ಬೆಂಗಳೂರು:ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಳೆದ 5 ವರ್ಷಗಳಲ್ಲಿ ಕೈಗೊಂಡ ದಾಳಿಗಳ ಪೈಕಿ ಶೇ.51 ದಾಳಿಗಳು ಕಂದಾಯ, ನಗರಾಭಿವೃದ್ಧಿ, ಸಾರಿಗೆ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳಿಗೆ ಸಂಬಂಧಿಸಿದ್ದಾಗಿವೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಕಳೆದ 5 ವರ್ಷಗಳಲ್ಲಿ ಎಸಿಬಿ 58 ದಾಳಿಗಳನ್ನು ನಡೆಸಿ ಕೋಟ್ಯಂತರ ರೂ. ಭ್ರಷ್ಟಾಚಾರ ಬಯಲಿಗೆಳೆದಿದೆ. ನಗರಾಭಿವೃದ್ಧಿ-40, ಸಾರಿಗೆ-33 ಹಾಗೂ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಮೇಲೆ 29 ದಾಳಿಗಳನ್ನು ನಡೆಸಿದೆ. ಕಳೆದ 5 ವರ್ಷಗಳಲ್ಲಿ ಎಸಿಬಿಯಲ್ಲಿ ಅಕ್ರಮ ಆಸ್ತಿ ಕೇಸ್​ಗೆ (ಡಿಎ) ಸಂಬಂಧಿಸಿದಂತೆ 310 ದಾಳಿ ಪ್ರಕರಣ ದಾಖಲಾಗಿದ್ದು, 371 ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಬಿಸಿ ಮುಟ್ಟಿಸಿದೆ. ಈ ಪೈಕಿ 63 ಕೇಸ್​ಗಳಲ್ಲಿ ತನಿಖೆ ಮುಕ್ತಾಯಗೊಂಡಿದ್ದು, 223 ಪ್ರಕರಣಗಳಲ್ಲಿ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಒಟ್ಟು 1,803 ಪ್ರಕರಣ:ದಾಳಿಗೊಳಗಾದ ಅಧಿಕಾರಿಗಳು ಆದಾಯಕ್ಕಿಂತ ಅತೀ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಆಸ್ತಿ ಹೊಂದಿರುವುದಕ್ಕೆ ಸಾಕ್ಯ್ಷಾಧಾರಗಳು ಪತ್ತೆಯಾದರೂ, ಬೆರಳೆಣಿಕೆಯಷ್ಟು ಅಧಿಕಾರಿಗಳಿಗೆ ಶಿಕ್ಷೆಯಾಗಿದೆ. 2016ರಿಂದ ಇದುವರೆಗೆ ಎಸಿಬಿಯಲ್ಲಿ ಒಟ್ಟು 1,803ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 650ಕ್ಕೂ ಹೆಚ್ಚಿನ ಕೇಸ್​ಗಳು ಇನ್ನೂ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿವೆ. 85 ಪ್ರಕರಣಗಳಲ್ಲಿ ತನಿಖೆ ನಡೆಸಲು ನ್ಯಾಯಾಲಯಗಳಲ್ಲಿ ತಡೆಯಿದೆ. 1,473ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ. ಎಸಿಬಿ ದಾಳಿಗೊಳಗಾದ 1,335 ಮಂದಿ ಸರ್ಕಾರಿ ನೌಕರರು ಸೇವೆಯಿಂದ ಅಮಾನತುಗೊಂಡಿದ್ದಾರೆ.
ಜಪ್ತಿಯಾದ ಸಂಪತ್ತು ಮತ್ತೆ ಭ್ರಷ್ಟರ ಕೈಗೆ:ದಾಳಿ ವೇಳೆ ಜಪ್ತಿ ಮಾಡಿರುವ ಆಸ್ತಿ-ಪಾಸ್ತಿಗಳ ಪೈಕಿ ಸ್ವಲ್ಪ ಪ್ರಮಾಣದ ಸಂಪತ್ತುಸರ್ಕಾರದ ಖಜಾನೆ ಸೇರಿದೆ. ಬಹುತೇಕ ಕೇಸ್​ಗಳಲ್ಲಿ ಜಪ್ತಿಯಾದ ವಸ್ತುಗಳು ಮತ್ತೆ ದಾಳಿಗೊಳಗಾದವರ ಕೈ ಸೇರುತ್ತಿವೆ. ದಾಳಿಗೊಳಗಾದವರು ಹೊಂದಿರುವ ಆಸ್ತಿಗೆ ಸಂಬಂಧಿಸಿದ ಸಂಪೂರ್ಣವಾದ ದಾಖಲೆ ಸಂಗ್ರಹಿಸಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲು ತನಿಖಾಧಿಕಾರಿಗಳಿಗೆ ಕನಿಷ್ಠ 3 ರಿಂದ 4 ವರ್ಷಗಳೇ ಹಿಡಿಯುತ್ತವೆ. ಈ ಅವಧಿಯಲ್ಲಿ ಲೆಕ್ಕಪರಿಶೋಧಕರ ಮೊರೆ ಹೋಗುವ ಭ್ರಷ್ಟರು ತಮ್ಮ ಅಕ್ರಮ ಆಸ್ತಿಯನ್ನು ಸಕ್ರಮ ಮಾಡಿಸಿಕೊಂಡು ನ್ಯಾಯಾಲಯಕ್ಕೆ ಸೂಕ್ತ ದಾಖಲೆ ಒದಗಿಸಿ ಅಕ್ರಮ ಆಸ್ತಿಯನ್ನು ಮತ್ತೆ ಹಿಂಪಡೆದುಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದಾರೆ.
ಭ್ರಷ್ಟಾಚಾರ ನಿಯಂತ್ರಣ:ಈ ಹಿಂದೆ ಸಾರ್ವಜನಿಕರು ಸರ್ಕಾರಿ ಅಧಿಕಾರಿಗಳನ್ನು ನೇರವಾಗಿ ಭೇಟಿಯಾಗಿ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವ ಅನಿವಾರ್ಯತೆ ಇತ್ತು. ಆದರೆ, ಆನ್​ಲೈನ್​ನಲ್ಲೇ ಅರ್ಜಿ ಸಲ್ಲಿಸಿ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಇತ್ತೀಚೆಗೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಬಂದಿದೆ ಎಂದು ಕಂದಾಯ ಇಲಾಖೆ ಅಧಿಕಾರಿಯೊಬ್ಬರ ಅಭಿಪ್ರಾಯ.
ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಎದುರೇ ಕಲ್ಲು ತೂರಾಟ; ವಾಹನ ಪಲ್ಟಿ ಮಾಡಿ ಆಕ್ರೋಶ, ಪರಿಸ್ಥಿತಿ ಉದ್ವಿಗ್ನ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 14 =
Remember me
