ಬೆಂಗಳೂರು:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಹಾಗೂ ಸಹಚರರು ಜೈಲು ಪಾಲಾಗಿದ್ದು, ಪೊಲೀಸ್​ ಕಸ್ಟಡಿ ಅಂತ್ಯವಾದ ಬೆನ್ನಲ್ಲೇ ಕೋರ್ಟ್​ ಅವರಿಗೆ ಜುಲೈ 04ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆಗಿರುವ ನಟ ದರ್ಶನ್​ ಹಾಗೂ ಅವರ ಸಹಚರರಾದ ವಿನಯ್​, ಧನರಾಜ್​ ಹಾಗೂ ಪ್ರದೋಶ್​ನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರಿಸಿದ್ದು, ಡಿ ಗ್ಯಾಂಗ್​ಗೆ ಜೈಲಿನ ಅಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ ಅನ್ನು ಜೈಲು ಅಧಿಕಾರಿಗಳು​ ನೀಡಿದ್ದಾರೆ.
ಇದನ್ನೂ ಓದಿ:ದರ್ಶನ್ ಪರಪ್ಪನ ಅಗ್ರಹಾರಕ್ಕೆ; ಜುಲೈ 4ರ ತನಕ ನ್ಯಾಯಾಂಗ ಬಂಧನ
ಜೈಲು ಅಧಿಕಾರಿಗಳು ನಟ ದರ್ಶನ್​ಗೆ  ವಿಚಾರಣಾಧೀನ ಕೈದಿ ನಂಬರ್ ಅನ್ನು ನೀಡಿದ್ದಾರೆ. ವಿಚಾರಣಾಧೀನ (UTP) ಕೈದಿ ನಂಬರ್- 6106 ಅನ್ನು ನೀಡಲಾಗಿದೆ. ದರ್ಶನ್​ ಜೊತೆ ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಧನರಾಜ್​ಗೆ 6107, ವಿನಯ್​ಗೆ 6108, ಪ್ರದೂಶ್​ಗೆ 6109 ಕೈದಿ ಸಂಖ್ಯೆಯನ್ನು ನೀಡಲಾಗಿದೆ. ಭದ್ರತೆ ದೃಷ್ಟಿಯಿಂದ ನಟ ದರ್ಶನ್​ರನ್ನು ವಿಶೇಷ ಬ್ಯಾರಕ್​ನಲ್ಲಿ ಇರಿಸಲಾಗಿದ್ದು, ಇತರೆ ಕೈದಿಗಳಿಂದ ಅಪಾಯವಿರುವ ಆರೋಪಿಗಳನ್ನು ಈ ಬ್ಯಾರಕ್​ನಲ್ಲಿ ಇಡಲಾಗುತ್ತಿದೆ. ಇದೀಗ ದರ್ಶನ್​ ಅನ್ನು ಮೂರನೇ ಬ್ಯಾರಕ್​ನಲ್ಲಿ ಇರಿಸಲಾಗಿದೆ.
ಎರಡು ದಿನದ ಹಿಂದೆ ನ್ಯಾಯಾಂಗ ಬಂಧನಕ್ಕೆ ಒಳಪಟ್ಟ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರನ್ನು ಪರಪ್ಪನ ಅಗ್ರಹಾರದ ಮಹಿಳಾ ವಿಭಾಗದ ಡಿ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಪವಿತ್ರಾಗೆ 6024 ಸಂಖ್ಯೆಯನ್ನು ನೀಡಲಾಗಿತ್ತು. ಇಂದು ಪೊಲೀಸ್​ ಕಸ್ಟಡಿ ಅಂತ್ಯವಾದ ಆರೋಪಿಗಳಿಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜುಲೈ 4 ರವರೆಗೆ ದರ್ಶನ್ ಮತ್ತು ಗ್ಯಾಂಗ್ ಜೈಲಿನಲ್ಲಿರಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
