ಬೆಂಗಳೂರು:ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ನಟ ದರ್ಶನ್​ ಅಭಿಮಾನಿಗಳು ಹಲ್ಲೆ ನಡೆಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ನಟ ದರ್ಶನ ಹುಟ್ಟುಹಬ್ಬದ ದಿನ ಪೊಲೀಸರ ಪೇದೆ ಮೇಲೆ‌ ಹಲ್ಲೆ ನಡೆಸಲಾಗಿದೆ.
ದೇವರಾಜ್ ಎಂಬ ಪೊಲೀಸ್‌‌ ಪೇದೆಗೆ ದುಷ್ಕರ್ಮಿಗಳು ಗುದ್ದಿದ್ದಾರೆ. ದೇವರಾಜ್ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪೊಲೀಸ್​ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಆರ್.ಆರ್.ನಗರದ ಐಡಿಯಲ್ ಹೋಮ್ ಲೇಔಟ್ ಬಳಿ ಘಟನೆ ನಡೆದಿದೆ. ನಟ ದರ್ಶನ್​ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಭದ್ರತೆಗೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು.
ಈ ವೇಳೆ ನೂಕುನುಗ್ಗಲು ಉಂಟಾಗಿ ನಿಯಂತ್ರಿಸುವಾಗ ಪೇದೆ ದೇವರಾಜ್​ಗೆ ಅಭಿಮಾನಗಳ ಗುಂಪಿನಲ್ಲಿದ್ದ ದುಷ್ಕರ್ಮಿಗಳು ಪಂಚ್ ಮಾಡಿದ್ದಾರೆ.
ದರ್ಶನ‌ ಅಭಿಮಾನಿಗಳು ಹಾಗೂ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜರಾಜೇಶ್ವರಿನಗರದ ಪೊಲೀಸ್ ಠಾಣೆಯಲ್ಲಿ ಪೇದೆ ದೇವರಾಜ್ ದೂರು ದಾಖಲಿಸಿದ್ದಾರೆ. ಗಾಯಾಳು ದೇವರಾಜ್​ ಅವರನ್ನು ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
