ಬೆಂಗಳೂರು:ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಮುನ್ನ ನೀಡಿದ ಮಾತಿನಂತೆ ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಲು, ಜನರಿಗೆ ಶುದ್ಧ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಬದ್ಧವಾಗಿರುವುದಾಗಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಕಂದಾಯ ಇಲಾಖೆಯಲ್ಲಿ ಬೇರುಬಿಟ್ಟಿರುವ ಭ್ರಷ್ಟಾಚಾರವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಎರಡು ತಿಂಗಳ ಅವಧಿಯಲ್ಲಿ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ತರಲಾಗಿದೆ. ಅಧಿಕಾರಿ ವಲಯಕ್ಕೆ ಚುರುಕು ಮುಟ್ಟಿಸಲಾಗಿದೆ. ಅಲ್ಲದೆ, ಕಳೆದ ಹಲವಾರು ವರ್ಷಗಳಿಂದ ಬಾಕಿ ಇದ್ದಂತಹ ಅಧಿಕಾರಿಗಳ ಮೇಲಿನ ಶಿಸ್ತುಕ್ರಮ ಕಡತಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ತಪ್ಪಿತಸ್ಥಅಧಿಕಾರಿಗಳಿಗೆ ಶಿಕ್ಷೆಯನ್ನು ಖಚಿತಗೊಳಿಸಲು ಕೆಲಸವೂ ನಡೆಯುತ್ತಿದೆ ಎಂದು ಹೇಳಿದ್ದಾರೆ. ಜುಲೈ 26 ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ್ದ 66 ಅಧಿಕಾರಿಗಳ ವಿರುದ್ಧದ ವಿಚಾರಣೆ ನಡೆಸಿ ಶಿಕ್ಷೆಯ ಪ್ರಮಾಣವನ್ನು ಘೋಷಿಸಲಾಗಿತ್ತು. ಇದೀಗ ಮತ್ತೆ ತೀರ್ಮಾನವಾಗದೆ ಬಾಕಿ ಇದ್ದಂತಹ ಸುಮಾರು 108 ಪ್ರಕರಣಗಳನ್ನು ಪ್ರಸ್ತುತ ಇತ್ಯರ್ಥಗೊಳಿಸಲಾಗಿದೆ. ಭ್ರಷ್ಟಾಚಾರ ಸಾಬೀತಾಗಿರುವ ಅಧಿಕಾರಿಗಳಿಗೆ ಶಿಕ್ಷೆಯನ್ನೂ ಖಚಿತಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಲಾಖೆಯ ಅಧಿಕಾರಿಗಳು/ನೌಕರರ ವಿರುದ್ಧದ ಸುಮಾರು 108 ಶಿಸ್ತುಕ್ರಮ ಕಡತಗಳು ವಿಚಾರಣೆಯಾಗದೆ ಅಥವಾ ವಿಚಾರಣೆ ಆಗಿಯೂ ಇತ್ಯರ್ಥಗಳಿಸದೆ ಕಳೆದ 5 ರಿಂದ 7 ವರ್ಷಗಳ ಕಾಲ ಸಚಿವಾಲಯದಲ್ಲೇ ಬಾಕಿ ಇದ್ದವು. ಪ್ರಸ್ತುತ ಆ ಎಲ್ಲ ಕಡತಗಳನ್ನೂ ವಿಲೇವಾರಿ ಮಾಡಲಾಗಿದೆ.ಸದರಿ ಪ್ರಕರಣಗಳ ಪೈಕಿ ತಹಶೀಲ್ದಾರ್ 35, ಜಿಲ್ಲಾ ನೋಂದಣಾಧಿಕಾರಿ 06, ಕೇಂದ್ರ ಸ್ಥಾನಿಕ ಸಹಾಯಕರು 13, ಹಿರಿಯ ಉಪ ನೋಂದಣಾಧಿಕಾರಿಗಳು 20, ಉಪ ನೋಂದಣಿ ಅಧಿಕಾರಿಗಳು 26, ಪ್ರಥಮ ದರ್ಜೆ ಸಹಾಯಕರು 02, ದ್ವಿತೀಯ ದರ್ಜೆ ಸಹಾಯಕರು 06 ಪ್ರಕರಣಗಳು ಒಳಗೊಂಡಿವೆ ಎಂದು ಹೇಳಿದ್ದಾರೆ.
ಈ ಪ್ರಕರಣಗಳ ಪೈಕಿ 4 ಜನ ಅಧಿಕಾರಿ/ನೌಕರರಿಗೆ ವಾರ್ಷಿಕ ವೇತನ ಬಡ್ತಿ ತಡೆಹಿಡಿಯುವ ದಂಡನೆ ನೀಡಲಾಗಿದೆ. ಶಿಸ್ತುಕ್ರಮ ಜರುಗಿಸುವ ಮುನ್ನವೇ ನಿವೃತ್ತಿಗೊಂಡಿರುವ 06 ಜನ ಅಧಿಕಾರಿ/ನೌಕರರಿಗೆ ನಿವೃತ್ತಿ ವೇತನದಲ್ಲಿ ಶೇ.05 ರಿಂದ ಶೇ.10ರ ವರೆಗೆ ನಿವೃತ್ತಿ ವೇತನ ಕಡಿತಗೊಳಿಸುವ ಶಿಕ್ಷೆ ನೀಡಲಾಗಿದೆ. ಉಳಿದಂತೆ ಲೋಕಾಯುಕ್ತಕ್ಕೆ 15 ಪ್ರಕರಣಗಳನ್ನು ತನಿಖೆಗೆ ವಹಿಸಲಾಗಿದೆ. 30 ಪ್ರಕರಣಗಳನ್ನು ಇಲಾಖೆ ವಿಚಾರಣೆ ಕೈಗೊಳ್ಳಲು ಶಿಫಾರಸು ಮಾಡಲಾಗಿದೆ. 1 ಪ್ರಕರಣದಲ್ಲಿ ವಾಗ್ದಂಡನೆ ನೀಡಿದ್ದರೆ, ಲೋಕಾಯುಕ್ತ ತನಿಖಾ ವರದಿ ಶಿಫಾರಸಿನಂತೆ ಉಳಿದ ಪ್ರಕರಣಗಳಲ್ಲಿ ಅಧಿಕಾರಿ/ನೌಕರರಿಗೆ ಮೇಲಿನ ಆರೋಪಗಳು ಸಾಬೀತಾಗದ ಕಾರಣ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ವಿವರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
