ನೆಲಮಂಗಲ:ಕುಣಿಗಲ್ ಬೈಪಾಸ್​ನಲ್ಲಿ ಲಾರಿ ಮತ್ತು ಬೈಕ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದು, ಮತ್ತೊಬ್ಬ ಗಾಯಗೊಂಡಿದ್ದಾರೆ.
ಗ್ಯಾಸ್ ಸಿಲಿಂಡರ್ ತುಂಬಿದ ಲಾರಿ ಚಾಲಕನ ಅಜಾಗರೂಕತೆಯಿಂದ ಬುಧವಾರ ರಾತ್ರಿ ಈ ಅವಘಡ ಸಂಭವಿಸಿದ್ದು, ಲಾರಿ ಚಕ್ರಕ್ಕೆ ಸಿಲುಕಿದ್ದ ಬೈಕ್ ಸವಾರ, ಜಾರ್ಖಂಡ್ ಮೂಲದ ಗುರುದೇವ(20) ರಕ್ತದಮಡುವಿನಲ್ಲೇ ನರಳಾಡುತ್ತಿದ್ದ. ಸ್ಥಳೀಯರೇ ಆಂಬುಲೆನ್ಸ್​ ಮೂಲಕ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಗೆ ರವಾನಿಸಿದ್ದರು.
ಇದನ್ನೂ ಓದಿರಿಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದ ಯುವತಿ ಮಾಡಬಾರದ್ದನ್ನು ಮಾಡಿ ಸಿಕ್ಕಿಬಿದ್ಲು!
ಗಂಭೀರ ಗಾಯಗೊಂಡಿದ್ದ ಗುರುದೇವ ಚಿಕಿತ್ಸೆ ಫಲಿಸಿದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಮತ್ತೊಬ್ಬ ಬೈಕ್​ ಸವಾರ, ಶಾಂತಿನಗರದ ರಂಗಸ್ವಾಮಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ನಡೆದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
https://www.vijayavani.net/prostitution-pimpcouples-arrest-in-bangalore/
ಗಂಡನನ್ನು ಮಚ್ಚಿನಿಂದ ಬರ್ಬರವಾಗಿ ಕೊಂದು ಪೊಲೀಸ್​ ಠಾಣೆಗೆ ಬಂದ ಪತ್ನಿ, ಕಾರಣ ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − nine =
Remember me
