ಬೆಂಗಳೂರು:ಆಸೆ ಧಾರಾವಾಹಿ ಶೂಟಿಂಗ್ ವೇಳೆ  ನಟ ಮಂಡ್ಯ ರಮೇಶ್​ ಅವರಿಗೆ ತೀವ್ರಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಖಾಸಗಿವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಆಸೆ ಸೀರಿಯಲ್ ನಲ್ಲಿ ಮಂಡ್ಯ ರಮೇಶ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಕಲ್ಲು ಕ್ವಾರಿಯಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ರಮೇಶ್ ಕಾಲು ಜಾರಿ ಬಿದ್ದಿದ್ದಾರಂತೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಎರಡು ಆಪರೇಷನ್ ಮಾಡಿದ್ದಾರೆ.
ಕಲ್ಲು ಕ್ವಾರಿಯಲ್ಲಿ ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು ವೈದ್ಯರು ಕಾಲಿಗೆ ಎರಡು ಆಪರೇಷನ್ ಮಾಡಿದ್ದಾರೆ ಎಂದು ವರದಿಯಾಗಿದೆ. ಶೂಟಿಂಗ್​ ಸ್ಥಳದಲ್ಲಿ ಮೇಲಿಂದ ಬಿದ್ದ ಕಾರಣ ಮುಂಗೈ ಮತ್ತು ಬಲಗಾಲಿಗೆ ತೀವ್ರಗಾಯವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ.
ಸದ್ಯ ಚಿಕಿತ್ಸೆ ಪಡೆದಿರುವ ಮಂಡ್ಯ ರಮೇಶ್ ಅವರಿಗೆ ಒಂದು ತಿಂಗಳ ಕಾಲ ರೆಸ್ಟ್ ತಗೆದುಕೊಳ್ಳುವಂತೆ ವೈದ್ಯರು ತಿಳಿಸಿದ್ದಾರೆ.
ರಕ್ತದಾನ, ನೇತ್ರದಾನದಂತೆ ಮಲದಾನ; ಮಾನವನ ತ್ಯಾಜ್ಯವನ್ನು ಮಾರಿ ಕೋಟಿ..ಕೋಟಿ ಸಂಪಾದಿಸಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
