ಬೆಂಗಳೂರು:ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಕೇಸ್​ ಬಗ್ಗೆ ಪತ್ನಿ ವಿಜಯಲಕ್ಷ್ಮಿ ಚರ್ಚೆ ನಡೆಸಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.
ಇದನ್ನೂ ಓದಿ:ತಿರುಪತಿ ತಿಮ್ಮಪ್ಪ ಲಡ್ಡು ಗುಣಮಟ್ಟ ಕಳಪೆ? ಅಸಲಿ ಕಾರಣ ಪತ್ತೆ ಹಚ್ಚಿದ ಟಿಟಿಡಿ!
ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಮಂಗಳವಾರದಂದು ನನ್ನ ಭೇಟಿಗೆ ವಿಜಯಲಕ್ಷ್ಮಿ ಬಂದಿದ್ದರು, ಅಲ್ಲಿ ಭೇಟಿಗೆ ನಾನು ಒಪ್ಪಲಿಲ್ಲ. ಇವತ್ತು ಬೆಳಿಗ್ಗೆ ಮನೆಯಲ್ಲಿ ಭೇಟಿಯಾಗುವಂತೆ ಹೇಳಿದ್ದೆ, ಅದಕ್ಕೆ ಬಂದಿದ್ದರು ಎಂದು ತಿಳಿಸಿದರು.
ದರ್ಶನ್, ವಿಜಯಲಕ್ಷ್ಮೀ ಪುತ್ರ ಈ ಮೊದಲು ನಮ್ಮ ಶಾಲೆಯಲ್ಲಿ ಓದುತ್ತಿದ್ದರು. ಕಾರಣಾಂತರಗಳಿಂದ ನಮ್ಮ ಶಾಲೆ ತೊರೆದು ಬೇರೆ ಶಾಲೆ ಸೇರಿದ್ದರು. ಈಗ ಮತ್ತೆ ಮರಳಿ ನಮ್ಮ ಶಾಲೆಗೆ ಸೇರಿಸಿಕೊಳ್ಳುವಂತೆ ಮನವಿ ಮಾಡಲು ಬಂದಿದ್ದರು. ನಮ್ಮ ಶಾಲೆಯ ಪ್ರಾಂಶುಪಾಲರು ಪ್ರವೇಶ ಅವಕಾಶ ನಿರಾಕರಿಸಿದ್ದರಿಂದ ನನ್ನ ಬಳಿ ಸೀಟು ಕೇಳಲು ಬಂದಿದ್ದರು ಎಂದು ಹೇಳಿದರು.

“ಶಾಲೆಯ ದಾಖಲಾತಿಗೆ ಒಂದಷ್ಟು ನಿಯಮಾವಳಿಗಳಿವೆ. ನಾನು ಶಾಲೆಗೆ ಅಷ್ಟಾಗಿ ಭೇಟಿ ನೀಡುತ್ತಿಲ್ಲ. ಶಾಲೆಯ ಆಡಳಿತ ಜವಾಬ್ದಾರಿಯನ್ನು ಸಂಪೂರ್ಣವಾಗಿ ಮಕ್ಕಳಿಗೆ ವಹಿಸಿದ್ದೇನೆ. ವಿಜಯಲಕ್ಷ್ಮಿ ಅವರು ಮಗನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು ಆ ಮಗುವಿಗೆ ಒಳ್ಳೆಯದಾಗಲಿ ಎಂದು ಪ್ರಾಂಶುಪಾರನ್ನು ಭೇಟಿ ಮಾಡಲು ಹೇಳಿದ್ದೇನೆ ಎಂದರು.
“ಆ ಹೆಣ್ಣುಮಗಳಿಗೆ ತನ್ನ ಮಗನ ಶಿಕ್ಷಣದ ಬಗ್ಗೆ ಕಾಳಜಿಯಿದೆ. ಎಲ್ಲಾ ಮಕ್ಕಳು ಒಂದೇ ಅಲ್ಲವೇ? ಅವರಿಗೆ ಮಗನ ಶಿಕ್ಷಣದ ಬಗ್ಗೆ ಇರುವ ಕಾಳಜಿ ನೋಡಿ ಬಹಳ ಸಂತೋಷವಾಯಿತು. ಬೇರೆ ಶಾಲೆಗೆ ಸೇರಿಸಿದರೆ ಮಾನಸಿಕವಾಗಿ ತೊಂದರೆಯಾಗಬಹುದು. ನಮ್ಮ ಶಾಲೆಗೆ ಸೇರಿಸಿದರೆ ಹತ್ತಿರದಲ್ಲೇ ಇರುವುದರಿಂದ ಹೋಗಿ ಬರಲು ಅನುಕೂಲ ಆಗುತ್ತದೆ. ಈ ಹಿಂದೆ ಪೋಷಕರ ಸಭೆಗೆ ಅವರನ್ನು ಕರೆಸಲಾಗಿತ್ತು. ಆ ವೇಳೆ ದರ್ಶನ್ ಕೂಡ ಬಂದಿದ್ದರು” ಎಂದರು.

ಕಾನೂನಿನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ:ನಟ ದರ್ಶನ್ ಕೇಸ್ ಬಗ್ಗೆ ವಿಜಯಲಕ್ಷ್ಮಿ ಮಾತಾಡಿಲ್ಲ. “ನಟ ದರ್ಶನ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೊಲೀಸ್ ತನಿಖೆ ನಡೆಯುತ್ತಿದೆ. ನಾವು ಯಾವುದೇ ಕಾರಣಕ್ಕೂ ಪೊಲೀಸ್ ವಿಚಾರಣೆ, ನ್ಯಾಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಮಾಡಲೂಬಾರದು. ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ನೀಡಲು ಕಾನೂನಿದೆ. ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಒಂದೇ. ಏನೂ ಬೇಕಾದರೂ ಆಗಬಹುದು” ಎಂದರು.  ಒಂದೊಂದು ಮಾಧ್ಯಮಗಳಲ್ಲಿ ಒಂದೊಂದು ರೀತಿಯ ವರದಿ ಬರುತ್ತಿವೆ. ಮಾಧ್ಯಮಗಳಲ್ಲಿ ಬರುವ ವರದಿಗಳನ್ನು ಸಂಪೂರ್ಣವಾಗಿ ಗಮನಿಸಿಲ್ಲ, ನೋಡಲು ಸಮಯವೂ ಇಲ್ಲ. ಮಾಧ್ಯಮಗಳ ವರದಿಯ ಆಧಾರದ ಮೇಲೆ ತೀರ್ಮಾನಕ್ಕೆ ಬರಲು ಆಗುವುದಿಲ್ಲ. ನಾನು ಈ ಪ್ರಶ್ನೆಗೆ ಉತ್ತರ ನೀಡಲು ಗೃಹ ಸಚಿವನೂ ಅಲ್ಲ” ಎಂದರು.
ಕಾಂಗ್ರೆಸ್ ಯಾರನ್ನೂ ಬಳಸಿಕೊಳ್ಳುವುದಿಲ್ಲ:ಇಡಿ ವಿರುದ್ಧ ದೂರು ನೀಡಿರುವ ಅಧಿಕಾರಿ ಕಲ್ಲೇಶ್ ಅವರು ಅಮಾನತ್ತು ಆಗಿದ್ದ ಅಧಿಕಾರಿ. ಅವರನ್ನು ಬಳಸಿಕೊಂಡು ಕಾಂಗ್ರೆಸ್ ದೂರು ನೀಡಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ “ಕಾಂಗ್ರೆಸ್ ಪಕ್ಷ ಯಾರನ್ನೂ ಬಳಸಿಕೊಳ್ಳುವ ಅವಶ್ಯಕತೆಯಿಲ್ಲ. ಆತ ದೂರು ಕೊಟ್ಟಿದ್ದಾನೆ. ಎಫ್ ಐಆರ್ ದಾಖಲಾಗಿದೆ, ಅದಕ್ಕೆ ನ್ಯಾಯಲಯ ತಡೆ ನೀಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದುಕೊಂಡೆ” ಎಂದರು.ಕಲ್ಲೇಶ್ ಅವರ ಮೇಲೆ ಭ್ರಷ್ಟಾಚಾರದ ಆರೋಪದಿಂದ ಅಮಾನತು ಮಾಡಲಾಗಿತ್ತು ಎಂದಾಗ “ಆತ ತಪ್ಪು ಮಾಡಿದ್ದರೆ ಒಳಗೆ ಹಾಕುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.
ಸೂರಜ್ ರೇವಣ್ಣ, ಎಚ್ಡಿಕೆಗೆ ಟಾಂಗ್:ಲೈಂಗಿಕ ಹಗರಣದಲ್ಲಿ ಭಾಗಿಯಾಗಿದ್ದ ಸೂರಜ್ ರೇವಣ್ಣ ಅವರು, ಎಲ್ಲವನ್ನೂ ಬಿಚ್ಚಿಡುವ ಕುರಿತಾಗಿ ಹೇಳಿಕೆ ನೀಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಡಿಕೆಶಿಯವರು ವ್ಯಂಗ್ಯವಾಗಿ ಉತ್ತರಿಸಿದರು. ನಮ್ಮದು, ನಿಮ್ಮದು, ಬೇರೆಯವರದು ಬಿಚ್ಚಿಕೊಳ್ಳಲಿ: ಕಾಂಗ್ರೆಸ್ ಮತ್ತು ಬಿಜೆಪಿಯವರು ಶಾಮೀಲಾಗಿ ನಮ್ಮನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಜೈಲಿನಿಂದ ಹೊರಗಡೆ ಬಂದು ಎಲ್ಲಾ ಬಿಚ್ಚಿಡುತ್ತೇನೆ ಎನ್ನುವ ಜೆಡಿಎಸ್ ನಾಯಕ ಸೂರಜ್ ರೇವಣ್ಣ ಅವರ ಹೇಳಿಕೆಯ ಬಗ್ಗೆ ಕೇಳಿದಾಗ “ಅವರ ಹಕ್ಕನ್ನು ನಾವು ತಡೆಯಲು ಆಗುತ್ತದೆಯೇ? ನಿಮ್ಮದು, ನಮ್ಮದು, ಬೇರೆಯವರದು ಬಿಚ್ಚುವುದಿದ್ದರೇ ಬಿಚ್ಚಿಕೊಳ್ಳಲಿ” ಎಂದು ತಿಳಿಸಿದರು.
ಇದೇ ವೇಳೆ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರು ನೀತಿ ಆಯೋಗದ ಸಭೆಗೆ ಹೋಗಿದ್ದರ ಬಗ್ಗೆ ಪತ್ರಕರ್ತರು ಕೇಳಿದಾಗ ಉತ್ತರಿಸಿದ ಅವರು, ಎಚ್​ಡಿಕೆ ಅವರು ನೀತಿ ಆಯೋಗದ ಸಭೆಗೆ ಹೋಗುವುದರಿಂದ ಏನು ಪ್ರಯೋಜನ? ಕೇಂದ್ರ ಸರ್ಕಾರದ ಬಳಿಯೇ ನೀತಿಯೇ ಇಲ್ಲ. ಹಾಗಿರುವಾಗ, ಅವರು ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
Women’s Asia Cup 2024: ಅಜೇಯವಾಗಿ ಸೆಮಿಫೈನಲ್​ಗೇರಿದ ಭಾರತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + twenty =
Remember me
