ಬೆಂಗಳೂರು:ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಹಾಗೂ ಸಹಚರರಿಗೆ ಸದ್ಯಕ್ಕೆ ಜಾಮೀನು ಸಿಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್​ 14 ದಿನಗಳ ಕಾಲ ವಿಸ್ತರಿಸಿದ್ದು, ದಾಸನ ಗ್ಯಾಂಗ್​ ಆಗಷ್ಟ್​ 01ರ ವರೆಗೆ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುವುದು ಅನಿವಾರ್ಯವಾಗಿದೆ.
ಆರೋಪಿಗಳಿಗೆ ಈ ಹಿಂದೆ ವಿಧಿಸಲಾಗಿದ್ದ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಬೆನ್ನಲ್ಲೇ ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಮುಂದಿನ 14ರಿನಗಳ ಕಾಲ ಅಂದರೆ ಆಗಷ್ಟ್​​ 01ರ ತನಕ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ಆದೇಶಿಸಿದ್ದಾರೆ. ದಾಸನ ಗ್ಯಾಂಗ್​ಗೆ ಜಾಮೀನು ಸಿಗುವುದು ಕಷ್ಟವಾಗಿದ್ದು,. ಇನ್ನೂ 14 ದಿನಗಳ ಕಾಲ ಅವರು ಜೈಲಿನಲ್ಲಿ ಕಾಲ ಕಳೆಯಬೇಕಾಗಿದೆ.
ಪರಪ್ಪನ ಅಗ್ರಹಾರದಿಂದ 13 ಆರೋಪಿಗಳು ಹಾಗೂ ತುಮಕೂರಿನಿಂದ 4 ಆರೋಪಿಗಳು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾದರು. ನ್ಯಾಯಾಧೀಶ ವಿಶ್ವನಾಥ‌ ಸಿ. ಗೌಡರ್ ಅವರು ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಅದೇಶಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 14 =
Remember me
