ಧಾರವಾಡ:ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಈಗಲೇ ಕಾರ್ಯತಂತ್ರಗಳನ್ನು ರೂಪಿಸಿ ಸಜ್ಜಾಗುತ್ತಿದ್ದರೆ, ಇಲ್ಲೊಂದು ಕಡೆ ನಕಲಿ ಮತದಾರರ ಚೀಟಿಗಳನ್ನೇ ತಯಾರಿಸುವಂಥ ಕೆಲಸವೂ ನಡೆದಿದೆ.
ಧಾರವಾಡದ ಜೆರಾಕ್ಸ್ ಅಂಗಡಿಯೊಂದರಲ್ಲಿ ಹೀಗೆ ನಕಲಿ ವೋಟರ್​ ಐಡಿಗಳನ್ನು ತಯಾರಿಸುತ್ತಿರುವುದು ಪತ್ತೆಯಾಗಿದ್ದು, ಸೈಬರ್ ಕ್ರೈಂ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಧಾರವಾಡದ ಅಂಜುಮಾನ್ ಕಾಂಪ್ಲೆಕ್ಸ್​ನಲ್ಲಿರುವ ಎಂಜೆಆರ್​ ಜೆರಾಕ್ಸ್​ ಅಂಗಡಿಯಲ್ಲಿ ಈ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿದ್ದು, ಅಂಗಡಿಯ ಮಹಮ್ಮದ್ ಅಲಿ ಎಂಬಾತನನ್ನು ಬಂಧಿಸಲಾಗಿದೆ.
ಈತ ಚುನಾವಣಾ ಆಯೋಗದ ವೆಬ್‌ಸೈಟ್ ದುರ್ಬಳಕೆ ಮಾಡಿಕೊಂಡು ಅನಧಿಕೃತವಾಗಿ ಮತದಾರರ ಗುರುತು ಚೀಟಿಗಳನ್ನು ತಯಾರಿಸುತ್ತಿದ್ದ. ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸುವ ಜತೆಗೆ ಈ ಕೃತ್ಯಕ್ಕೆ ಬಳಸುತ್ತಿದ್ದ ಪ್ರಿಂಟರ್​ ಸೇರಿ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನಿಮ್ಮೂರಿಗಿನ್ನು ಇವರೇ ಇನ್​ಸ್ಪೆಕ್ಟರ್; ಇಲ್ಲಿದೆ ಪೂರ್ತಿ ಮಾಹಿತಿ: 12 ಡಿವೈಎಸ್‌ಪಿ, 92 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − eleven =
Remember me
