
ಬೆಂಗಳೂರು:ಪತ್ರಕರ್ತರ ಬೇಡಿಕೆಗಳ ಈಡೇರಿಕೆಗೆ ಸೂಕ್ತ ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ನಡೆದ ಪತ್ರಕರ್ತರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು.
ಉಚಿತ ಬಸ್ ಪಾಸ್‌ಗೆ ಆಗ್ರಹ:ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ, ಪತ್ರಕರ್ತರನ್ನು ಯಶಸ್ವಿನಿ ಯೋಜನೆ ವ್ಯಾಪ್ತಿಗೆ ಒಳಪಡಿಸಬೇಕು. ಪತ್ರಕರ್ತರ ಪಿಂಚಣಿಗೆ ಕಠಿಣ ಷರತ್ತು ವಿಧಿಸಿರುವುದನ್ನು ಸಡಿಲಿಸಿ, ಸರಳೀಕರಣ ಮಾಡಬೇಕು. ಈ ಮೊದಲಿದ್ದಂತೆ ಖಜಾನೆ ಮೂಲಕವೇ ಮಾಸಾಶನ ಪಾವತಿಯಾಗಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದ ಅಧ್ಯಕ್ಷ ಶಿವಾನಂದ ತಗಡೂರು ಆಗ್ರಹಿಸಿದರು.
ಭವನಗಳ ಅನುದಾನಕ್ಕೆ ಮನವಿ:ತಾಲ್ಲೂಕು ಮಟ್ಟದಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಅನುದಾನ ನೀಡಬೇಕು. ಸ್ಥಳೀಯ ಸಂಸ್ಥೆಗಳು, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪತ್ರಕರ್ತರಿಗೆ ನಿವೇಶನ/ಮನೆಗಳನ್ನು ಶೇ.50 ರಿಯಾಯಿತಿ ದರದಲ್ಲಿ ಕೊಡಬೇಕು ಎಂದು ಮನವಿ ಮಾಡಲಾಯಿತು.
ಕ್ಷೇಮನಿಧಿಗೆ 100 ಕೋಟಿ:ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 100 ಕೋಟಿ ರೂ ಮೀಸಲಿಡಬೇಕು. ಜಿಲ್ಲಾ, ಪ್ರಾದೇಶಿಕ ಮತ್ತು ರಾಜ್ಯ ಮಟ್ಟದ ಪತ್ರಿಕೆಗಳಿಗೆ ಮತ್ತು ಮಾಧ್ಯಮಗಳಿಗೆ ಕ್ರಮಬದ್ದವಾಗಿ ಜಾಹೀರಾತು ನೀಡಬೇಕು ಎಂದು ತಗಡೂರು ಒತ್ತಾಯಿಸಿದರು.
ಪತ್ರಿಕಾ ವಿತರಕರಿಗೆ ನಿಧಿ:ಪತ್ರಿಕಾ ವಿತರಕರಿಗಾಗಿ ಹಿಂದೆ ಬಜೆಟ್‌ನಲ್ಲಿ ಮೀಸಲಿಟ್ಟ 2 ಕೋಟಿಯಲ್ಲಿ ನಯಾ ಪೈಸೆ ಬಳಕೆಯಾಗಿಲ್ಲ. ಅದನ್ನು ಕಾರ್ಮಿಕ ಇಲಾಖೆ ಮೂಲಕ ನಿರ್ವಹಣೆ ಮಾಡಬೇಕು ಮತ್ತು ಪತ್ರಿಕಾ ವಿತರಕರ ಕ್ಷೇಮ ನಿಧಿ ಹೆಚ್ಚಿಸಬೇಕು ಎಂದು ಕೆಯುಡಬ್ಲ್ಯೂಜೆ ವಿನಂತಿಸಿತು.
ದರ ಪರಿಷ್ಕರಣೆ:ಜಾಹೀರಾತುಗಳನ್ನು ಈ ಮೊದಲಿದ್ದಂತೆ ವಾರ್ತಾ ಇಲಾಖೆ ಮತ್ತು ಸರ್ಕಾರಿ ಏಜೆನ್ಸಿ ಮೂಲಕವೇ ನಿಭಾಯಿಸಬೇಕು. ಜಾಹಿರಾತು ನೀತಿ, ಜಾಹೀರಾತು ತಾರತಮ್ಯ, ದರ ಪರಿಷ್ಕರಣೆ, ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಲಾಯಿತು.
ಅಭಿನಂದನೆ:ಚುನಾವಣಾ ಪ್ರಚಾರ ಪ್ರನಾಳಿಕೆಯಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಮೀಸಲಿಟ್ಟಿರುವ 500 ಕೋಟಿಗೆ ಕ್ರೀಯಾಯೋಜನೆ ಸಿದ್ಧಪಡಿಸಬೇಕು ಎಂದು ಆಗ್ರಹಿಸಿದ ಕೆಯುಡಬ್ಲೂೃಜೆ, ಪತ್ರಕರ್ತರ ಮಾಸಾಶನವನ್ನು 12 ಸಾವಿರಕ್ಕೆ ಹೆಚ್ಚಳ ಮಾಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿತು.
ಹಾಜರಿದ್ದವರು:ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಪ್ರಚಾರ ಇಲಾಖೆ ಕಾರ್ಯದರ್ಶಿ ಎನ್.ಜಯರಾಮ್, ಆಯುಕ್ತ ಹೇಮಂತ ನಿಂಬಾಳ್ಕರ್ ಹಾಜರಿದ್ದರು.
ಪದಾಧಿಕಾರಿಗಳು:ಕೆಯುಡಬ್ಲೂೃಜೆ ಪದಾಧಿಕಾರಿಗಳಾದ ಮತ್ತಿಕೆರೆ ಜಯರಾಂ, ಸೋಮಶೇಖರ ಕೆರಗೋಡು, ರವಿಕುಮಾರ್ ಟೆಲೆಕ್ಸ್, ಪತ್ರಕರ್ತರ ಸಂಘಟನೆಗಳ ಪದಾಧಿಕಾರಿಗಳಾದ ಪದ್ಮ ಶಿವಮೊಗ್ಗ, ಮಂಜುಶ್ರೀ ಕಡಕೊಳ, ರಶ್ಮಿಪಾಟೀಲ್, ರೇಖಾ, ಜೆ.ಆರ್.ಕೆಂಚೇಗೌಡ, ಮಂಜುನಾಥ್, ನಾಗತಿಹಳ್ಳಿ ನಾಗರಾಜ್, ಮಂಜುನಾಥ್, ಮಲ್ಲಿಕಾರ್ಜುನ ಕಬ್ಬೂರು, ಚಲುವರಾಜು, ಮುರುಳೀಧರ್, ವೆಂಕಟಸಿಂಗ್, ಮಲ್ಲಿಕಾರ್ಜುನ , ರಾಜ್ಯ ಪತ್ರಿಕಾ ವಿತರಕರ ಸಂಘದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ ಮತ್ತಿತರರು ಮನವಿ ಪತ್ರ ನೀಡಿ ಮಾತನಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
