ಬೆಂಗಳೂರು:ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 15 ಲಕ್ಷ ಮೌಲ್ಯದ 25 ಕೆಜಿ ಗಾಂಜಾವನ್ನ ವಶ ಪಡಿಸಿಕೊಳ್ಳುವಲ್ಲಿ ಆನೇಕಲ್ ಪೋಲೀಸರು ಯಶಸ್ವಿಯಾಗಿದ್ದಾರೆ.
ಆನೇಕಲ್ ಪಟ್ಟಣದ ಸೋಮಶೇಖರ್ ಹಾಗೂ ರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. ಈ ಇಬ್ಬರು ಅಸಾಮಿಗಳು ಬೇಗನೆ ಹಣ ಸಂಪಾದನೆ ಮಾಡಬೇಕೆನ್ನುವ ದುರುದ್ದೇಶದಿಂದ ರಾಜ್ಯ ಹಾಗೂ ಹೊರರಾಜ್ಯಗಳಿಂದ ಗಾಂಜಾವನ್ನ ತಂದು ಸಣ್ಣ ಸಣ್ಣ ಪ್ಯಾಕೆಟ್ ಗಳನ್ನಾಗಿ ಮಾಡಿ ಆನೇಕಲ್ ಪಟ್ಟಣಕ್ಕೆ ಸಮೀಪವಿರುವ ಪ್ರತಿಷ್ಠಿತ ಅಲಯನ್ಸ್ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.
ಕಾಲೇಜು ವಿಧ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಕಲೆಹಾಕಿದ ಆನೇಕಲ್ ಪೋಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆನೇಕಲ್ ಪಟ್ಟಣದ ಅಯೋಧ್ಯೆ ನಗರದ ಮನೆಯೊಂದರಲ್ಲಿ ಗಾಂಜಾ ಸಂಗ್ರಹ ಮಾಡಿರುವುದು ತಿಳಿಯುತ್ತಿದ್ದಂತೆ ಆನೇಕಲ್ ತಹಶೀಲ್ದಾರ್ ಶಿವಪ್ಪ ಲಮಾಣಿ ನೇತೃತ್ವದಲ್ಲಿ ಪೋಲೀಸರು ಮನೆ ಪರಿಶೀಲನೆ ನಡೆಸಿದ ವೇಳೆ 15 ಲಕ್ಷ ಮೌಲ್ಯದ 25 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ವಶಕ್ಕೆ ಪಡೆದ ಆರೋಪಿಗಳ ವಿರುದ್ಧ ಆನೇಕಲ್ ಪೊಲೀಸರು ಎನ್ ಡಿ ಪಿ ಎಸ್ ಅ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳನ್ನು ಜೈಲಿಗೆ ಕಳುಹಿಸಿದ್ದಾರೆ.
ಇದನ್ನೂ ಓದಿ:ಗಾಂಜಾ ಮಾರಿ ಜೈಲು ಪಾಲಾದ ಗಂಡ; ಪತಿಯ ವ್ಯವಹಾರವನ್ನೇ ಮುಂದುವರೆಸಿದ್ದ ಚಾಲಾಕಿ ಪತ್ನಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + five =
Remember me
