ಬೆಂಗಳೂರು:ಮುಸ್ಲಿಂ ಮಹಿಳೆಯೊಂದಿಗೆ ಮಾತನಾಡಿದ್ದನ್ನು ಆಕ್ಷೇಪಿಸಿ ಹಿಂದು ವ್ಯಕ್ತಿ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ ಮತ್ತು ಆತನಿಗೆ ಸೇರಿದ ಚಿನ್ನಾಭರಣಗಳನ್ನು ದೋಚಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಚಿತ್ರದುರ್ಗದ ನಿವಾಸಿಗಳಾದ ಯೂನಸ್ ಅಹ್ಮದ್, ನವೀದ್, ಸಯ್ಯದ್ ಸಾದತ್ ಮತ್ತು ಜಾಫರ್ ಸಿದ್ದಕಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರ ಪೀಠ ಈ ಆದೇಶ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ ಪರಿಶೀಲಿಸಿದ ನ್ಯಾಯಾಲಯ, ಈ ಘಟನೆ ಕ್ಷುಲ್ಲಕ ವಿಚಾರಕ್ಕೆ ಸಂಭವಿಸಿದೆ. ಇಲ್ಲಿ ಅರ್ಜಿದಾರರು ಸೇರಿ ಗುಂಪೊಂದು ದೂರುದಾರ ಮೇಲೆ ಕೈ, ಕಾಲು ಮತ್ತು ಕಲ್ಲಿನಿಂದ ಹಲ್ಲೆ ನಡೆಸಿದೆ. ಮಾತ್ರವಲ್ಲದೆ, ಅವರ ಕಾರು ಹಾನಿಗೊಳಿಸಿ, ಬೆಲೆಬಾಳುವ ವಸ್ತುಗಳನ್ನು ದರೋಡೆ ಮಾಡಿದೆ. ಅರ್ಜಿದಾರರು 2024ರ ಏ.4ರಿಂದ ಬಂಧನದಲ್ಲಿದ್ದು, ತನಿಖೆಯು ಗಣನೀಯ ಪ್ರಮಾಣದಲ್ಲಿ ಪ್ರಗತಿ ಹೊಂದಬಹುದಿತ್ತು. ಕಸ್ಟೋಡಿಯಲ್ ವಿಚಾರಣೆ ಸಹ ಪೂರ್ಣಗೊಳ್ಳುತ್ತಿತ್ತು. ಅರ್ಜಿದಾರರರು ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಅಭಿಪ್ರಾಯಪಟ್ಟು ಜಾಮೀನು ನೀಡಿದೆ.
ಅರ್ಜಿದಾರರು ತಲಾ 2 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಣಾ ನ್ಯಾಯಾಲಯಕ್ಕೆ ನಿಯಮಿತವಾಗಿ ಹಾಜರಾಗಬೇಕು. ಪ್ರತಿ ತಿಂಗಳ ಎರಡನೇ ಭಾನುವಾರದಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆ ನಡುವೆ ತನಿಖಾಧಿಕಾರಿ ಮುಂದೆ ಹಾಜರಬೇಕು.
ವಿಚಾರಣಾ ನ್ಯಾಯಾಲಯದ ಅನುಮತಿಯಿಲ್ಲದೆ ಅದರ ವ್ಯಾಪ್ತಿಯಿಂದ ಹೊರಹೋಗುವಂತಿಲ್ಲ. ಸಾಕ್ಷಿಗಳನ್ನು ಬೆದರಿಸುವ ಅಥವಾ ಸಾಕ್ಷ್ಯಧಾರಗಳನ್ನು ತಿರಲು ಯತ್ನಿಸಬಾರದು. ಈ ಷರತ್ತು ಉಲ್ಲಂಘಿಸಿದರೆ ಅರ್ಜಿದಾರರ ಜಾಮೀನು ರದ್ದತಿಗೆ ಪೊಲೀಸರು ನ್ಯಾಯಾಲಯವನ್ನು ಕೋರಬಹುದು ಎಂದು ಹೈಕೋರ್ಟ್ ಷರತ್ತು ವಿಧಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 − 3 =
Remember me
