ಬೆಂಗಳೂರು:ಹಾಸನ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಇದೀಗ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿವೆ. ಅಲ್ಲದೆ, 2800ಕ್ಕೂ ಅಧಿಕ ವಿಡಿಯೋಗಳು ಪೆನ್​​ಡ್ರೈವ್​ನಲ್ಲಿ ಇದೆ ಎನ್ನಲಾಗುತ್ತಿದೆ. ಪ್ರಸ್ತುತ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಹಾಸನ ಕ್ಷೇತ್ರದಿಂದ ಪ್ರಜ್ವಲ್​ ಮತ್ತೆ ಕಣಕ್ಕಿಳಿದಿರುವುದರಿಂದ ಪೆನ್​ ಡ್ರೈವ್​ ಪ್ರಕರಣ ಹೊಣೆಯನ್ನು ಬಿಜೆಪಿಯು ಸಹ ಹೊರಬೇಕೆಂದು ಕಾಂಗ್ರೆಸ್​ ಒತ್ತಾಯಿಸುತ್ತಿದೆ. ಆದರೆ, ಕಾಂಗ್ರೆಸ್​ನ ಈ ನಡೆ ಹಾಸ್ಯಾಸ್ಪದವಾಗಿದೆ ಎಂದು ಸ್ಯಾಂಡಲ್​ವುಡ್​ ನಟ ಹಾಗೂ ಸಾಮಾಜಿಕ ಹೋರಾಟಗಾರ ಎನಿಸಿಕೊಂಡಿರುವ ಚೇತನ್​ ಅವರು ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಫೇಸ್​ಬುಕ್​ನಲ್ಲಿ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಬರೆದುಕೊಂಡಿರುವ ಚೇತನ್​, ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ತುಂಬಾ ಗಂಭೀರವಾಗಿದ್ದು, ತಪ್ಪು ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅನ್ಯಾಯಕ್ಕೊಳಗಾದ ಮಹಿಳೆಯರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಧೈರ್ಯದಿಂದ ಮುಂದೆ ಬರುತ್ತಿರುವುದನ್ನು ನೋಡಿ ನನಗೆ ಸಂತೋಷವಾಗಿದೆ. ಆದರೆ, ಪೆನ್​ ಡ್ರೈವ್ ಸಮಸ್ಯೆಯನ್ನು ‘ಸಾವಿರಾರು ನಿರ್ಭಯಾ’ಗಳಿಗೆ ಹೋಲಿಸಿ, ಅದಕ್ಕೆ ಮೋದಿ/ಬಿಜೆಪಿ ಹೊಣೆ ಹೊರಬೇಕೆಂದು ಒತ್ತಾಯಿಸುತ್ತಿರುವ ಕಾಂಗ್ರೆಸ್ ಪಕ್ಷದ ಮಹಿಳೆಯರ ನಡೆಯು ಹಾಸ್ಯಾಸ್ಪದವಾಗಿದೆ ಎಂದು ಚೇತನ್​ ಹೇಳಿದ್ದಾರೆ.
ಸದ್ಯ ಭಾರಿ ಚರ್ಚೆಯಾಗುತ್ತಿರುವ ಬೃಹತ್ ಲೈಂಗಿಕ ಹಗರಣದಲ್ಲಿ 2800ಕ್ಕೂ ಅಧಿಕ ವಿಡಿಯೋಗಳನ್ನು ಸೆರೆಹಿಡಿದರುವ ಆರೋಪಿ ಪ್ರಜ್ವಲ್ ರೇವಣ್ಣ ನಡೆಯು ನನ್ನನ್ನು ದಿಗ್ಭ್ರಮೆಗೊಳಿಸಿದೆ. ಪೆನ್ ಡ್ರೈವ್​ನಲ್ಲಿರುವ ರಹಸ್ಯ ಸಾರ್ವಜನಿಕವಾಗಿ ಮುನ್ನಲೆಗೆ ಬಂದರೆ, ಅವರ ಪಕ್ಷ, ಕುಟುಂಬ ಮತ್ತು ತಾನು ಎದುರಿಸಬೇಕಾದ ಭೀಕರ ಪರಿಣಾಮಗಳ ಬಗ್ಗೆ ಅವರಿಗೆ ಯಾವುದೇ ಭಯವಿರಲಿಲ್ಲವೇ? ಭಾರತೀಯ ಆಳುವ ರಾಜವಂಶಗಳ ದ್ವೇಷಪೂರಿತ ಅಹಂಕಾರವು ನಿಜಕ್ಕೂ ಆಶ್ಚರ್ಯಕರವಾಗಿದೆ ಎಂದು ಚೇತನ್​ ಅವರು ಬರೆದುಕೊಂಡಿದ್ದಾರೆ.
ಜೆಡಿಎಸ್​ ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಹಾಸನ ಕ್ಷೇತ್ರದ ಸಂಸದರಾಗಿದ್ದಾರೆ. ಸದ್ಯ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಹಾಸನ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಏಪ್ರಿಲ್​ 26ರಂದು ಮತದಾನವೂ ನಡೆದಿದೆ. ಇದರ ನಡುವೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಹ ಹೊರಬಂದಿವೆ. ಈ ಪ್ರಕರಣ ಇದೀಗ ದೇಶಾದ್ಯಂತ ಭಾರಿ ಸಂಚಲನ ಉಂಟು ಮಾಡಿದೆ. ಮಹಿಳೆರಿಗೆ ಬೆದರಿಕೆ, ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವಿಡಿಯೋ ಮಾಡಿರುವ ಆರೋಪದ ಮೇಲೆ ಪ್ರಜ್ವಲ್​ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಅಲ್ಲದೆ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್​ಐಟಿಗೆ ವಹಿಸಿದೆ. ಇದರ ನಡುವೆ ಪ್ರಜ್ವಲ್ ಅವರು ಜರ್ಮನಿಗೆ ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮದುವೆ ಆಗಬಾರದು, ಯಾರ ವಿವಾಹಕ್ಕೂ ಹೋಗಬಾರದು… ನಟಿ ಹನಿ ರೋಸ್ ನಿರ್ಧಾರದ ಹಿಂದಿದೆ ಈ ಕಾರಣ!

ಪೆನ್​ಡ್ರೖೆವ್ ಪ್ರಕರಣ, ಬಿಜೆಪಿಗೂ ಇಕ್ಕಟ್ಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − thirteen =
Remember me
