ಬೆಂಗಳೂರು: ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಮುಜುಗರಕ್ಕೆ ಒಳಗಾಗಿರುವ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಅವರು ತಮ್ಮ ಮನೆ ಶೋಧ ನಡೆಸಿದ ಅರಣ್ಯಾಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದಾರೆ.ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ತಮಗೆ ಜಾರಿ ಮಾಡಿರುವ ನೋಟಿಸ್ ರದ್ದುಪಡಿಸಬೇಕು ಹಾಗೂ ತಮ್ಮ ಮನೆ ಶೋಧ ನಡೆಸಿರುವುದನ್ನು ಕಾನೂನು ಬಾಹಿರ ಕ್ರಮವೆಂದು ಘೋಷಿಸಬೇಕು ಎಂದು ಕೋರಿ ನಟ ಜಗ್ಗೇಶ್ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.ಈ ಕುರಿತಂತೆ ಗುರುವಾರ ಅರ್ಜಿ ಸಲ್ಲಿಸಿರುವ ಜಗ್ಗೇಶ್ ಅವರು, ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯನ್ನು ಪ್ರತಿವಾದಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.ಹುಲಿ ಉಗುರಿನ ಪೆಂಟೆಂಡ್ ಧರಿಸಿದ ಬಗ್ಗೆ ತಮ್ಮ ಮುಂದೆ ಹಾಜರಾಗಿ ವಿವರಣೆ ನೀಡುವಂತೆ ಸೂಚಿಸಿ ಜಗ್ಗೇಶ್ ಅವರಿಗೆ ಅ.೨೫ರಂದು ಬೆಂಗಳೂರಿನ ಅರಣ್ಯ ಇಲಾಖೆ ಅಧಿಕಾರಿಗಳು ನೋಟಿಸ್ ನೀಡಿದ್ದರು. ಜತೆಗೆ, ಅ.೨೫ರಂದು ಮಲ್ಲೇಶ್ವರದಲ್ಲಿರುವ ಜಗ್ಗೇಶ್ ನಿವಾಸಕ್ಕೆ ಭೇಟಿ ನೀಡಿ ಶೋಧ ನಡೆಸಿ, ವಿವಾದಿತ ಹುಲಿ ಉಗುರಿನ ಪೆಂಡೆಂಟ್ ಪಡೆದು ತೆರಳಿದ್ದರು.ಸ್ಪಷ್ಟೀಕರಣ ನೀಡಿದ ನಂತರವೂ ನೋಟಿಸ್:ಟಿವಿಗೆ ನೀಡಿದ ಸಂದರ್ಶನವೊಂದನ್ನು ಆಧರಿಸಿ ಚಿನ್ನಲೇಪಿತ ಹುಲಿ ಉಗುರಿನ ಪೆಂಡೆಂಟ್ ಧರಿಸುವ ಮೂಲಕ ವನ್ಯ ಜೀವಿ ಸಂರಕ್ಷಣಾ ಕಾಯ್ದೆ-೧೯೭೨ ಅನ್ನು ಉಲ್ಲಂಘಿಸಿರುವುದಾಗಿ ತಮ್ಮ ವಿರುದ್ಧ ಸುಳ್ಳು ಮತ್ತು ದಾರಿ ತಪ್ಪಿಸುವ ಪ್ರಚಾರ ಮಾಡಲಾಗಿದೆ. ಆ ಪ್ರಚಾರವನ್ನು ಒಳಗೊಂಡ ವಿಡಿಯೋ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗಿದೆ. ಅದರ ಬೆನ್ನಲ್ಲೇ ತಮ್ಮ ಮೇಲಿನ ಆರೋಪಗಳು ಸುಳ್ಳು ಎಂದು ಖುದ್ದು ತಾವೇ ೨೦೨೩ರ ಅ.೨೧ರಂದು ಸ್ಪಷ್ಟೀಕರಣ ನೀಡಿದ್ದೇನೆ ಎಂದು ಅವರು ಅರ್ಜಿಯಲ್ಲಿ ವಿವರಿಸಿದ್ದಾರೆ.ಸ್ಪಷ್ಟೀಕರಣ ನೀಡಿದ ನಂತರವೂ ಅ.೨೫ರಂದು ನೋಟಿಸ್ ಜಾರಿಗೊಳಿಸಿ, ಅರಣ್ಯಾಧಿಕಾರಿಗಳ ಮುಂದೆ ಹಾಜರಾಗಲು ನೋಟಿಸ್ ನೀಡಲಾಗಿದೆ. ನೋಟಿಸ್‌ಗೆ ಉತ್ತರಿಸುವ ಮೊದಲೇ ಬೆಂಗಳೂರಿನ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೇರಿ ೧೪ ಮಂದಿ ಅಧಿಕಾರಿಗಳು ಮಲ್ಲೇಶ್ವರದ ತಮ್ಮ ಮನೆಗೆ ಭೇಟಿ ನೀಡಿ ಶೋಧನೆ ನಡೆಸಿದ್ದಾರೆ. ಇದು ಸಂವಿಧಾನದ ಪರಿಚ್ಛೇದ ೨೧ರ ಅಡಿಯಲ್ಲಿ ತಮಗೆ ದೊರೆತಿರುವ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಅರಣ್ಯ ಇಲಾಖೆಯ ಅಧಿಕಾರಿಗಳ ಈ ಕ್ರಮ ಕಾನೂನು ಬಾಹಿರವೆಂದು ಘೋಷಿಸಬೇಕು ಮತ್ತು ತಮ್ಮ ವಿರುದ್ಧದ ನೋಟಿಸ್ ರದ್ದುಪಡಿಸಬೇಕು ಎಂದು ಜಗ್ಗೇಶ್ ಅರ್ಜಿಯಲ್ಲಿ ಕೋರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 2 =
Remember me
