ಬೆಂಗಳೂರು:ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆಯನ್ನೇ ವಿವಾಹವಾದ ಆರೋಪಿ ವಿರುದ್ಧ ರೇಪ್​ ಕೇಸ್​ ರದ್ದು ಮಾಡಿ ಪ್ರಕರಣ ಮುಕ್ತಾಯಗೊಳಿಸಿ ಹೈಕೋರ್ಟ್​ ಆದೇಶಿಸಿದೆ.
ಸಂತ್ರಸ್ತೆಯನ್ನು ವಿವಾಹವಾದ ಬಳಿಕವೂ ಬಂಧಿಸಿ ಜೈಲಿಗೆ ಕಳುಹಿಸಿದ್ದ ಪೊಲೀಸರ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಆರೋಪಿ, ತನ್ನ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದ್ದ. ಅರ್ಜಿ ವಿಚಾರಣೆಗೆ ಹಾಜರಾಗಿದ್ದ ಸಂತ್ರಸ್ತೆ ದೂರು ಹಿಂಪಡೆಯುವುದಾಗಿ ತಿಳಿಸಿದ್ದರು. ಆರೋಪಿ ಸಹ, ಸಂತ್ರಸ್ತೆಯನ್ನು ವಿವಾಹವಾಗಿದ್ದೇನೆ. ಜೀವನಪೂರ್ತಿ ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ವಾಗ್ದಾನ ನೀಡಿ ಪ್ರಮಾಣಪತ್ರ ಸಲ್ಲಿಸಿದ್ದ.
ಅದನ್ನು ಪರಿಗಣಿಸಿದ ನ್ಯಾಯಮೂರ್ತಿ ಕೆ. ನಟರಾಜನ್​ ಅವರಿದ್ದ ಪೀಠ, ಅರ್ಜಿದಾರನ ವಿರುದ್ಧದ ಅತ್ಯಾಚಾರ, ಹಣ ವಸೂಲಿ ಮತ್ತು ಜೀವ ಬೆದರಿಕೆ ಪ್ರಕರಣವನ್ನು ರದ್ದುಪಡಿಸಿತಲ್ಲದೆ, ಸಂತ್ರಸ್ತೆಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಯಾವುದೇ ರೀತಿ ತೊಂದರೆ ನೀಡಬಾರದು ಎಂದು ಅರ್ಜಿದಾರನಿಗೆ ಸೂಚಿಸಿತು.
ಜಂಟಿ ಪ್ರಮಾಣಪತ್ರ ಸಲ್ಲಿಕೆ:ಅರ್ಜಿದಾರನ ಪರ ವಕೀಲ ಸಿ.ಎನ್​.ರಾಜು ವಾದ ಮಂಡಿಸಿ, ಸಂತ್ರಸ್ತೆ ಮತ್ತು ಅರ್ಜಿದಾರ ಪರಸ್ಪರ ಪ್ರೀತಿಸುತ್ತಿದ್ದರು. ಭಿನ್ನಾಭಿಪ್ರಾಯದಿಂದ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಆಕೆಗೆ 32 ವರ್ಷವಾಗಿದ್ದು, ದೂರು ದಾಖಲಿಸಿದ ನಂತರ ಪೊಲೀಸರ ಮುಂದೆ ಹಾಜರಾಗಿ ದೂರು ಹಿಂಪಡೆಯುವುದಾಗಿ ತಿಳಿಸಿದ್ದರು. ಆದರೆ, ಪೊಲೀಸರು ಅದಕ್ಕೆ ಒಪ್ಪಿರಲಿಲ್ಲ ಎಂದು ವಿವರಿಸಿದರು.
ಆ ನಂತರ ಸಂತ್ರಸ್ತೆ ಹಾಗೂ ಆರೋಪಿ ಮದುವೆಯಾಗಿದ್ದು, ಠಾಣೆಗೆ ತೆರಳಿ ದೂರು ಹಿಂಪಡೆಯುವುದಾಗಿ ತಿಳಿಸಿದ್ದರು. ಹೀಗಿದ್ದರೂ, ಪೊಲೀಸರು ದೂರುದಾರಳ ಹೇಳಿಕೆ ದಾಖಲಿಸದೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಸದ್ಯ ಇಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮದುವೆಯಾಗಿ ನೆಮ್ಮದಿಯ ಸಂಸಾರ ನಡೆಸುತ್ತಿದ್ದಾರೆ. ಪ್ರಕರಣ ಹಿಂಪಡೆಯಲು ಇಬ್ಬರೂ ಜಂಟಿ ಪ್ರಮಾಣಪತ್ರ ಸಲ್ಲಿಸಿದ್ದು, ಅದನ್ನು ಮಾನ್ಯ ಮಾಡಿ ಪ್ರಕರಣ ರದ್ದು ಪಡಿಸಬೇಕು ಎಂದು ಕೋರಿದರು. ಪ್ರಮಾಣಪತ್ರ ಪರಿಗಣಿಸಿದ ಹೈಕೋರ್ಟ್​, ಆರೋಪಿ ವಿರುದ್ಧದ ಪ್ರಕರಣ ರದ್ದು ಪಡಿಸಿದೆ.
ಪ್ರಕರಣವೇನು?:ಬೆಂಗಳೂರಿನ ಯುವತಿಯೊಬ್ಬರು 2022ರ ಅಕ್ಟೋಬರ್​ನಲ್ಲಿ ಪೊಲೀಸರಿಗೆ ದೂರಿ ನೀಡಿ, ಆರೋಪಿ ಹುಟ್ಟುಹಬ್ಬದ ಆಚರಣೆಗಾಗಿ ಆತನ ಮನೆಗೆ ಆಹ್ವಾನಿಸಿದ್ದ. ಮದ್ಯಪಾನ ಮಾಡಿದ್ದ ಆತ, ನನ್ನ ಮೇಲೆ ಅತ್ಯಾಚಾರವೆಸಗಿದ್ದ ಎಂದು ಆರೋಪಿಸಿದ್ದರು. ಪೊಲೀಸರು ಆರೋಪಿ ವಿರುದ್ಧ ಅತ್ಯಾಚಾರ, ಜೀವ ಬೆದರಿಕೆ ಮತ್ತು ಹಣ ವಸೂಲಿ ಮತ್ತಿತರ ಆರೋಪಗಳಡಿ ಎಫ್​ಐಆರ್​ ದಾಖಲಿಸಿದ್ದರು. ಪ್ರಕರಣ ರದ್ದುಕೋರಿ ಆರೋಪಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ.
ಪಂಚರತ್ನ ರಥಯಾತ್ರೆ ಮತ್ತೆ ಆರಂಭ: 18 ದಿನ ಯಾತ್ರೆ

ಒಂಟಿ ಮನೆ ಯೋಜನೆಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − two =
Remember me
