ಬೆಂಗಳೂರು:ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ನಮ್ಮ ರೈತರಿಗೆ ಮತ್ತು ರಾಜ್ಯಕ್ಕೆ ತೊಂದರೆಯಾಗಲಿದೆ. ಈ ನಮ್ಮ ಹೋರಾಟಕ್ಕೆ ಕನ್ನಡ ಚಿತ್ರರಂಗದ ಯಾವ ನಟ-ನಟಿಯರು ಸಾಥ್​ ನೀಡಿಲ್ಲ, ಸ್ಯಾಂಡಲ್​ವುಡ್​ ಮೌನ ಮುರಿದಿದೆ ಎಂದು ಕರ್ನಾಟಕ ರಕ್ಷಣ ವೇದಿಕೆ ನೀಡಿದ್ದ ಹೇಳಿಕೆಯ ಬೆನ್ನಲ್ಲೇ ಇದೀಗ ಚಾಲೆಂಜಿಂಗ್​ ಸ್ಟಾರ್​, ನಟ ದರ್ಶನ್ ಮತ್ತು ಸುದೀಪ್​ ಟ್ವೀಟ್​ ಮಾಡಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ಬರ ಪರಿಹಾರ ವಿಚಾರವಾಗಿ ಕೇಂದ್ರಕ್ಕೆ ಇನ್ನೂ ವರದಿ ಸಲ್ಲಿಸಿಲ್ಲ!
ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ.
— Darshan Thoogudeepa (@dasadarshan)September 20, 2023

ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿದ ಸಂಗತಿಗೆ ಪ್ರತಿಕ್ರಿಯಿಸಿದ ದರ್ಶನ್, “ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ” ಎಂದು ದರ್ಶನ್​ ಹೇಳಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ಸಿನ ಎಲ್ಲ 224 ಅಭ್ಯರ್ಥಿಗಳನ್ನು ಡಿಬಾರ್ ಮಾಡಬೇಕು!
ಸ್ನೇಹಿತರೆನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ.ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ.
— Kichcha Sudeepa (@KicchaSudeep)September 20, 2023

ಇನ್ನೂ ನಟ ಕಿಚ್ಚ ಸುದೀಪ್​ ಕೂಡ ಈ ಕುರಿತು ಟ್ವೀಟ್​ ಮಾಡಿದ್ದು, “ಸ್ನೇಹಿತರೆ, ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ-ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ” ಎಂದು ಬರೆದು ಪೋಸ್ಟ್​ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
