಗೂ ಕೋರ್ಟ್ ಅಸಿಸ್ಟೆಂಟ್ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧವೂ ಆರೋಪ ಬಂದಿದೆ.
ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಆಪ್ತನಾಗಿರುವ ಉಪ ತಹಸೀಲ್ದಾರ್/ಮ್ಯಾನೇಜರ್ ಮಹೇಶ್ ಹಾಗೂ ಕೋರ್ಟ್ ಅಸಿಸ್ಟೆಂಟ್ ಚೇತನ್ ಕುಮಾರ್ ಅಲಿಯಾಸ್ ಚಂದ್ರು ಬಂಧಿತರು.ಬೇಗೂರು ವಾಸಿಯೊಬ್ಬರು ಆನೇಕಲ್ ತಾಲ್ಲೂಕಿನ ಕೊಡ್ಲು ಗ್ರಾಮದ ಸರ್ವೇ ನಂ-190/5ರಲ್ಲಿ 38 ಗುಂಟೆ ಜಮೀನು ಹೊಂದಿದ್ದರು. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಜಿಲ್ಲಾಧಿಕಾರಿ ಅವರ ನ್ಯಾಯಾಲಯದಲ್ಲಿ ರೆವೆನ್ಯೂ ಅಫೀಲ್ ಪ್ರಕರಣವೊಂದರ ವಿಚಾರಣೆ ನಡೆಯುತ್ತಿದೆ.
ಈ ಪ್ರಕರಣದಲ್ಲಿ ಅರ್ಜಿದಾರರ ಪರ ಆದೇಶ ನೀಡಲು ಆರೋಪಿ ಮಹೇಶ್ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಲಂಚ ಕೊಡಲು ಇಚ್ಛಿಸದ ಅರ್ಜಿದಾರರು ಎಸಿಬಿಗೆ ದೂರು ನೀಡಿದ್ದರು. ಈ ಮೇರೆಗೆ ದಾಳಿ ನಡೆಸಿ ಎಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದರು.
ದೂರುದಾರರ ಜಮೀನಿನ ವಿಚಾರ ಎಸಿ ಕೋರ್ಟ್‌ನಲ್ಲಿ ತೀರ್ಮಾನ ಆಗಿ ಡಿಸಿ ಕೋರ್ಟ್‌ಗೆ ಹೋಗಿತ್ತು. ಹಣಕ್ಕಾಗಿ ವಿನಾಕಾರಣ ವಿಳಂಬ ಮಾಡುತ್ತಿದ್ದರು. ಈ ಫೈಲ್ ಕ್ಲಿಯರ್ ಮಾಡಿಕೊಡಲು ಆರಂಭದಲ್ಲಿ 15 ಲಕ್ಷ ರೂ. ಕೇಳಿದ್ದರು. ಅಂತಿಮವಾಗಿ 5 ಲಕ್ಷ ರೂ.ಗೆ ಡೀಲ್ ಕುದುರಿಸಲಾಗಿತ್ತು. ಈ ನಡುವೆ ಜಿಲ್ಲಾಧಿಕಾರಿ ಮಂಜುನಾಥ್ ವಿರುದ್ದವೂ ದೂರುದಾರರು ಆರೋಪ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಡಿಸಿ ವಿರುದ್ಧ ಸಾಕ್ಷ್ಯ ಸಿಕ್ಕರೆ ಅವರನ್ನೂ ಎಸಿಬಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿವೆ.
ದೂರುದಾರರು ತಮ್ಮ ಜಮೀನಿಗೆ ಸಂಬಂಧಿಸಿದ ವಿಚಾರ ಮಾತನಾಡಲು ಜಿಲ್ಲಾಧಿಕಾರಿಯನ್ನು 2 ಬಾರಿ ಭೇಟಿ ಮಾಡಿದ್ದರು. ಆ ವೇಳೆ ಮಹೇಶ್ ಬಳಿ ಮಾತಾನಾಡುವಂತೆ ಡಿಸಿ ಸೂಚಿಸಿದ್ದರು ಎನ್ನಲಾಗಿದೆ. ಜಿಲ್ಲಾಧಿಕಾರಿ ಮಂಜುನಾಥ್ ಕಚೇರಿಯಲ್ಲಿ ಎಸಿಬಿ ಪರಿಶೀಲನೆ ನಡೆಸಿದೆ. ವಶಕ್ಕೆ ಪಡೆದ ಇಬ್ಬರನ್ನು ಕೂಲಂಕಷವಾಗಿ ವಿಚಾರಣೆ ನಡೆಸಿ ಭ್ರಷ್ಟಾಚಾರದಲ್ಲಿ ತೊಡಗಿರುವ ಇನ್ನಷ್ಟು ಜನರನ್ನು ಬಲೆಗೆ ಕೆಡವಲು ಸಿದ್ಧತೆ ನಡೆಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ದಾಳಿ ಕುರಿತಂತೆ ಜಿಲ್ಲಾಧಿಕಾರಿ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದು, ನನ್ನನ್ನು ಯಾರೂ ವಿಚಾರಣೆ ಮಾಡಿಲ್ಲ. ನಮ್ಮ ಕಚೇರಿಯಲ್ಲಿ ಆಗಿದೆ ಅಂತ ಮಾಹಿತಿ ಕೇಳಿದ್ದಾರೆ, ಅಷ್ಟಕ್ಕೇ ಆರೋಪಿಯಾಗುವುದಿಲ್ಲ ಎಂದು ಹೇಳಿದ್ದಾರೆ. ಇದು ಒಂದೂವರೆ ಕೋಟಿ ಜನಸಂಖ್ಯೆ ಇರುವ ನಗರ, ನಾನು ನಿನ್ನೆ ಮೊನ್ನೆ ಬಂದಿಲ್ಲ, ಇದೇ ಮೊದಲ ಬಾರಿಗೆ ಡಿಸಿ ಆಗಿಲ್ಲ. ನನ್ನ ಹೆಸರು ಯಾಕೆ ಬಂತು ಅಂತ ಗೊತ್ತಿಲ್ಲ ಎಂದಿರುವ ಅವರು, ಕಾಲ ಕ್ರಮೇಣ ಎಲ್ಲ ಗೊತ್ತಾಗುತ್ತದೆ, ಉಪ್ಪು ತಿಂದವರು ನೀರು ಕುಡಿಯುತ್ತಾರೆ ಎಂದು ಹೇಳಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ, ಉಪ ತಹಸೀಲ್ದಾರ್​ ಸೇರಿ ಇಬ್ಬರ ಬಂಧನ..
ಪೆಟ್ರೋಲ್​-ಡೀಸೆಲ್ ಬೆಲೆ ಇಳಿಕೆ, ಅಡುಗೆ ಅನಿಲಕ್ಕೆ 200 ರೂ. ಸಬ್ಸಿಡಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 1 =
Remember me
