ನವದೆಹಲಿ:ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಗೆ ಆಯ್ಕೆಯಾದ ನೂತನ ಸದಸ್ಯರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಇದೇ ವೇಳೆ ಜಗ್ಗೇಶ್​ ಅವರು ಕನ್ನಡದಲ್ಲಿಯೇ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಸಭೆಯಲ್ಲಿ ಕನ್ನಡದಲ್ಲಿಯೇ ಜಗ್ಗೇಶ್​ ಪ್ರಮಾಣವಚನ ಸ್ವೀಕರಿಸಿದ್ದು ಎಲ್ಲರ ಗಮನ ಸೆಳೆಯಿತು.ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್​​ಸಿಂಗ್ ಹಾಗೂ ಜೈರಾಮ್​​​ ರಮೇಶ್ ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಸಭೆಯಲ್ಲಿ ಶ್ರದ್ಧೆಯಿಂದಪ್ರಮಾಣವಚನ ಸಿರಿಗನ್ನಡದಲ್ಲಿರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠಕ್ಷಣ…ಹೃದಯಪೂರ್ವಕ ಧನ್ಯವಾದ@narendramodi@BJP4Karnataka@BSBommai@blsanthosh@nalinkateel@arunbpbjp ರವರಿಗೆ🙏pic.twitter.com/CCppTvZrmD
— ನವರಸನಾಯಕ ಜಗ್ಗೇಶ್ (@Jaggesh2)July 8, 2022

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರಿಸುವ ಮುನ್ನನಟ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳ ದೆಹಲಿಯಲ್ಲಿರುವ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ ನೀಡಿ ಬೃಂದಾವನ ದರ್ಶನ ಮಾಡಿದ್ದಾರೆ.
ಈ ಬಳಿಕ ಟ್ವೀಟ್​ ಮಾಡಿರುವ ಜಗ್ಗೇಶ್​, ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ ಕನ್ನಡದಲ್ಲಿ ರಾಯರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ನನ್ನ ಬದುಕಿನ ಶ್ರೇಷ್ಠ ಕ್ಷಣ ಎಂದು ಬರೆದುಕೊಂಡಿದ್ದಾರೆ.
ತಮಿಳು ನಟ ವಿಕ್ರಮ್​ಗೆ ಹೃದಯಾಘಾತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
