ಬೆಂಗಳೂರು:ಬಿಬಿಎಂಪಿಯ ಘನ ತ್ಯಾಜ್ಯದಿಂದ ಇಂಧನ ಉತ್ಪಾದಿಸುವ ಯೋಜನೆಯಲ್ಲಿ ನಡೆದ ಅವ್ಯವಹಾರದ ಸಂಬಂಧ ನಾಲ್ವರು ಇಂಜಿನಿಯರ್‌ಗಳಿಗೆ ಸೇರಿದ 6 ಕಡೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿ ಮಹತ್ವದ ದಾಖಲೆ ಕಲೆ ಹಾಕಿದೆ.
ಈ ಪ್ರಕರಣದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಎಸಿಬಿ ಅಧಿಕಾರಿಗಳು ಬಿಬಿಎಂಪಿ ಅಭಿಯಂತರರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಹಗರಣಕ್ಕೆ ಸಂಬಂಧಿಸಿದ ಕೆಲ ದಾಖಲೆ ಜಪ್ತಿ ಮಾಡಿದ್ದಾರೆ. ಸದ್ಯದಲ್ಲೇ ಇವರಿಗೆ ವಿಚಾರಣೆಗೆ ಹಾಜರಾಗುವಂತೆ  ನೋಟಿಸ್ ಜಾರಿ ಮಾಡುವ ಸಾಧ್ಯತೆಗಳಿವೆ.
ಎಲ್ಲೆಲ್ಲಿ ದಾಳಿ?:ಬಿಬಿಎಂಪಿಯ ಕಾರ್ಯಪಾಲಕ ಅಭಿಯಂತರರ ಕೆ.ವಿ.ರವಿ ಅವರಿಗೆ ಸೇರಿದ ಜಯನಗರ 5ನೇ ಬ್ಲಾಕ್‌ನಲ್ಲಿನ ವಾಸದ ಮನೆ, ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿನ ಹೊಸ ಅನೆಕ್ಸ್ ಕಟ್ಟಡದಲ್ಲಿರುವ ಇವರ ಕಚೇರಿ, ಕಾರ್ಯಪಾಲಕ ಅಭಿಯಂತರರ ವೆಂಕಟೇಶಪ್ಪ ಅವರ ಹೊರಮಾವು ಕಲ್ಯಾಣನಗರ ಮುನಿರೆಡ್ಡಿ ಲೇಔಟ್‌ನಲ್ಲಿರುವ ಮನೆ, ಕಚೇರಿ, ನಿವೃತ್ತ ಕಾರ್ಯಪಾಲಕ ಅಭಿಯಂತರ ಸುರೇಶ್ ಅವರ ಇಂದಿರಾನಗರದಲ್ಲಿರುವ ನಿವಾಸ, ಕಿರಿಯ ಅಭಿಯಂತರರ ರಾಘವೇಂದ್ರ ಅವರ ಶ್ರೀನಿವಾಸ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ ಎಸಿಬಿ ತಂಡ ಮಹತ್ವದ ದಾಖಲೆ ಜಪ್ತಿ ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 2 =
Remember me
