ಕಲಬುರಗಿ:ಕಾಮಗಾರಿ ವೇಳೆಯೇ ನಡೆಯುವ ದುರಂತಗಳ ಪಟ್ಟಿಗೆ ಮತ್ತೊಂದು ಅವಘಡ ಸೇರಿದ್ದು, ನಿರ್ಮಾಣ ಹಂತದ ಸೇತುವೆಯೊಂದರ ಬ್ಲಾಕ್​ ಕುಸಿದು ಒಂಬತ್ತು ಕಾರ್ಮಿಕರು ಗಾಯಗೊಂಡಿದ್ದಾರೆ. ಕಲಬುರಗಿ ಜಿಲ್ಲೆ ಚಿಂಚೋಳಿ ಪಟ್ಟಣದ ಹೊರವಲಯದಲ್ಲಿ ಈ ಅವಘಡ ಸಂಭವಿಸಿದೆ.
ಇಲ್ಲಿನ ಮುಲ್ಲಾಮಾರಿ ನದಿಗೆ ಅಡ್ಡಲಾಗಿ ಸೇತುವೆಯೊಂದು ನಿರ್ಮಾಣವಾಗುತ್ತಿದ್ದು, ಕಾಮಗಾರಿ ಸಂದರ್ಭದಲ್ಲೇ ಬ್ಲಾಕ್​ ಒಂದು ಕುಸಿದಿದೆ. ಪರಿಣಾಮವಾಗಿ ಕಾಮಗಾರಿಯಲ್ಲಿ ತೊಡಗಿದ್ದ ಒಂಬತ್ತು ಕಾರ್ಮಿಕರು ಗಾಯಗೊಂಡಿದ್ದಾರೆ.
ಗಾಯಗೊಂಡವರಲ್ಲಿ ಕಲಬುರಗಿ ಜಿಲ್ಲೆಯವರಲ್ಲದೆ ಬಿಹಾರ ಮೂಲದ ಕಾರ್ಮಿಕರು ಕೂಡ ಇದ್ದಾರೆ. ಗಾಯಾಗಳುಗಳನ್ನು ತಾಲೂಕು ಹಾಗೂ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 14 =
Remember me
