ಬೆಂಗಳೂರು:ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಮತ್ತೆ ಸಾಬೀತಾಗಿದೆ. ರೆವೆನ್ಯೂ ಅಫೀಲ್ ಪ್ರಕರಣವೊಂದರಲ್ಲಿ ಅರ್ಜಿದಾರರ ಪರ ಆದೇಶ ನೀಡಲು 5 ಲಕ್ಷ ರೂ. ಲಂಚ ಪಡೆಯಲು ಮುಂದಾದ ಬೆಂಗಳೂರು ಜಿಲ್ಲಾಧಿಕಾರಿ ಆಪ್ತ ಉಪ ತಹಸೀಲ್ದಾರ್ ಹಾಗೂ ಕೋರ್ಟ್ ಅಸಿಸ್ಟೆಂಟ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಆಪ್ತನಾಗಿರುವ ಉಪ ತಹಸೀಲ್ದಾರ್/ಮ್ಯಾನೇಜರ್ ಮಹೇಶ್ ಹಾಗೂ ಕೋರ್ಟ್ ಅಸಿಸ್ಟೆಂಟ್ ಚೇತನ್ ಕುಮಾರ್ ಅಲಿಯಾಸ್ ಚಂದ್ರು ಬಂಧಿತರು.ಬೇಗೂರು ವಾಸಿಯೊಬ್ಬರು ಆನೇಕಲ್ ತಾಲ್ಲೂಕಿನ ಕೊಡ್ಲು ಗ್ರಾಮದ ಸರ್ವೇ ನಂ-190/5ರಲ್ಲಿ 38 ಗುಂಟೆ ಜಮೀನು ಹೊಂದಿದ್ದರು. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದ ಜಿಲ್ಲಾಧಿಕಾರಿ ಅವರ ನ್ಯಾಯಾಲಯದಲ್ಲಿ ರೆವೆನ್ಯೂ ಅಫೀಲ್ ಪ್ರಕರಣವೊಂದರ ವಿಚಾರಣೆ ನಡೆಯುತ್ತಿದೆ.
ಈ ಪ್ರಕರಣದಲ್ಲಿ ಅರ್ಜಿದಾರರ ಪರ ಆದೇಶ ನೀಡಲು ಆರೋಪಿ ಮಹೇಶ್ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಲಂಚ ಕೊಡಲು ಇಚ್ಛಿಸದ ಅರ್ಜಿದಾರರು ಎಸಿಬಿಗೆ ದೂರು ನೀಡಿದ್ದರು.ಮೇ 21ರಂದು ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲೇ ಮಹೇಶ್ ಪರ ಆರೋಪಿ ಚೇತನ್ 5 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಆ ವೇಳೆ ಎಸಿಬಿ ಡಿವೈಎಸ್‌ಪಿ ರವಿಶಂಕರ್ ನೇತೃತ್ವದ ತಂಡ ದಾಳಿ ನಡೆಸಿತ್ತು. 5 ಲಕ್ಷ ರೂ. ವಶಕ್ಕೆ ಪಡೆದು ಆರೋಪಿಗಳಾದ ಮಹೇಶ್ ಹಾಗೂ ಚೇತನ್ ಕುಮಾರ್‌ನನ್ನು ಎಸಿಬಿ ಬಂಧಿಸಿದೆ.
ಪೆಟ್ರೋಲ್​-ಡೀಸೆಲ್ ಬೆಲೆ ಇಳಿಕೆ, ಅಡುಗೆ ಅನಿಲಕ್ಕೆ 200 ರೂ. ಸಬ್ಸಿಡಿ!

ಕಡ್ಡಾಯ ನಿವೃತ್ತಿ ಹೊಂದಿದ್ದ ಜಡ್ಜ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
