ಬೆಂಗಳೂರು:ಸುಮಾರು 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಟಪೋರಿ ಸತ್ಯ ಖ್ಯಾತಿಯ ಸತ್ಯ ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ಕಾಲದಿಂದ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ.
ಅವರ ಪಾರ್ಥೀವ ಶರೀರವನ್ನು ಬನಶಂಕರಿ ಬಳಿಯ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು ಟಪೋರಿ ಸತ್ಯ ನಿಧನಕ್ಕೆ ಅವರ ಅಭಿಮಾನಿಗಳು ಮತ್ತು ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಅವರ ಮನೆಯಲ್ಲಿ ಸೂತಕದ ವಾತಾವರಣ ಉಂಟಾಗಿದೆ.
46 ವರ್ಷ ವಯಸ್ಸಿನ ಟಪೋರಿ ಸತ್ಯ ಶ್ವಾಸಕೊಶದ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂದ ಲವ್ಸ್ ನಂದಿತ ಸೇರಿದಂತೆ 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿನ್ನೆ ರಾತ್ರಿ ಕೊನೆಯುಸಿರನ್ನು ಎಳೆದಿದ್ದಾರೆ.
ನಟನೆ ಜೊತೆ ನಿರ್ದೇಶನದಲ್ಲಿಯೂ ಆಸಕ್ತಿ ಬೆಳೆಸಿಕೊಂಡಿದ್ದ ಅವರಿಗೆ, ಲೂಸ್ ಮಾದ ಮೊದಲ ಬಾರಿಗೆ ಯೋಗಿ ನಾಯಕನಾಗಿ ನಟಿಸಿದ್ದ ‘ನಂದ ಲವ್ಸ್​ ನಂದಿತಾ’ ಜನಪ್ರಿಯತೆ ತಂದುಕೊಟ್ಟಿತ್ತು. ಈ ಸಿನಿಮಾದಲ್ಲಿ ಟಪೋರಿ ಸತ್ಯ ಕ್ವಾಟ್ರು ಅನ್ನೋ ಪಾತ್ರದಲ್ಲಿ ನಟಿಸಿದ್ದರು.
ಮೇಳ ಹೆಸರಿನ ಸಿನಿಮಾವನ್ನು ನಿರ್ದೇಶನ ಸಹ ಮಾಡಿದ್ದ ಅವರು ಇತ್ತೀಚೆಗೆ ಮತ್ತೊಂದು ಹೊಸ ಸಿನಿಮಾವನ್ನು ನಿರ್ದೇಶನ ಮಾಡುವ ಹುಮ್ಮಸ್ಸಿನಲ್ಲಿದ್ದರು. ತಮ್ಮ ಹೊಸ ಸಿನಿಮಾಕ್ಕಾಗಿ ಆಡಿಷನ್ ಕೂಡ ಮಾಡುತ್ತಿದ್ದರು. ಆದರೆ ಶ್ವಾಸಕೋಶದ ಸಮಸ್ಯೆಯಿಂದಾಗಿ ಅವರು ಹಠಾತ್ತನೆ ಇಹಲೋಕ ತ್ಯಜಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
