ಬೆಂಗಳೂರು:ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎರಡು ದಿನಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಚೇರಿಗಳ ಮೇಲೆ ದಾಳಿ ನಡೆಸುತ್ತಿದ್ದು, ಇವತ್ತೂ ಕಾರ್ಯಾಚರಣೆ ಮುಂದುವರಿದಿತ್ತು. ಇಂದು ಒಂದೇ ದಿನ ಬಿಬಿಎಂಪಿಯ 33 ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಭ್ರಷ್ಟಾಚಾರ ನಿಗ್ರಹ ದಳದ 200 ಸಿಬ್ಬಂದಿ-ಅಧಿಕಾರಿಗಳನ್ನು ಒಳಗೊಂಡ ಒಟ್ಟು 35 ತಂಡಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಬಿಬಿಎಂಪಿ ಕೇಂದ್ರ ಕಚೇರಿ, ಮೂರು ವಲಯ ಕಚೇರಿ ಸೇರಿ 33 ಕಡೆ ದಾಳಿ ನಡೆಸಿದೆ.
ಎಸಿಬಿ ದಾಳಿ ನಡೆಸಿ ಬಗೆದಷ್ಟೂ ಬಿಬಿಎಂಪಿ ಭ್ರಷ್ಟಾಚಾರ ಬಯಲಾಗುತ್ತಿದ್ದು, ಒಟ್ಟು ಸುಮಾರು 2 ಸಾವಿರ ಕೋಟಿ ರೂಪಾಯಿಯಷ್ಟು ಭ್ರಷ್ಟಾಚಾರ ನಡೆದಿರುವ ಶಂಕೆ ಮೂಡಿದೆ. ಪಾಲಿಕೆಯ ಜಾಹೀರಾತು, ಟಿಡಿಆರ್, ನಗರ ಯೋಜನೆ, ಕಂದಾಯ ಹಾಗೂ ಸ್ಮಾರ್ಟ್ ವಾಟರ್ ಡ್ರೈನೇಜ್ ವಿಭಾಗಗಳ ಮೇಲೆ ದಾಳಿ ನಡೆದಿದ್ದು, ಜಾಹೀರಾತು ವಿಭಾಗವೊಂದರಲ್ಲೇ 300 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಪತ್ತೆಯಾಗಿದೆ. ಬೇರೆ ವಿಭಾಗಗಳಲ್ಲೂ ಕೋಟ್ಯಂತರ ರೂ. ಮೌಲ್ಯದ ಅಕ್ರಮ ಪತ್ತೆಯಾಗಿದ್ದು, ವಶಪಡಿಸಿಕೊಂಡಿರುವ ಕಡತಗಳ ಪರಿಶೀಲನೆ ನಡೆಯುತ್ತಿದೆ.
ಒಂದು ಸ್ಫೋಟ, ಒಂಬತ್ತು ಸಾವು: ಶುಭ ಸಮಾರಂಭದ ಮನೆಯಲ್ಲಿ ಸೂತಕದ ಕಾವು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
