ಬೆಂಗಳೂರು:ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿ ಮತ್ತು ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶಗಳನ್ನು ಒದಗಿಸುವ, ಕನ್ನಡ ಕಡೆಗಣಿಸಿದರೆ ದಂಡಿಸುವ ಅಧಿಕಾರವನ್ನು ಹೊಂದಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022ಕ್ಕೆ ನಿಯಮಗಳನ್ನು ರೂಪಿಸಲಾಗಿದ್ದು, ಶೀಘ್ರದಲ್ಲೇ ಜಾರಿಗೊಳಿಸಲು ಸರ್ಕಾರ ಪ್ರಯತ್ನಶೀಲವಾಗಿದೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಡನೆ ಯಾಗಿದ್ದ ವಿಧೇಯಕಕ್ಕೆ ಶಾಸನ ಸಭೆ ಮಂಜೂರಾತಿ ನೀಡಿತ್ತು. ಬಳಿಕ ಮಾರ್ಚ್ ವೇಳೆಗೆ ರಾಜ್ಯಪಾಲರ ಅಂಗೀಕಾರವೂ ಆಗಿತ್ತು. ಮುಂದಿನ ಹಂತವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿಯಮಗಳ ಕರಡು ರೂಪಿಸಿತ್ತು. ಈ ಕಾಯ್ದೆ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಜವಾಬ್ದಾರಿಯೂ ಇರುವುದರಿಂದ ಹಾಗೂ ಈ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಮಾಲೋಚನೆ ಪ್ರಕ್ರಿಯೆ ನಡೆಸಿ ಅಭಿಪ್ರಾಯ ಸಂಗ್ರಹಿಸುತ್ತಿದೆ.
ನವೆಂಬರ್​ನಲ್ಲೇ ಕಾನೂನು ಜಾರಿಗೆ ಸರ್ಕಾರ ಬಯಸಿದೆ. ಹೀಗಾಗಿ ಈ ಪ್ರಕ್ರಿಯೆಗೆ ವೇಗ ನೀಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದು, ಇಲಾಖಾ ಪ್ರಧಾನ ಕಾರ್ಯದರ್ಶಿ ಮಂಜುಳಾ ಕೂಡ ಸಚಿವರ ಅಭಿಪ್ರಾಯಕ್ಕೆ ದನಿಗೂಡಿಸಿದ್ದಾರೆ.
ಕನ್ನಡ ಭಾಷೆಯ ಪ್ರಸಾರ ಮತ್ತು ಪ್ರಚಾರ, ಕನ್ನಡವನ್ನು ಅಧಿಕೃತ ಭಾಷೆಯಾಗಿ ಅನುಷ್ಠಾನಗೊಳಿಸುವಲ್ಲಿ ಸೂಕ್ತ ಕ್ರಮಗಳನ್ನು ಮತ್ತು ಚಟುವಟಿಕೆಗಳನ್ನು ಸಂಯೋಜಿಸಲು ಸಮರ್ಪಕವಾದ ಕಾನೂನಿನ ಅಗತ್ಯವಿದೆ ಎಂದು ವಿಧೇಯಕ ಮಂಡಿಸುವಾಗ ಸರ್ಕಾರ ಹೇಳಿಕೊಂಡಿತ್ತು.
ಉನ್ನತ, ತಾಂತ್ರಿಕ, ವೃತ್ತಿ ಶಿಕ್ಷಣದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಪರಿಚಯಿಸುವುದು, ಕನ್ನಡ ಮಾಧ್ಯಮದಲ್ಲಿ ಓದಿದ ಎಲ್ಲರಿಗೂ ಮೀಸಲಾತಿ ಕಲ್ಪಿಸುವುದು, ರಾಜ್ಯ ಸರ್ಕಾರದ ಎಲ್ಲ ವಲಯಗಳಲ್ಲಿ ನೇಮಕಾತಿ ವೇಳೆ ಕನ್ನಡ ಭಾಷಾ ಜ್ಞಾನ ಕಡ್ಡಾಯ, ನ್ಯಾಯಾಲಯಗಳಲ್ಲಿ ಮತ್ತು ನ್ಯಾಯಮಂಡಳಿಗಳಲ್ಲಿ ಕನ್ನಡ ಬಳಕೆ, ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಾಂಶಗಳಲ್ಲಿ ಕನ್ನಡದ ಬಳಕೆಗಾಗಿ ಕ್ರಮ, ಕೈಗಾರಿಕೆಗಳು ತೆರಿಗೆ ರಿಯಾಯಿತಿ ಹಾಗೂ ಇನ್ನಿತರ ಸೌಲಭ್ಯಗಳನ್ನು ಪಡೆಯಲು ಕನ್ನಡಿಗರಿಗೆ ಮೀಸಲಾತಿ ನೀಡಬೇಕೆಂಬ ಷರತ್ತು ಸೇರಿ ಉದ್ಯೋಗ ಪೋರ್ಟಲ್ ಸ್ಥಾಪಿಸಲಾಗುತ್ತದೆ. ಮುಖ್ಯವಾಗಿ ಅಧಿನಿಯಮದ ನಿಬಂಧನೆಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸಲು ಅವಕಾಶ ಇರಲಿದೆ.
ಕೊನೆಗೂ ಅಲ್ಲಿ ರಾಜ್ಯೋತ್ಸವ ಆಚರಿಸಲು ಅವಕಾಶ ಸಿಕ್ತು: ಉಚ್ಚ ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − ten =
Remember me
