ತುಮಕೂರು:ರಾಜ್ಯಾದ್ಯಂತ ಮಳೆ ಆರ್ಭಟಕ್ಕೆ ಹಲವೆಡೆ ಜನವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ನೀರು ನುಗ್ಗಿ ಉಂಟಾದ ಅವಾಂತರಕ್ಕೆ ಸಾರ್ವಜನಿಕರು ಚಿಂತೆಗೀಡಾಗಿದ್ದಾರೆ. ಈ ಸಮಸ್ಯೆಯ ಬಿಸಿ ಇದೀಗ ಜನಸಾಮಾನ್ಯರಿಗಷ್ಟೇ ಅಲ್ಲ, ಜನಪ್ರತಿನಿಧಿಗಳಿಗೂ ತಟ್ಟಿದೆ.
ಬಿಜೆಪಿ ಮುಖಂಡ, ರಾಜ್ಯಸಭೆಯ ಸದಸ್ಯ, ಖ್ಯಾತ ನಟ ನವರಸನಾಯಕ ಜಗ್ಗೇಶ್ ಕೂಡ ಈಗ ಇಂಥದ್ದೇ ಸಮಸ್ಯೆಯನ್ನು ಅನುಭವಿಸುತ್ತಿದ್ದು, ಅವರೂ ಸರ್ಕಾರಕ್ಕೆ ವಿನಂತಿ ಮಾಡಿಕೊಳ್ಳುವಂತಾಗಿದೆ. ಜಗ್ಗೇಶ್ ಅವರ ಊರು ತುಮಕೂರಿನ ಮಾಯಸಂದ್ರದಲ್ಲಿ ಈ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ನಿಮ್ಮನೆಗೂ ಅದೇ ರಸ್ತೆಯಲ್ಲಿ ಹೋಗ್ತೀರಲ್ವ, ಸ್ವಲ್ಪವೂ ಬೇಜಾರಾಗಲ್ವಾ?: ಶಾಸಕರಿಗೆ ಯುವತಿಯ ಪ್ರಶ್ನೆ
ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತವಾಗಿದೆ. ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆಕಟ್ಟಿ ನೀರು ಹರಿಯುವ ಹೊಂಡಗಳ ಮುಚ್ಚಿದ್ದಾರೆ. ಮಾಯಸಂದ್ರ ತಳಪ್ರದೇಶದಲ್ಲಿ ಇರುವ ಸುಮಾರು 20 ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತದೆ ದಯಮಾಡಿ ಕಾವೇರಿ ನೀರಾವರಿ ನಿಗಮದವರು ಗಮನ ಹರಿಸಿ ಎಂಬುದಾಗಿ ಅವರು ಟ್ವೀಟ್ ಮೂಲಕ ವಿನಂತಿ ಮಾಡಿಕೊಂಡಿದ್ದಾರೆ. ಅಲ್ಲದೆ ತಮ್ಮ ಟ್ವೀಟ್​ನಲ್ಲಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನೂ ಮೆನ್ಷನ್ ಮಾಡಿದ್ದಾರೆ.

‘ಗರ್ಲ್​ ನಂ. 166’ ಗ್ರೇಟ್ ಎಸ್ಕೇಪ್​: 7ನೇ ವಯಸ್ಸಲ್ಲಿ ನಾಪತ್ತೆ, ಹದಿನಾರನೇ ವಯಸ್ಸಲ್ಲಿ ಮನೆಗೆ ಬಂದ್ಲು!
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:ten + 15 =
Remember me
