ಬೆಂಗಳೂರು:ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಸೇರಿದಂತೆ 19 ಮಂದಿಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದ್ದು, ಆರೋಪಿಗಳನ್ನು ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿದೆ. ಇತ್ತ ತನಿಖೆ ಮುಂದುವರೆಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳನ್ನು ಕಲೆ ಹಾಕುತ್ತಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ನಿಜಜೀವನದಲ್ಲಿ ಅನೇಕರಿಗೆ ಮಾದರಿಯಾಗಬೇಕಿದ್ದ ನಟ ಕೊಲೆ ಪ್ರಕರಣದಲ್ಲಿ ಅರೆಸ್ಟ್​ ಆಗಿದ್ದು, ರೀಲ್​ ಹೀರೋ ನಿಜಜೀವನದಲ್ಲಿ ವಿಲನ್​ ಆಗಿದ್ದಾರೆ.
ಅನೇಕರು ದರ್ಶನ್​ ಹಾಗೂ ಅವರ ಸಹಚರರು ಎಸಗಿರುವ ಕೃತ್ಯವನ್ನು ಖಂಡಿಸುತ್ತಿದ್ದು, ಇದರ ನಡುವೆಯೂ ಅವರ ಅಭಿಮಾನಿಗಳು ನೆಚ್ಚಿನ ನಟನ ಬೆನ್ನಿಗೆ ನಿಲ್ಲುವ ಮೂಲಕ ಬೆಂಬಲ ಸೂಚಿಸಿದ್ದಾರೆ. ಪ್ರತಿನಿತ್ಯ ನೂರಾರು ಜನರು ಪರಪ್ಪನ ಅಗ್ರಹಾರದ ಬಳಿ ತೆರಳುತ್ತಿದ್ದು, ದರ್ಶನ್​ ಭೇಟಿಗೆ ಅವಕಾಶ ಮಾಡಿಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ವಿರಾಟ್​ ಹೆಚ್ಚು ರನ್​ ಗಳಿಸಲಿಲ್ಲ ಆ ಕಾರಣಕ್ಕೆ…; ಅಚ್ಚರಿಯ ಹೇಳಿಕೆ ನೀಡಿದ ಅಂಬಾಟಿ ರಾಯುಡು
ಇತ್ತೀಚಿಗಷ್ಟೇ ನಟ ದರ್ಶನ್​ರನ್ನು ನೋಡಲು ವಿಶೇಷ ಚೇತನ ಅಭಿಮಾನಿಯೊಬ್ಬರು ಜೈಲಿನ ಬಳಿ ಆಗಮಿಸಿದ್ದರು. ನಿಯಮದ ಪ್ರಕಾರ ಪೊಲೀಸರು ಅಭಿಮಾನಿಯನ್ನು ಒಳಗೆ ಬಿಟ್ಟಿರಲಿಲ್ಲ. ಈ ವಿಚಾರ ತಿಳಿದ ನಟ ದರ್ಶನ್​ ಜೈಲಿನಲ್ಲಿದ್ದುಕೊಂಡೆ ತಮ್ಮ ಅಭಿಮಾನಿಗಳಿಗೆ ವಿಶೇಷ ಸಂದೇಶ ಒಂದನ್ನು ರವಾನಿಸಿದ್ದಾರೆ. ಯಾರೂ ಜೈಲಿನ ಬಳಿ ಬರಬೇಡಿ ಎಂದು ಅಭಿಮಾನಿಗಳ ಬಳಿ ದರ್ಶನ್ ಮನವಿ ಮಾಡಿದ್ದಾರೆ.
ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಅಸಾಧ್ಯ. ಹೀಗಾಗಿ ಸುಮ್ಮನೆ ಬಂದು ಸಮಯ ವ್ಯರ್ಥ ಮಾಡಬೇಡಿ. ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು, ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು ಬೇಡ ಎಂದು ಜೈಲಿನ ಅಧಿಕಾರಿಗಳ ಮೂಲಕ ಸಂದೇಶ ರವಾನಿಸಿದ್ದಾರೆ. ನಟ ದರ್ಶನ್​ ಮಾಡಿರುವ ಮನವಿಯನ್ನು ಅಭಿಮಾನಿಗಳು ಪಾಲಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + 1 =
Remember me
