ಬೆಂಗಳೂರು:ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲೂಟ ಸೇವಿಸುತ್ತಿರುವ ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್​ ಜೈಲು ಊಟಕ್ಕಾಗಿ ಮತ್ತೊಮ್ಮೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಮಣಿಪುರದಲ್ಲಿ ಭೂ ಕುಸಿತ: ಇಬ್ಬರ ಸಾವು
ನಟ ದರ್ಶನ್‌ ಮತ್ತೆ ಮೆನಯೂಟ ಕೋರಿ ಜೈಲಾಧಿಕಾರಿಗಳು ಹಾಗೂ ಮ್ಯಾಜಿಸ್ಟ್ರೇಟ್‌ಗೆ ಮೂರು ಪತ್ರಗಳನ್ನ ಬರೆದಿದ್ದಾರೆ. ಸ್ವತಃ ಕೈ ಬರಹದ ಮೂಲಕ ಜೈಲು ವೈದ್ಯಾಧಿಕಾರಿ, ಕಾರಾಗೃಹ ಎಡಿಜಿಪಿಗೆ, ವೈದ್ಯಾಧಿಕಾರಿಗೆ, ಮ್ಯಾಜಿಸ್ಟ್ರೇಟ್‌ಗೆ ಪತ್ರ ಬರೆದಿದ್ದಾರೆ.
ಜೂನ್ 22 ರಂದು ಕೇಂದ್ರ ಕಾರಾಗೃಹಕ್ಕೆ ಬಂದಿದ್ದು ನಾನು ದಿನನಿತ್ಯ ನನ್ನ ಮನೆಯಲ್ಲಿದ್ದಾಗ ವ್ಯಾಯಾಮ ಮಾಡುತ್ತಿದ್ದೆ ಅದರ ಜೊತೆ ದಿನನಿತ್ಯ ಪೌಷ್ಟಿಕ ಆಹಾರ ತಿನ್ನುತ್ತಿದೆ. ನನಗೆ ಮೂಳೆ ಶಸ್ತ್ರಚಿಕಿತ್ಸೆಯಾಗಿದೆ, ಪ್ರೋಟಿನ್‌ ಅವಶ್ಯಕತೆ ಇದೆ. ಕಾರಾಗೃಹಕ್ಕೆ ದಾಖಲಾದ ದಿನದಿಂದ ಜೈಲೂಟ ಸೇವೆನೆ ಮಾಡುತ್ತಿದ್ದೇನೆ. ನನ್ನ ಆರೋಗ್ಯ, ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಮನೆ ಊಟ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಈ ಹಿಂದೆ ಮನೆ ಊಟ ಹಾಗೂ ಹಾಸಿಗೆ ತರಿಸಿಕೊಳ್ಳಲು ಅನುಮತಿ ಕೋರಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯು ಹೈಕೋರ್ಟ್​ನಿಂದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಬಂದು ಅಲ್ಲಿ ವಜಾ ಆಗಿತ್ತು. ಆದರೆ ತಾಂತ್ರಿಕ ಕಾರಣ ನೀಡಿ ವಕೀಲರು ದರ್ಶನ್​ರ ಅರ್ಜಿಯನ್ನು ಹಿಂಪಡೆದಿದ್ದರು. ಈಗ ದರ್ಶನ್ ಮತ್ತೊಮ್ಮೆ ಮನೆ ಊಟಕ್ಕಾಗಿ ಮನವಿ ಸಲ್ಲಿಸಿದ್ದು, ಈ ಬಾರಿ ಜೈಲಧಿಕಾರಿಗಳಿಗೆ ಮತ್ತು ಜೈಲಿನ ವೈದ್ಯಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ಮನೆಯೂಟ, ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು.
ಕರ್ನಾಟಕದಲ್ಲೂ ಪ್ರವಾಹ, ಭೂಕುಸಿತ: ಕಟ್ಟೆಚ್ಚರ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಖಡಕ್​ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 13 =
Remember me
