ಬೆಂಗಳೂರು:ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ ಆರೋಪದಡಿಯಲ್ಲಿ ನಟ ದರ್ಶನ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರ​ ವಿರುದ್ಧ ಹೈಕೋರ್ಟ್​ನಲ್ಲಿ ದೂರು ದಾಖಲಿಸಲಾಗಿದೆ.
ಕೊವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ನಟ ದರ್ಶನ್ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಲ್ಲಂಘನೆ ಮಾಡಿದ್ದಾರೆ. ದರ್ಶನ್ ಅಲ್ಲದೇ, ಅಬಕಾರಿ ಸಚಿವ ನಾಗೇಶ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಎಂ. ಕೆ. ಸೋಮಶೇಖರ್ ಸೇರಿದಂತೆ ಹಲವು ರಾಜಕೀಯ ನಾಯಕರು ಕೂಡ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ, ಕರೊನಾ ಸೋಂಕು ಹರಡಲು ಕಾರಣರಾಗಿದ್ದು, ಇವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ವಕೀಲೆ ಗೀತಾ ಮಿಶ್ರಾ ಹೈಕೋರ್ಟ್​ಗೆ ದೂರು ನೀಡಿದ್ದಾರೆ.
ಇದನ್ನೂ ಓದಿ:ವೇಶ್ಯಾವಾಟಿಕೆಗೆ ಮಾರಲ್ಪಟ್ಟ ಅಪ್ರಾಪ್ತ ಬಾಲಕಿ ಹೇಗೆ ಪಾರಾದಳು ನೋಡಿ…
ಈ ಮೇಲಿನ ಪ್ರಮುಖ ವ್ಯಕ್ತಿಗಳು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಎಸ್.ಓ.ಪಿ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅಬಕಾರಿ ಸಚಿವ ನಾಗೇಶ್ ತಮ್ಮ ಕಾರ್ಯಕರ್ತರ ಅಂಗಡಿ ಮಳಿಗೆ ಉದ್ಘಾಟಿಸಿ ಅವರ ಜತೆ ಸೇರಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಮಾಸ್ಕ್ ಧರಿಸಿಲ್ಲ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕರೊನಾ ಮಾರ್ಗಸೂಚಿಗಳನ್ನೂ ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಾರ ಹೇಳಿದೆ. ಆದರೆ ಕಾನೂನು ರೂಪಿಸುವ ನಾಯಕರೇ ಕಾನೂನು ಉಲ್ಲಂಘಿಸುತ್ತಿದ್ದಾರೆ. ಜನ ಸಾಮಾನ್ಯರಿಗೊಂದು ನಿಯಮ ಹಾಗೂ ಪ್ರಭಾವಿಗಳಿಗೊಂದು ನಿಯಮ ಎಂಬಂತೆ ಭಾವಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ನಿಯಮಗಳ ಅನುಸಾರ ಕ್ರಮ ಕೈಗೊಳ್ಳುವಂತೆ ಅರ್ಜಿದಾರರ ಮನವಿ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಛೇ… ವಯಸ್ಸಾಗೋಯ್ತು ಅಂತ ಮರುಗುವವರಿಗೆ ವಿಜ್ಞಾನಿಗಳು ಕೊಟ್ಟಿದ್ದಾರೆ ಸಿಹಿಸುದ್ದಿ
ವರ್ಷದ ಬಳಿಕ ಕೇರಳ ತಲುಪಿದ 74 ಚಕ್ರವುಳ್ಳ ಟ್ರಕ್ ಸಂಚಾರ ಮಾಡಿದ್ದು 1750 ಕಿ.ಮೀ ಮಾತ್ರ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × five =
Remember me
