ಕೊಡಗು:21 ಪ್ರಯಾಣಿಕರಿದ್ದ ಬಸ್​ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್​ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದರೆ, ಬೈಕ್ ಬಸ್​ನ ಚಕ್ರದಡಿಗೆ ಸಿಲುಕಿಕೊಂಡಿದೆ. ಕೊಡಗು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕೆಲಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.
ಮಡಿಕೇರಿ ಸಮೀಪದ ಬೋಯಿಕೇರಿಯಲ್ಲಿ ಈ ಅಪಘಾತ ಸಂಭವಿಸಿದೆ. ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಬಸ್​ನಲ್ಲಿ 21 ಮಂದಿ ಪ್ರಯಾಣಿಕರಿದ್ದು, ಅದೃಷ್ಟವಶಾತ್ ಅಷ್ಟೂ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್​ ಬಸ್​​ನ ಚಕ್ರದಡಿಗೆ ಸಿಲುಕಿಕೊಂಡರೂ ಆತ ಕೂಡ ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಡಿಕೇರಿ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.
ಬೆಂಗಳೂರು-ಮೈಸೂರು ಮಾರ್ಗದಲ್ಲಿ ಮತ್ತೆ ಪ್ರವಾಹ ಸಾಧ್ಯತೆ; ಇನ್ನು 4 ದಿನ ಭಾರಿ ಮಳೆ ಮುನ್ಸೂಚನೆ..
ಜನಜಂಗುಳಿಯಿಂದಾಗಿ ಕುಸಿದು ಬಿತ್ತು ಗಣೇಶನ ಗೋಲ್ಡನ್ ಟೆಂಪಲ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
