ಬೆಂಗಳೂರು:ರಸ್ತೆ ಅಪಘಾತಕ್ಕೆ ಒಳಗಾಗಿದ್ದ ದ್ವಿಚಕ್ರ ವಾಹನ ಸವಾರನನ್ನು ಕರೆದುಕೊಂಡು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದರೂ ಸಮಯಕ್ಕೆ ಸರಿಯಾಗಿ ಹಾಸಿಗೆ ಸಿಗದ ಕಾರಣ ಅವರು ಮೃತಪಟ್ಟಿದ್ದಾರೆ. ರಾಮಮೂರ್ತಿನಗರ ಸಮೀಪದ ಕಲ್ಕೆರೆ ನಿವಾಸಿ ಶ್ರೀನಿವಾಸ್​ (54) ಮೃತರು. ತಮಿಳುನಾಡು ಮೂಲದ ಶ್ರೀನಿವಾಸ್​, ಕುಟುಂಬದ ಜತೆ ಕಲ್ಕೆರೆಯಲ್ಲಿ ನೆಲೆಸಿದ್ದರು.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್​, ಸೋಮವಾರ ಸಂಜೆ ಕೆ.ಆರ್​.ಪುರ ಕಡೆಯಿಂದ ಹೆಬ್ಬಾಳಕ್ಕೆ ದ್ವಿಚಕ್ರ ವಾಹನದಲ್ಲಿ ಹೊರ ವರ್ತುಲ ರಸ್ತೆಯಲ್ಲಿ​ ತೆರಳುವಾಗ ಮಾರ್ಗ ಮಧ್ಯೆ ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದಿದ್ದರು. ಗಾಯಗೊಂಡಿದ್ದ ಶ್ರೀನಿವಾಸ್​ ರಕ್ಷಣೆ ಜೊಮ್ಯಾಟೋ ಡೆಲಿವರಿ ಹುಡುಗರು ಧಾವಿಸಿದರು. ಕೂಡಲೇ ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ:ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ‌ ಮತ್ತೊಂದು ಎಡವಟ್ಟು; ನಾಪತ್ತೆಯಾಗಿದ್ದ ಸೋಂಕಿತನ ಮೃತದೇಹ ಆಸ್ಪತ್ರೆ ಶವಾಗಾರದಲ್ಲೇ ಪತ್ತೆ!
ಕರೊನಾ ಸೋಂಕಿತರಿಂದ ಹಾಸಿಗೆಗಳು ಭರ್ತಿಯಾಗಿವೆ ಎಂದು ಗಾಯಾಳುವನ್ನು ದಾಖಲು ಮಾಡಿಕೊಳ್ಳಲು ಖಾಸಗಿ ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದಾರೆ. ಅಲ್ಲಿಂದ ಡಾ.ಅಂಬೇಡ್ಕರ್​ ವೈದ್ಯಕೀಯ ಕಾಲೇಜ್​ ಆಸ್ಪತ್ರೆಗೆ ಗಾಯಾಳುವನ್ನು ಕರೆದುಕೊಂಡು ಹೋಗಿದ್ದರು. ಆ ಆಸ್ಪತ್ರೆಯಲ್ಲಿ ಕೂಡ ಕರೊನಾ ಸೋಂಕಿತರ ಕಾರಣಕ್ಕೆ ಚಿಕಿತ್ಸೆ ಸಿಕ್ಕಿಲ್ಲ.
ನಂತರ ಮತ್ತೊಂದು ಖಾಸಗಿ ಆಸ್ಪತ್ರೆಗೆ ಗಾಯಾಳುವನ್ನು ಕರೆದುಕೊಂಡು ಹೋಗಿದ್ದರು. ಅಲ್ಲಿ ಗಾಯಾಳುವನ್ನು ತಪಾಸಣೆ ನಡೆಸಿದ ವೈದ್ಯರು, ಶ್ರೀನಿವಾಸ್​ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ಪೂರ್ವ ವಿಭಾಗ (ಸಂಚಾರ)ದ ಡಿಸಿಪಿ ಶಾಂತರಾಜ್​ ತಿಳಿಸಿದ್ದಾರೆ. ಬಾಣಸವಾಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೀಪಿಕಾ ಅಪ್ಪ-ಅಮ್ಮ, ತಂಗಿಗೂ ಕರೊನಾ ಸೋಂಕು; ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಆಸ್ಪತ್ರೆಯಲ್ಲಿ…

ಹುಡುಗಿಯರನ್ನು ಚುಡಾಯಿಸಿದ್ದಷ್ಟೇ ಅಲ್ಲ, ಪ್ರಶ್ನಿಸಿದವರನ್ನು ಕೊಲೆಗೈದ; ಬೆಟ್ಟ ಏರಿ ಪರಾರಿಯಾದ್ರೂ ಪತ್ತೆ ಮಾಡಿ ಬಂಧಿಸಿದ ಪೊಲೀಸರು..

‘ಆಕ್ಸಿಜನ್ ಲೆವೆಲ್ 74, ಯಾವ ಆಸ್ಪತ್ರೆಯಲ್ಲೂ ಕರೆ ಸ್ವೀಕರಿಸ್ತಿಲ್ಲ.. ಪ್ಲೀಸ್ ಹೆಲ್ಪ್​ ಮಾಡಿ’: ಭಾರತದಲ್ಲಿರುವ ತಂದೆಗಾಗಿ ಅಮೆರಿಕದಲ್ಲಿರುವ ಪುತ್ರಿಯ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + one =
Remember me
