ಮಂಡ್ಯ:ಅದ್ಧೂರಿಯಾಗಿ ಜೂನ್​ 5ರಂದು ದಾಂಪತ್ಯ ಜೀವಕ್ಕೆ ಕಾಲಿಟ್ಟಿದ್ದ ಅಭಿಷೇಕ್​ ಅಂಬರೀಶ್​​ ಹಾಗೂ ಅವಿವಾ ಅವರ ವಿವಾಹದ ನಿಮಿತ್ತವಾಗಿ ಮೊನ್ನೆ ಸಂಗೀತ​ ಕಾರ್ಯಕ್ರಮ ನಡೆದಿದೆ. ಇದೀಗ ಅಂಬರೀಶ್ ಕುಟುಂಬಸ್ಥರು​​ ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಗ್ರ್ಯಾಂಡ್​ ಆಗಿ ಸಂಗೀತ್​ ಕಾರ್ಯಕ್ರಮ ಜರುಗಿದೆ. ಸ್ಯಾಂಡಲ್​ವುಡ್​ ಮಾತ್ರವಲ್ಲದೇ ಬೇರೆ ಬೇರೆ ಭಾಷೆಯ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಇದರಲ್ಲಿ ಭಾಗಿಯಾಗಿ ಎಂಜಾಯ್​ ಮಾಡಿದ್ದಾರೆ.

ಜೂನ್ 17 ರಂದು ಮಂಡ್ಯದಲ್ಲಿ ಬೀಗರ ಊಟವನ್ನು ಏರ್ಪಡಿಸಿದ್ದಾರೆ. ಬೆಳಿಗ್ಗೆ 11ಗಂಟೆಯಿಂದಲೇ ಮಂಡ್ಯದ ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಸಮೀಪ  ಔತಣ ಕೂಟ ನಡೆಯಲಿದೆ. ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬೀಗರ ಊಟಕ್ಕೆಂದು 15 ಎಕರೆ ಪ್ರದೇಶದಲ್ಲಿ ಜರ್ಮನ್ ಟೆಂಟ್ ಹಾಕಿ ಸಿದ್ಧತೆ ನಡೆದಿದೆ. ಬೀಗರ ಊಟಕ್ಕೆ 50 ಸಾವಿರ ಜನರು ಬರುವ ನಿರೀಕ್ಷೆ ಇದೆ.

ವಿಐಪಿ ಹಾಗೂ ಸಾಮಾನ್ಯ ಜನರಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ. ಜನರು ವಧು-ವರರಿಗೆ ಶುಭಕೋರಲು ಸಹ ವ್ಯವಸ್ಥೆ ಇರುತ್ತದೆ. ಮಂಡ್ಯ ಶೈಲಿಯಲ್ಲೇ ಈ ಬೀಗರ ಊಟ ನಡೆಯುತ್ತಿರುವುದು ವಿಶೇಷವಾಗಿದೆ. ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಕುಟುಂಬ ಸದಸ್ಯರಂತೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬೀಗರ ಊಟದ ಮೆನು :ಅಂಬರೀಶ್ ಅವರಿಗೆ ಪ್ರಿಯವಾದ ಕೈಮಾ, ಮುದ್ದೆ, ಬೋಟಿ ಗೊಜ್ಜು, ಮೊಟ್ಟೆ, ಮಟನ್, 2 ತರ ಚಿಕನ್, ಘೀ ರೈಸ್, ಅನ್ನ, ತಿಳಿ ಸಾಂಬಾರ್, ಮಜ್ಜಿಗೆ, ಬಾಳೆಹಣ್ಣು, ಬೀಡಾ ನಂದಿನಿ ಐಸ್ ಕ್ರೀಂ ಇರಲಿದೆ ಮಂಡ್ಯ ಶೈಲಿಯಲ್ಲೇ ಅಡುಗೆ ಇರಲಿದೆ. ಸ್ಥಳೀಯ ಬಾಣಸಿಗರಿಂದಲೇ ಅಡುಗೆ ತಯಾರು ಮಾಡಿಸಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ವಧು ವರರಿಗೆ ಕೇಕ್, ಹಾರ – ಬೊಕ್ಕೆ ತರದೆ ಜನರು ಬಂದು ಆಶೀರ್ವಾದ ಮಾಡಿದರೆ ಸಾಕು ಎಂದು ಅಭಿಷೇಕ್ ಅಂಬರೀಶ್ ಮನವಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಬಗ್ಗೆ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
