ರಾಮನಗರ:ಬೆಂಗಳೂರು-ಮೈಸೂರು ದಶಪಥದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಸ್ನೇಹಿತರಿಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಸ್ನೇಹಿತರ ಪರಿಸ್ಥಿತಿ ಗಂಭೀರವಾಗಿದೆ. ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಈ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.
ಇದನ್ನೂ ಓದಿ:ನೋವುನಿವಾರಕದ ಡಬ್ಬಿ​ ನುಂಗಿ 9 ತಿಂಗಳ ಮಗು ಸಾವು; ಮದ್ವೆಯಾಗಿ 10 ವರ್ಷದ ಬಳಿಕ ಜನಿಸಿದ್ದ ಪುತ್ರಿ!
ಗಂಭೀರ ಗಾಯಗೊಂಡಿದ್ದ ವಿಜಯ್, ವಿನಯ್ ಹಾಗೂ ನಿಖಿಲ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ನಿವಾಸಿ ವಿನಯ್ (23) ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ರಾಮನಗರದ ಮಂಜುನಾಥ್ ನಗರ ನಿವಾಸಿ ವಿಜಯ್ (23), ಮತ್ತೊಬ್ಬ ಗಾಯಾಳು ನಿಖಿಲ್​ಗೆ ಚಿಕಿತ್ಸೆ ಮುಂದುವರಿದಿದೆ. ವಿಜಯ್ ಪರಿಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ:ಅವನನ್ನು ಸೋಲಿಸಿ ಎಂದು ದೇವೇಗೌಡ್ರು ಎದೆ ಬಡ್ಕಂಡ್ರು, ಆದ್ರೂ ನಾನು ಹೆಚ್ಚಿನ ಅಂತರದಲ್ಲಿ ಗೆದ್ದೆ: ಸಚಿವ ಕೆ.ಎನ್.ರಾಜಣ್ಣ
ನಾಲ್ವರು ಸ್ನೇಹಿತರು ಮದ್ದೂರಿನ ಬೆಸಗರಹಳ್ಳಿಗೆ ಬಟ್ಟೆ ತರಲು ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದಿದೆ. ವಾಹನ ಚಲಾಯಿಸುತ್ತಿದ್ದ ಮಂಜೇಶ್​ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾಗಿದ್ದ. ಅಪಘಾತಕ್ಕೂ ಮುನ್ನ ಈ ನಾಲ್ವರು ಕಾರಿನಲ್ಲಿ ಜಾಲಿಯಾಗಿ ಹಾಡು ಹೇಳಿಕೊಂಡು ಬಂದಿದ್ದು, ವಿಡಿಯೋ ಕೂಡ ಮಾಡಿಕೊಂಡಿದ್ದರು. ಆದರೆ ಅದಾದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದರು.
ಕಾರು ರಾಮನಗರದ ಕಡೆಗೆ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂರನೇ ಮಗುವಾದರೆ 5 ಲಕ್ಷ ರೂ. ಕೊಡ್ತಾರಂತೆ!; ಶಿಕ್ಷಣ-ಚಿಕಿತ್ಸೆಯೂ ಉಚಿತ, ಮದ್ವೆ ಖರ್ಚಿಗೂ ಧನಸಹಾಯ: ಇಲ್ಲಿದೆ ವಿವರ..

ಮತ್ತೊಂದು ಲವ್ ಜಿಹಾದ್: ಹಿಂದೂ ಯುವತಿಗೆ ಸುಳ್ಳು ಹೇಳಿ ಪ್ರೀತಿಯ ಸೋಗಲ್ಲಿ ಮೋಸ; ಬಳಿಕ ಕಿರುಕುಳ, ಕೊಲೆ ಬೆದರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + six =
Remember me
