ನಾಗರಮುನ್ನೋಳಿ:ದಿನಸಿ ತರಲೆಂದು ಮನೆಯಿಂದ ಹೊರಟಿದ್ದ ವೃದ್ಧನೊಬ್ಬನಿಗೆ ರಸ್ತೆ ಮೇಲೆ ಬರುತ್ತಿದ್ದ ಕಾರೇ ಯಮ ರೂಪ ತೋರಿರುವ ಘಟನೆ ಬೆಳಗಾವಿಯ ನಾಗರಮುನ್ನೋಳಿಯಲ್ಲಿ ನಡೆದಿದೆ. ಗ್ರಾಮದ ಹೊರವಲಯದ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಕಾರು ಡಿಕ್ಕಿ ಹೊಡೆದು ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಲ್ಲಪ್ಪ ಭೀಮಪ್ಪ ಮದ್ಯಾಳಿ (60) ಮೃತರು. ತೋಟದ ಮನೆಯಿಂದ ನಾಗರಮುನ್ನೋಳಿ ಗ್ರಾಮಕ್ಕೆ ದಿನಸಿ ಖರೀದಿಗೆ ಹೊರಟಿದ್ದ ವೃದ್ಧನಿಗೆ ಎದುರುಗಡೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವೃದ್ಧ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿದ್ದಾರೆ.
ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಪಿಎಸ್‌ಐ ರಾಕೇಶ ಬಗಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 11 =
Remember me
