ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಹಾಗೂ ಬಂಡವಾಳ ಹೂಡಿಕೆ ಮತ್ತು ವಿಪುಲ ಉದ್ಯೋಗಾವಕಾಶ ಸೃಷ್ಟಿಸುವ ಗುರಿಯೊಂದಿಗೆ 2022-23ನೇ ಸಾಲಿನಲ್ಲಿ ಒಟ್ಟಾರೆ 55,657 ಕೋಟಿ ರೂ. ಅನುದಾನ ಮೀಸಲಿಡಲಾಗಿದ್ದು, ಉದ್ಯೋಗಾವಕಾಶ ಕಲ್ಪಿಸುವ ಕೈಗಾರಿಕೆಗಳಿಗೆ ಹೆಚ್ಚಿನ ಅಧಿಕ ಪ್ರೋತ್ಸಾಹ ನೀಡಲು ಉದ್ದೇಶಿಸಲಾಗಿದೆ. ಜವಳಿ, ಆಟಿಕೆ ತಯಾರಿಕೆ, ನಿತ್ಯ ಬಳಕೆ ಗ್ರಾಹಕ ಉತ್ಪನ್ನಗಳು (ಎಫ್​ಎಂಸಿಜಿ), ಚರ್ಮ ಉತ್ಪನ್ನಗಳು, ಆಹಾರ ಸಂಸ್ಕರಣೆ ಮತ್ತು ಚಿನ್ನಾಭರಣ ತಯಾರಿಕೆ.. ಇತ್ಯಾದಿ ಹೆಚ್ಚು ಉದ್ಯೋಗ ಸೃಷ್ಟಿಸುವ ವಲಯಗಳಿಗೆ ಆದ್ಯತೆ ನೀಡಿ, ಹೂಡಿಕೆದಾರರನ್ನು ಆಕರ್ಷಿಸಲು ಸರ್ಕಾರ ನಿರ್ಧರಿಸಿದೆ.
ಹೊಸ ಕೈಗಾರಿಕೆಗಳ ಸ್ಥಾಪನೆ:ಆರ್ಥಿಕ ದುರ್ಬಲ ವರ್ಗದ ಜನರಿಗೆ ಉದ್ಯಮ ಆರಂಭಿಸಲು ಉತ್ತೇಜಿಸಲು ಕೆಐಎಡಿಬಿ/ಕೆಎಸ್​ಎಸ್​ಐಡಿಸಿ ಸಂಸ್ಥೆಗಳು ಸ್ಥಾಪಿಸುವ ಹೊಸ ಕೈಗಾರಿಕಾ ಪ್ರದೇಶಗಳಲ್ಲಿನ ಸಣ್ಣ ನಿವೇಶನಗಳಲ್ಲಿ ಆರ್ಥಿಕ ದುರ್ಬಲ ವರ್ಗಕ್ಕೆ ಆದ್ಯತೆ ನೀಡಲು ಹಾಗೂ ಚೆನ್ನೈ- ಬೆಂಗಳೂರು – ಮುಂಬೈ ಕಾರಿಡಾರ್ ವ್ಯಾಪ್ತಿಯಲ್ಲಿರುವ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಲು ನಿರ್ಧರಿಸಲಾಗಿದೆ. ಜತೆಗೆ, ರಾಜ್ಯದಲ್ಲಿ ದೊಡ್ಡ ಗಾತ್ರದ ಹೂಡಿಕೆ ಪ್ರದೇಶಗಳು ಮತ್ತು ಕೈಗಾರಿಕಾ ವಸಾಹತುಗಳ ಸ್ಥಾಪನೆ, ಕಾರ್ಯಾಚರಣೆ, ನಿಯಂತ್ರಣ ಮತ್ತು ನಿರ್ವಹಣೆಗಾಗಿ ‘ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ’ ರಚಿಸಲು ನಿರ್ಧರಿಸಲಾಗಿದ್ದು, ಆರಂಭದಲ್ಲಿ ತುಮಕೂರು ಮತ್ತು ಧಾರವಾಡ ಜಿಲ್ಲೆಗಳಲ್ಲಿ ವಿಶೇಷ ಹೂಡಿಕೆ ಪ್ರದೇಶವನ್ನು ಅಧಿಸೂಚಿಸಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಾಚೆಗೂ ಸ್ಟಾರ್ಟಪ್…:ಬೆಂಗಳೂರು ಮೂಲದ 34 ನವೋದ್ಯಮಗಳು ಈಗಾಗಲೇ ಬಿಲಿಯನ್ ಡಾಲರ್​ಗೂ ಅಧಿಕ ಮೌಲ್ಯವನ್ನು ಹೊಂದಿದ್ದು, ಬೆಂಗಳೂರಿನಾಚೆಗೂ ಸ್ಟಾರ್ಟಪ್​ಗಳನ್ನು ಉತ್ತೇಜಿಸಲು ಸರ್ಕಾರ ಮುಂದಾಗಿದೆ. ಈ ದಿಸೆಯಲ್ಲಿ ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಕರ್ನಾಟಕ ಡಿಜಿಟಲ್ ಎಕನಾಮಿ ಮಿಷನ್​ನಿಂದ ನಿರ್ವಹಿಸಲಾಗುವ ಕ್ಲಸ್ಟರ್​ಗೆ 20 ಕೋಟಿ ರೂ. ನಿಧಿ ಸ್ಥಾಪಿಸಲು ತೀರ್ವನಿಸಲಾಗಿದ್ದು, ಈ ಯೋಜನೆಗಾಗಿ ಪ್ರಸಕ್ತ ಸಾಲಿನಲ್ಲಿ 12 ಕೋಟಿ ರೂ. ಅನುದಾನ ಒದಗಿಸಲು ನಿರ್ಧರಿಸಲಾಗಿದೆ. ಜತೆಗೆ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಕೆಆರ್​ಡಿಬಿ) ಸಹಯೋಗದೊಂದಿಗೆ ಕಲ್ಯಾಣ ಕರ್ನಾಟಕ ಭಾಗದ 25 ನವೋದ್ಯಮಗಳನ್ನು ಆಯ್ಕೆ ಮಾಡಲು ಎಲೆವೇಟ್-ಕಲ್ಯಾಣ ಕರ್ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಜಿಸಲಾಗಿದೆ.
ಸೆಮಿ ಕಂಡಕ್ಟರ್ ಉತ್ಪಾದನೆಗೆ ಪ್ರೋತ್ಸಾಹ:ಕೇಂದ್ರ ಸರ್ಕಾರದ 76 ಸಾವಿರ ಕೋಟಿ ರೂ. ವೆಚ್ಚದ ಸೆಮಿಕಂಡಕ್ಟರ್ ಭಾರತ್ ಅಭಿಯಾನದ ಗರಿಷ್ಠ ಲಾಭ ಪಡೆದುಕೊಂಡು ರಾಜ್ಯದಲ್ಲೂ ಸೆಮಿಕಂಡಕ್ಟರ್ ತಯಾರಿಕೆಗೆ ಹೂಡಿಕೆದಾರರನ್ನು ಆಕರ್ಷಿಸಲು ರಾಜ್ಯ ಸರ್ಕಾರದ ವತಿಯಿಂದ ವಿಶೇಷ ಪೋ›ತ್ಸಾಹಕ ನೀಡಲು ಉದ್ದೇಶಿಸಲಾಗಿದೆ. ವಿದ್ಯುನ್ಮಾನ ಸೆಮಿ ಕಂಡಕ್ಟರ್ ವಿನ್ಯಾಸ ಮತ್ತು ತಯಾರಿಕಾ (ಇಎಸ್​ಡಿಎಂ) ವಲಯದಲ್ಲಿ ದೇಶದಲ್ಲೇ ನಾಲ್ಕನೇ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯ 300ಕ್ಕೂ ಅಧಿಕ ತಯಾರಿಕಾ ಘಟಕಗಳನ್ನು ಹೊಂದಿದೆ. ವಿದ್ಯುನ್ಮಾನ ಉತ್ಪನ್ನ ವಲಯದಲ್ಲಿ ರಾಜ್ಯ ದೇಶದ ಒಟ್ಟಾರೆ ಉತ್ಪನ್ನದ ಶೇ.10 ಕೊಡುಗೆ ನೀಡುತ್ತಿದ್ದು, ಇಎಸ್​ಡಿಎಂ ರಫ್ತಿನಲ್ಲಿ ರಾಜ್ಯದ ಪಾಲು ಶೇ. 64 ಇದೆ. ಜತೆಗೆ, ರಾಜ್ಯದ ಆಂತರಿಕ ಉತ್ಪನ್ನಕ್ಕೆ ಶೇ. 17 ಕೊಡುಗೆ ನೀಡುತ್ತಿದೆ.
ಮೆಗಾ ಜವಳಿ ಪಾರ್ಕ್:ಜವಳಿ ಕ್ಷೇತ್ರದ ಅಭಿವೃದ್ಧಿಗಾಗಿ ಹಲವು ಹೊಸ ಯೋಜನೆಗಳನ್ನು ರೂಪಿಸಲಾಗಿದ್ದು, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕಲಬುರಗಿ ಮತ್ತು ವಿಜಯಪುರದಲ್ಲಿ ಮೆಗಾ-ಟೆಕ್ಸ್​ಟೈಲ್ ಪಾರ್ಕ್ ಸ್ಥಾಪಿಸಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲ್ಲಿಲು ಉದ್ದೇಶಿಸಲಾಗಿದೆ. ಬಳ್ಳಾರಿಯಲ್ಲೂ ಜೀನ್ಸ್ ಮತ್ತು ಉಡುಪುಗಳ ತಯಾರಿಕೆ ಉತ್ತೇಜಿಸಲು ಟೆಕ್ಸ್​ಟೈಲ್ ಪಾರ್ಕ್ ಪ್ರಾರಂಭಿಸಲು ಸರ್ಕಾರ ಉದ್ದೇಶಿಸಿದೆ. ಇದಲ್ಲದೆ, ಧಾರವಾಡದ ನವಲಗುಂದದಲ್ಲಿ ಹಾಗೂ ಹಾವೇರಿಯ ರಾಣೆಬೆನ್ನೂರು ತಾಲೂಕಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನೂತನ ಜವಳಿ ಪಾರ್ಕ್​ಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ನೂತನ ಜವಳಿ ಪಾರ್ಕ್​ಗಳಿಂದ 5 ಸಾವಿರಕ್ಕೂ ಅಧಿಕ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅಂದಾಜಿಸಲಾಗಿದೆ.
ತೆರಿಗೆ ಪಾವತಿ ಅವಧಿ ವಿಸ್ತರಣೆ:ಮೋಟಾರು ವಾಹನ ತೆರಿಗೆ ಅವಧಿ ಮುಕ್ತಾಯಗೊಂಡ ನಂತರ ತೆರಿಗೆ ಪಾವತಿಗೆ ನೀಡಲಾಗುತ್ತಿದ್ದ 15 ದಿನಗಳ ಕಾಲಾವಕಾಶವನ್ನು 1 ತಿಂಗಳಿಗೆ ವಿಸ್ತರಿಸಲು ನಿರ್ಧರಿಸಲಾಗಿದೆ.
ಜ್ಯುವೆಲರಿ ಪಾರ್ಕ್:ಚಿನ್ನಾಭರಣ ಕುಶಲಕರ್ವಿುಗಳ ಹಾಗೂ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ‘ಸಾರ್ವಜನಿಕ-ಖಾಸಗಿ ಸಹ ಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ‘ಮೆಗಾ ಜ್ಯುವೆಲರಿ ಪಾರ್ಕ್’ ಸ್ಥಾಪನೆಗೆ ಉದ್ದೇಶಿಸಲಾಗಿದೆ.
ಮೈಶುಗರ್ ಕಾರ್ಖಾನೆ ಪುನರಾರಂಭ:ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿರುವ ಮೈಶುಗರ್ ಕಾರ್ಖಾನೆ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದ್ದು, ಮುಂದಿನ 2 ವರ್ಷಗಳ ಅವಧಿಗೆ ಸರ್ಕಾರದ ವತಿಯಿಂದಲೇ ಪ್ರಾಯೋಗಿಕವಾಗಿ ಕಾರ್ಖಾನೆ ನಡೆಸಲು ಉದ್ದೇಶಿಸಲಾಗಿದೆ. ಕಾರ್ಖಾನೆಯಲ್ಲಿನ ಯಂತ್ರೋಪಕರಣಗಳ ದುರಸ್ತಿಗೆ 50 ಕೋಟಿ ರೂ. ಒದಗಿಸುವ ಜತೆಗೆ, ಹಣಕಾಸು ಸಂಸ್ಥೆಗಳಿಂದ ಬಂಡವಾಳ ಪಡೆಯಲು ವ್ಯವಸ್ಥೆ ರೂಪಿಸಲಾಗುವುದು ಎಂದು ಸಿಎಂ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 2 =
Remember me
