ಗದಗ :ಇಂದು ಮುಂಜಾನೆ ವೇಳೆ ಸಾರಿಗೆ ಬಸ್​ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ.
ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತಪಟ್ಟವರಾಗಿದ್ದಾರೆ. ಬಸ್​​ ಇಳಕಲ್​ನಿಂದ ಹುಬ್ಬಳ್ಳಿ ಗೆ ಹೊರಟ್ಟಿತ್ತು. ಕಾರು ಹಾವೇರಿಯಿಂದ ಕಲ್ಲಾಪೂರ ಕಡೆಗೆ ಸಾಗುತ್ತಿತ್ತು.
ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಕುಟುಂಬವು ಹೊರಟಿತ್ತು. ಕೊಣ್ಣೂರು ಬಳಿಕ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಆಘಾತಕ್ಕೆ ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ರಭಸಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ದೇಹಗಳು ಛಿದ್ರಗೊಂಡಿವೆ. ಮೃತಪಟ್ಟವರೆಲ್ಲರೂ ದೇವಸ್ಥಾನಕ್ಕೆ ಹೊರಟಿದ್ದರು. ನೇರವಾದ ರಸ್ತೆಯಲ್ಲಿ ಎರಡೂ ವಾಹನಗಳು ಪರಸ್ಪರ ಅಪ್ಪಳಿಸಿದ್ದು ಸಣ್ಣ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eight − two =
Remember me
