ದಾವಣಗೆರೆ:ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ದಂಪತಿ ದುರ್ಮರಣಕ್ಕೀಡಾಗಿದ್ದಾರೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಒಡೆರಾಯನಹಳ್ಳಿಯ ಸಿದ್ದಮ್ಮ ಮತ್ತು ಹಾಲೇಶಪ್ಪ ದಂಪತಿ ಬೈಕ್​ನಲ್ಲಿ ಹೋಗುತ್ತಿದ್ದರು. ರಾಜನಹಳ್ಳಿಯ 22 ಕೆರೆ ಏತನೀರಾವರಿ ಸಮೀಪದ ಸೇತುವೆ ಮೇಲೆ ಬೈಕ್​ ಚಲಿಸುತ್ತಿತ್ತು. ಹಿಂಬದಿಯಿಂದ ಬಂದ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಿದೆ.ಇದನ್ನೂ ಓದಿರಿಶಾಲಾ-ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿ ದುರ್ಮರಣ
ಅಪಘಾತದಲ್ಲಿ ಸೇತುವೆ ಮೇಲಿಂದ ಕೆಳಗೆ ಬಿದ್ದು ಸಿದ್ದಮ್ಮ(45) ಪ್ರಾಣಬಿಟ್ಟರು. ತಲೆಗೆ ಪೆಟ್ಟಾಗಿ ಹಾಲೇಶಪ್ಪ(52) ಕೂಡ ಸ್ಥಳದಲ್ಲೇ ಕೊನೆಯುಸಿರೆಳೆದರು. ಬೈಕ್​ ನಜ್ಜುಗುಜ್ಜಾಗಿತ್ತು. ಅಪಘಾತದ ಭೀಕರತೆ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಸಿದ್ದಮ್ಮ ಮತ್ತು ಹಾಲೇಶಪ್ಪ ದಂಪತಿ ಇಬ್ಬರೂ ಬೈಕ್​ನಲ್ಲಿ ರಾಣೆಬೆನ್ನೂರಿಗೆ ತೆರಳುತ್ತಿದ್ದರು. ಹರಿಹರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
