ರಾಮನಗರ:ಬೆಂಗಳೂರು-ಮೈಸೂರು ದಶಪಥದಲ್ಲಿ ಆರು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮೂಲಕ ಎಕ್ಸ್​​ಪ್ರೆಸ್​ ವೇ ಇನ್ನೊಂದು ಭೀಕರ ಅಪಘಾತಕ್ಕೆ ಸಾಕ್ಷಿಯಾಗಿದೆ.
ಬೆಂಗಳೂರು-ಮೈಸೂರು ದಶಪಥದಲ್ಲಿ ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ತುಂತುರು ಮಳೆ ಹಿನ್ನೆಲೆಯಲ್ಲಿ ಈ ವಾಹನಗಳು ನಿಯಂತ್ರಣ ತಪ್ಪಿ ಡಿಕ್ಕಿಯಾಗಿವೆ. ಆರು ಕಾರುಗಳು ಹಿಂಬದಿಯಿಂದ ಒಂದಕ್ಕೊಂದು ಡಿಕ್ಕಿಯಾಗಿ, ಈ ಭೀಕರ ಅಪಘಾತ ಸಂಭವಿಸಿದೆ.
ಅಪಘಾತಕ್ಕೀಡಾದ ಕಾರುಗಳೆಲ್ಲವೂ ಬೆಂಗಳೂರಿನಿಂದ ಮೈಸೂರು ಕಡೆಗೆ ಸಾಗುತ್ತಿದ್ದವು. ಈ ಪ್ರಕರಣದಲ್ಲಿ ಸ್ಯಾಂಟ್ರೋ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಾಸನ ಮೂಲದ ರೇಣುಕಮ್ಮ, ಮಂಜುಳಾ, ಸುಧೀರ್ ಮೃತಪಟ್ಟವರು. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಿಬಿಎಂಪಿ ವಾರ್ಡ್ ಮರುವಿಂಗಡಣೆ: ಅಂತಿಮ ಅಧಿಸೂಚನೆ ಪ್ರಕಟ; 13 ವಾರ್ಡ್​ಗಳ ಹೆಸರು ಬದಲಾವಣೆ

ನಾಳೆ ಇಡೀ ಬೆಂಗಳೂರು ಬಂದ್ ಆಗ್ಬೇಕು; ಅದಾಗ್ಯೂ ವ್ಯಾಪಾರ ಮಾಡಿದ್ರೆ ಮುಂದಾಗುವ ತೊಂದರೆಗೆ ನೀವೇ ಹೊಣೆ: ಬಿಎಸ್​ವೈ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + six =
Remember me
