ಬೆಂಗಳೂರು:ಸ್ಯಾಂಡಲ್​ವುಡ್​ ಸ್ಟಾರ್​ ನಟ ದರ್ಶನ್​ ಕೊಲೆ ಪ್ರಕರಣವೊಂದರಲ್ಲಿ ಇದೀಗ ಪೊಲೀಸರ ಅತಿಥಿಯಾಗಿದ್ದು, ನಟಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ ಕೊಲೆಯಲ್ಲಿ ದರ್ಶನ್​ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್​ರನ್ನು ಬಂಧಿಸಿದ್ದಾರೆ. ಇದಲ್ಲದೆ, ಒಳಸಂಚು ನಡೆಸಿದ ಆರೋಪದ ಮೇಲೆ ಪವಿತ್ರಾ ಗೌಡಳನ್ನು ಕೂಡ ವಶಕ್ಕೆ ಪಡೆಯಲಾಗಿದೆ.
ಸದ್ಯ ಠಾಣೆಯಲ್ಲಿ ಪೊಲೀಸರ ವಿಚಾರಣೆಯಲ್ಲಿ ಭಾಗಿಯಾಗಿದ್ದ ನಟ ದರ್ಶನ್​ ತಮ್ಮ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರನೊಂದಿಗೆ ಮಾತನಾಡಬೇಕು ಎಂದು ಮನವಿ ಮಾಡಿದರು. ಇದನ್ನು ಆಲಿಸಿದ ಅಧಿಕಾರಿಗಳು, ದೂರವಾಣಿ ಕರೆಯಲ್ಲಿ ಮಾತನಾಡಲು ಅವಕಾಶ ಮಾಡಿಕೊಟ್ಟರು. ಈ ವೇಳೆ ನಾನೇನು ತಪ್ಪು ಮಾಡಿಲ್ಲ ಎಂದು ದರ್ಶನ್ ಪತ್ನಿ​ ವಿಜಯಲಕ್ಷ್ಮಿಗೆ ಹೇಳಿದ್ದಾರೆ. ಅವರೊಟ್ಟಿಗೆ ಕೆಲ ಸಮಯ ಪುತ್ರ ವಿನೀಶ್​ ಜತೆಗೂ ಮಾತನಾಡಿದ್ದಾರೆ.
ದರ್ಶನ್​ ಸೇರಿ ಒಟ್ಟು 13 ಆರೋಪಿಗಳನ್ನು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಿರುವ ಪೊಲೀಸರು, ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ.
Close Player
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + thirteen =
Remember me
