ಬೆಂಗಳೂರು:ಕನ್ನಡವನ್ನು ಕಡ್ಡಾಯಗೊಳಿಸುವ ಕಾಯ್ದೆ ಜಾರಿಗೆ ಬರಲಿದ್ದು, ಈ ಸಂಬಂಧ ಪ್ರಸಕ್ತ ಅಧಿವೇಶನದಲ್ಲೇ ವಿಧೇಯಕ ಮಂಡನೆಯಾಗಲಿದೆ. ನಾಡು- ನುಡಿಗೆ ಕಾನೂನು ಬದ್ಧ ರಕ್ಷಣೆ ಒದಗಿಸಲು ಈ ಕಾಯ್ದೆ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ವಿಧಾನಸಭೆಯಲ್ಲಿ ಘೊಷಿಸಿದ್ದಾರೆ.
ಹಿಂದಿ ದಿವಸ ಹೆಸರಿನಲ್ಲಿ ಆ ಭಾಷೆಯನ್ನು ಹೇರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಕನ್ನಡ ಪರ ನಿರ್ಣಯವನ್ನು ಅಂಗೀಕರಿಸುವಂತೆ ಆಗ್ರಹಿಸಿದರು. ಜೆಡಿಎಸ್ ಶಾಸಕರು ಬೆಂಬಲಕ್ಕೆ ನಿಂತು ಸರ್ಕಾರದೊಂದಿಗೆ ವಾಗ್ವಾದ ಆರಂಭಿಸಿದರು. ಈ ಹಂತದಲ್ಲಿ ಸರ್ಕಾರದ ನಿಲುವು ಘೊಷಿಸಿದ ಬೊಮ್ಮಾಯಿ, ಭಾರತ ಒಕ್ಕೂಟ ರಾಷ್ಟ್ರ, ವಿವಿಧ ಭಾಷೆ, ಸಂಸ್ಕೃತಿಗಳ ನೆಲೆವೀಡು. ಒಂದು ಭಾಷೆ ಹೇರಲು ಇಲ್ಲಿ ಅವಕಾಶವಿಲ್ಲ. ಕನ್ನಡ ಭಾಷೆ, ನೆಲ, ಜಲ ವಿಷಯದಲ್ಲಿ ಕನಿಷ್ಠ ರಾಜಿಯೂ ಇಲ್ಲ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಸ್ಪಷ್ಟಪಡಿಸಿದರು.
ಹೊಸ ಶಿಕ್ಷಣ ನೀತಿ ಮೂಲಕ ವೃತ್ತಿ ಶಿಕ್ಷಣದಲ್ಲೂ ಕನ್ನಡ ಜಾರಿಗೊಳಿಸುತ್ತಿದ್ದೇವೆ. ಈಗಾಗಲೇ ಇಂಜಿನಿಯರಿಂಗ್ ಕೋರ್ಸ್​ನಲ್ಲಿ ಕನ್ನಡ ಮಾಧ್ಯಮ ಜಾರಿ ತರಲಾಗಿದೆ. 1 ಸೆಮಿಸ್ಟರ್ ಕೂಡ ಆಗಿದೆ. ಕನ್ನಡದಲ್ಲೇ ಇಂಜಿನಿಯರಿಂಗ್ ಕೋರ್ಸ್ ಮಾಡಲು ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ಬೊಮ್ಮಾಯಿ ತಿಳಿಸಿದರು.
ಯಾವುದೇ ರಾಜಿ ಇಲ್ಲ:ಕನ್ನಡ ನೆಲ, ಜಲ, ಭಾಷೆ ವಿಚಾರದಲ್ಲಿ ನಾವು ರಾಜಕೀಯ ಮೀರಿ ನಿರ್ಣಯ ಕೈಗೊಂಡಿದ್ದೇವೆ. ಕನ್ನಡ ಉಳಿಸಿ, ಬೆಳೆಸಲು ಸರ್ಕಾರ ಬದ್ಧವಾಗಿದೆ. ಇದುವರೆಗೆ ಕನ್ನಡ ಭಾಷೆಗಾಗಿ ಪ್ರಾಧಿಕಾರ ಇತ್ತು. ಕನ್ನಡವೇ ಕಡ್ಡಾಯ ಎಂಬ ಮಾತುಗಳನ್ನು ಸಾಕಷ್ಟು ಕೇಳಿಯಾಗಿತ್ತು. ಈಗ ನಾವು ಕನ್ನಡ ಭಾಷೆಯನ್ನು ರಾಜ್ಯದಲ್ಲಿ ಕಡ್ಡಾಯಗೊಳಿಸಲು ಕಾಯ್ದೆಯನ್ನೇ ತರುತ್ತಿ ದ್ದೇವೆ. ಕನ್ನಡಕ್ಕಾಗಿ ಕಾಯ್ದೆ ತರುತ್ತಿರುವುದು ಇದೇ ಮೊದಲು ಎಂದು ಹೇಳಿದರು.
ನಿರೀಕ್ಷೆ ಹೆಚ್ಚಿಸುತ್ತಿರುವ ‘ವಿಜಯಾನಂದ’ ಚಿತ್ರ; ಡಾ. ವಿಜಯ ಸಂಕೇಶ್ವರ ಪಾತ್ರದಲ್ಲಿ ನಿಹಾಲ್- ಕ್ಯಾರೆಕ್ಟರ್ ಇಂಟ್ರೋ ರಿಲೀಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
