ಉಡುಪಿ:ರಸ್ತೆ ಮೇಲೆ ವಾಹನಗಳು ಸಾಗುವಾಗ ದನ-ಕರುಗಳು, ನಾಯಿಗಳು ಕಂಡುಬರುವುದು ಸಾಮಾನ್ಯ. ಆದರೆ ಇಲ್ಲೊಂದು ಕಡೆ ಇಂದು ಮೀನಿನ ರಾಶಿಯೇ ಕಂಡುಬಂದಿದೆ. ಮಾರ್ಗ ಮಧ್ಯೆ ಮೀನುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಪ್ರಕರಣವೊಂದು ವರದಿಯಾಗಿದೆ.
ಉಡುಪಿ ಜಿಲ್ಲೆಯ ಕಾಪುವಿನ ಉಚ್ಚಿಲ ಮೂಳೂರು ಸಲಪಿ ಮಸೀದಿ ಬಳಿ ಹೀಗೊಂದು ದೃಶ್ಯ ಕಂಡುಬಂದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಮೀನುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಮಗುಚಿಬಿದ್ದ ಪರಿಣಾಮವಾಗಿ ಅದರಲ್ಲಿದ್ದ ಟ್ರೇಗಳಲ್ಲಿ ಬಿದ್ದು, ಮೀನುಗಳು ರಸ್ತೆ ಮೇಲೆ ಚೆಲ್ಲಾಪಿಲ್ಲಿಯಾಗಿವೆ.
ಉಚ್ಚಿಲ ಮೂಳೂರು ಸಲಪಿ ಮಸೀದಿ ಬಳಿ ರಸ್ತೆ ಕಾಮಗಾರಿಯು ಸಲುವಾಗಿ ಡೈವರ್ಷನ್​ ಇದ್ದುದನ್ನು ಗಮನಿಸದೆ ಹೋದ ಚಾಲಕ ಬಳಿಕ ಲಾರಿಯನ್ನು ನಿಯಂತ್ರಿಸಿಕೊಳ್ಳಲು ಆಗದ್ದರಿಂದ ಲಾರಿ ಪಲ್ಟಿಯಾಗಿದೆ. ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದರೆ, ನಿರ್ವಾಹಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಕಾಂತಾರ’ಕ್ಕೀಗ ಕಾನೂನುಕ್ರಮದ ‘ಕಿರಿಕ್​’: ಯಶಸ್ಸಿನ ಓಟಕ್ಕೆ ಬ್ರೇಕ್​ ಹಾಕುವ ಯತ್ನವೋ?

ಫ್ಲೈ-ಓವರ್​ನಲ್ಲಿ ಅಪಘಾತ, ಮೇಲಿನಿಂದ ಕೆಳಕ್ಕೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
